Homeಮುಖಪುಟ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತ? ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ -‘ಸಾಮ್ನಾ’

- Advertisement -
- Advertisement -

ಮಹಾರಾಷ್ಟ್ರವನ್ನು ಕಡೆಗಣಿಸಿದ್ದಕ್ಕಾಗಿ ಮತ್ತು ಚುನಾವಣೆ ಇರುವ ರಾಜ್ಯಗಳ ಮೇಲೆ ಮಾತ್ರ ಗಮನಹರಿಸಿದ್ದಕ್ಕಾಗಿ ಶಿವಸೇನೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್-2021 ವಿರುದ್ಧ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವರು ಡಿಜಿಟಲ್ ಕುದುರೆ ಸವಾರಿ ಮಾಡುತ್ತ, ಕನಸುಗಳ ಸಾರ್ವಜನಿಕ ಪ್ರವಾಸ’ ಕೈಗೊಂಡಿದ್ದಾರೆ ಎಂದು ಅದು ಲೇವಡಿ ಮಾಡಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಮತ್ತು ಪಶ್ಚಿಮ ಬಂಗಾಳಗಳು ನಿರ್ಮಲಾ ಸೀತಾರಾಮನ್ ಅವರಿಂದ ಭಾರಿ ಮೂಲಸೌಕರ್ಯ ಯೋಜನೆಗಳನ್ನು ಪಡೆದಿವೆ ಎಂದು ಶಿವಸೇನೆಯ ಮುಖವಾಣಿ “ಸಾಮ್ನಾ’ ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಈ ರಾಜ್ಯಗಳಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

“ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತವಾಗಿದೆ? ಈ ಮತದಾನದ ವ್ಯಾಪ್ತಿಯ ರಾಜ್ಯಗಳಿಗೆ ಸಾಕಷ್ಟು ಯೋಜನೆಗಳನ್ನು ವಿತರಿಸಿದ ಕೇಂದ್ರ ಸರ್ಕಾರವು, ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ” ಎಂದು ಸಂಪಾದಕೀಯದಲ್ಲಿ ಟೀಕಿಸಿದೆ.

ರಾಜ್ಯದ ಬಗ್ಗೆ ಬಜೆಟ್ ಪ್ರತೀಕಾರದ ಮನೋಭಾವವನ್ನು ತೋರಿಸಿದೆ ಎಂದು ಅದು ಆರೋಪಿಸಿದೆ. ಸೀತಾರಾಮನ್ ಕೆಲವು ರಾಜ್ಯಗಳಿಗಷ್ಟೇ ಅಲ್ಲ, ಇಡೀ ದೇಶದ ಹಣಕಾಸು ಸಚಿವರು ಎಂದು ಸಂಪಾದಕಿತದಲ್ಲಿ ನೆನಪಿಸಲಾಗಿದೆ. “ನಾಗ್ಪುರ ಮತ್ತು ನಾಸಿಕ್ ಮೆಟ್ರೋ ಯೋಜನೆಗಳ ಪ್ರಸ್ತಾಪ ಮಾಡಿದ್ದರ ಹೊರತುಪಡಿಸಿ, ಮುಂಬೈ ಮತ್ತು ಮಹಾರಾಷ್ಟ್ರಕ್ಕೆ ಏನನ್ನೂ ನೀಡಿಲ್ಲ” ಎಂದು ಅದು ಹೇಳಿದೆ. “ಈ ತಾರತಮ್ಯ ಏಕೆ? ದೇಶದ ಹಣಕಾಸು ಇಲಾಖೆ ಇಡೀ ದೇಶವನ್ನು ಪರಿಗಣಿಸಬೇಕು” ಎಂದು ಸಂಪಾದಕೀಯ ಆಗ್ರಹಿಸಿದೆ.

ಸಾಂಕ್ರಾಮಿಕ ಪೀಡಿತ ಕೈಗಾರಿಕೆಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ ಎಂದು ಸಂಪಾದಕೀಯವು ಹೇಳಿದೆ. “ಕೋವಿಡ್ -19 ಕಾರಣಕ್ಕೆ ಸಾವಿರಾರು ಕೈಗಾರಿಕೆಗಳಿಗೆ ನಷ್ಟವಾಗಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡರು, ನಿರುದ್ಯೋಗ ಹೆಚ್ಚಾಗಿದೆ. ಆದರೆ ಹಣಕಾಸು ಸಚಿವರು ಈ ವಿಷಯದಲ್ಲಿ ಏನನ್ನೂ ಹೇಳಿಲ್ಲ” ಎಂದು ಅದು ಟೀಕಿಸಿದೆ.

ಸಾಮಾನ್ಯ ಜನರು, ತಮ್ಮ ಜೇಬುಗಳಿಗೆ ಎಷ್ಟು ಬಂದಿತು ಎಂದು ಕಾಳಜಿ ವಹಿಸುತ್ತಾರೆ. “ಸ್ವಾವಲಂಬಿ ಭಾರತ” ಮತ್ತು ‘ಸ್ಟಾರ್ಟ್-ಅಪ್’ನಂತಹ “ಹಳೆಯ-ಶೈಲಿಯ ಗುಳ್ಳೆಗಳು” ಮತ್ತು “ಮೂಲಸೌಕರ್ಯ ಮತ್ತು ಕೃಷಿ ಅಭಿವೃದ್ಧಿ”ಯಂತಹ ಕೆಲವು ಹೊಸ “ಟ್ರಿಕ್ ಪದಗಳನ್ನು” ಹೊರತುಪಡಿಸಿ, ಈ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಏನೂ ಸಿಕ್ಕಿಲ್ಲ ಎಂದು ಸಾಮ್ನಾ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಿವಸೇನೆಯ ಪ್ರಕಾರ, ಬಜೆಟ್‌ನ “ಕಾಗದದ ಕುದುರೆಗಳು” ಕೇವಲ “ಡಿಜಿಟಲ್ ಕುದುರೆಗಳು” ಆಗಲಿವೆ. ಬಾವಿಯಲ್ಲಿ ಒಂದು ಹನಿ ನೀರು ಕೂಡ ಇಲ್ಲದಿದ್ದರೂ, ಜನರಿಗೆ ಸಾಕಷ್ಟು ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.


ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...