Homeಮುಖಪುಟಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್...

ಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್ ಖೇರಾ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, 2024ರ ವಿಧಾನಸಭಾ ಚುನಾವಣೆಗೆ ಹಿಂದಿನ ಐದು ತಿಂಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪ್ರಶ್ನೆಗಳು ಬಹಳ ಸ್ಪಷ್ಟವಾಗಿವೆ… 2019 ರಿಂದ 2024 ರವರೆಗಿನ ಐದು ವರ್ಷಗಳಲ್ಲಿ, ಮಹಾರಾಷ್ಟ್ರದಲ್ಲಿ 31 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಹೀಗಿರುವಾಗ, ಕೇವಲ ಐದು ತಿಂಗಳಲ್ಲಿ 41 ಲಕ್ಷ ಹೊಸ ಮತದಾರರನ್ನು ಸೇರಿಸಲು ಹೇಗೆ ಸಾಧ್ಯ? ಎಂದು ಖೇರಾ ಕೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಯ ನಂತರ ಮತದಾನದ ಶೇಕಡಾವಾರು ಪ್ರಮಾಣ ಭಾರೀ ಏರಿಕೆಯಾದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಜೆ 5 ಗಂಟೆಗೆ ಶೇ. 58.22ರಷ್ಟು ಮತದಾನ ಪ್ರಮಾಣ ತೋರಿಸಲಾಗಿತ್ತು. ಅಂತಿಮ ಮತದಾನ ಪ್ರಮಾಣ ಶೇ. 66ರಷ್ಷು ಆಗಿತ್ತು. ಹಾಗಿದ್ದರೆ, ಒಂದು ಗಂಟೆಯ ಅವಧಿಯಲ್ಲಿ ಶೇ. 8 ರಷ್ಟು ಹೆಚ್ಚಳ ಹೇಗೆ ಸಾಧ್ಯ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅದೇ 12,000 ಬೂತ್‌ಗಳಿಂದ ಹೊಸ ಮತದಾರರು ಬರಲು ಹೇಗೆ ಸಾಧ್ಯ?” ಎಂದು ಖೇರಾ ಕೇಳಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಏಕೆ ತೆಗೆದುಹಾಕಲಾಯಿತು? ಎಂದು ಪ್ರಶ್ನಿಸಿದ ಪವನ್ ಖೇರಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದ ರಾಹುಲ್ ಗಾಂಧಿಯವರ ಆರೋಪಗಳನ್ನು “ಕಾನೂನಿನ ನಿಯಮಕ್ಕೆ ಅವಮಾನ” ಎಂದು ಚುನಾವಣಾ ಆಯೋಗ ಶನಿವಾರ ಬಣ್ಣಿಸಿದೆ.

“ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧ ಎತ್ತಲಾದ ಆಧಾರರಹಿತ ಆರೋಪಗಳು ಕಾನೂನಿನ ನಿಯಮಕ್ಕೆ ವಿರುದ್ಧವಾಗಿವೆ. ಚುನಾವಣಾ ಆಯೋಗವು ಡಿಸೆಂಬರ್ 24, 2024 ರಂದು ಕಾಂಗ್ರೆಸ್‌ಗೆ ನೀಡಿದ ಉತ್ತರದಲ್ಲಿ ಈ ಎಲ್ಲಾ ಸಂಗತಿಗಳು ಇವೆ. ಅಲ್ಲದೆ ಆಯೋಗದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದೆ. ಮತ್ತೆ ಮತ್ತೆ ಅನುಮಾನಗಳನ್ನು ವ್ಯಕ್ತಪಡಿಸುವಾಗ ಈ ಎಲ್ಲಾ ಸಂಗತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೋರುತ್ತದೆ,” ಎಂದು ಚುನಾವಣಾ ಆಯೋಗ ಹೇಳಿದೆ.

“ಯಾರಾದರೂ ತಪ್ಪು ಮಾಹಿತಿಯನ್ನು ಹರಡಿದರೆ, ಅದು ಕಾನೂನಿನ ಬಗ್ಗೆ ಅಗೌರವ ತೋರುವುದಲ್ಲದೆ, ಅವರ ಸ್ವಂತ ರಾಜಕೀಯ ಪಕ್ಷದಿಂದ ನೇಮಕಗೊಂಡ ಸಾವಿರಾರು ಪ್ರತಿನಿಧಿಗಳಿಗೆ ಅಪಖ್ಯಾತಿ ತರುತ್ತದೆ. ಚುನಾವಣೆಯ ಸಮಯದಲ್ಲಿ ದಣಿವರಿಯದೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ ಲಕ್ಷಾಂತರ ಚುನಾವಣಾ ಸಿಬ್ಬಂದಿಯನ್ನು ಅವಮಾನಿಸದಂತಾಗುತ್ತದೆ. ಮತದಾರರ ಪ್ರತಿಕೂಲ ತೀರ್ಪಿನ ನಂತರ, ಚುನಾವಣಾ ಆಯೋಗವು ರಾಜಿಯಾಗಿದೆ ಎಂದು ಹೇಳುವ ಮೂಲಕ ಅದೇ ವಿಷಯವನ್ನು ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುವುದು ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದಿದೆ.

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...