Homeಮುಖಪುಟ'ರಾಜ್ಯ ಸರ್ಕಾರ ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು..?' ಶಂಭು ಗಡಿ ದಿಗ್ಬಂಧನಕ್ಕೆ ಹರ್ಯಾಣ ವಿರುದ್ಧ ಸುಪ್ರೀಂ ಆಕ್ರೋಶ

‘ರಾಜ್ಯ ಸರ್ಕಾರ ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು..?’ ಶಂಭು ಗಡಿ ದಿಗ್ಬಂಧನಕ್ಕೆ ಹರ್ಯಾಣ ವಿರುದ್ಧ ಸುಪ್ರೀಂ ಆಕ್ರೋಶ

- Advertisement -
- Advertisement -

ರಾಜ್ಯ ಸರ್ಕಾರ ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹರಿಯಾಣ ಸರ್ಕಾರವನ್ನು ಪ್ರಶ್ನಿಸಿದೆ. ಫೆಬ್ರವರಿ 13 ರಿಂದ ರೈತರು ಮೊಕ್ಕಾಂ ಹೂಡಿರುವ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಸ್ಥಾಪಿಸಲಾದ ಬ್ಯಾರಿಕೇಡಿಂಗ್ ಅನ್ನು ತೆಗೆದುಹಾಕುವಂತೆ ಕೋರ್ಟ್‌ ನಿರ್ದೇಶಿಸಿದೆ.

ಫೆಬ್ರವರಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಗೆ ತೆರಳುವುದಾಗಿ ಘೋಷಿಸಿದಾಗ ಹರಿಯಾಣ ಸರ್ಕಾರವು ಅಂಬಾಲಾ-ನವದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿತ್ತು. ಬೆಳೆಗಳಿಗೆ

ಏಳು ದಿನಗಳೊಳಗೆ ಹೆದ್ದಾರಿಯನ್ನು ತೆರೆಯುವಂತೆ ಜುಲೈ 10 ರ ಹೈಕೋರ್ಟ್‌ನ ಆದೇಶದ ವಿರುದ್ಧ ರಾಜ್ಯವು ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯಲ್ಲಿದೆ ಎಂದು ಹರಿಯಾಣ ಸರ್ಕಾರದ ವಕೀಲರು ಹೇಳಿದ ನಂತರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಈ ಆದೇಶ ನೀಡಿದೆ.

ಫೆ.22 ರಂದು ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಬೆಳೆಗಳಿಗೆ ಎಂಎಸ್‌ಪಿ ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಮೇಲೆ ಪ್ರತಿಭಟನಾ ನಿರತ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಹೆದ್ದಾರಿಯಲ್ಲಿ ನಿಂತಿದ್ದವು.

“ರಾಜ್ಯವು ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು? ಟ್ರಾಫಿಕ್ ನಿಯಂತ್ರಿಸುವುದು ಅದರ ಕರ್ತವ್ಯವಾಗಿದೆ. ನಾವು ಅದನ್ನು ತೆರೆಯುವಂತೆ ಸೂಚಿಸುತ್ತೇವೆ” ಎಂದು ನ್ಯಾಯವಾದಿ ಭೂಯಾನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನ್ಯಾಯಪೀಠಕ್ಕೆ ತಿಳಿಸಿದ ನಂತರ ಹೇಳಿದರು.

ನ್ಯಾಯಮೂರ್ತಿ ಕಾಂತ್ ಅವರು ರಾಜ್ಯದ ಪರ ವಕೀಲರಿಗೆ, “ನೀವು ಹೈಕೋರ್ಟ್ ಆದೇಶವನ್ನು ಏಕೆ ಪ್ರಶ್ನಿಸಲು ಬಯಸುತ್ತೀರಿ? ರೈತರೂ ಈ ದೇಶದ ಪ್ರಜೆಗಳು. ಅವರಿಗೆ ಆಹಾರ ಮತ್ತು ಉತ್ತಮ ವೈದ್ಯಕೀಯ ಸೇವೆ ನೀಡಿ. ಅವರು ಬರುತ್ತಾರೆ, ಘೋಷಣೆಗಳನ್ನು ಕೂಗುತ್ತಾರೆ ಮತ್ತು ಹಿಂತಿರುಗುತ್ತಾರೆ” ವಾಗ್ದಂಡೆನೆ ನೀಡಿತು.

‘ಅವರು ರಸ್ತೆ ಮೂಲಕ ಪ್ರಯಾಣಿಸುತ್ತಾರೆ’ ಎಂದು ವಕೀಲರು ಉತ್ತರಿಸಿದರು. ‘ಹಾಗಾದರೆ, ಅವರೂ ಕಷ್ಟಗಳನ್ನು ಅನುಭವಿಸುತ್ತಿರಬೇಕು” ಎಂದು ಪೀಠ ಹೇಳಿತು.

ಬಾಕಿ ಉಳಿದಿರುವ ವಿಚಾರದಲ್ಲಿ ನಂತರದ ಬೆಳವಣಿಗೆಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರತಿಭಟನಾ ನಿರತ ರೈತರು ಮತ್ತು ಹರಿಯಾಣ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯ ಸಂದರ್ಭದಲ್ಲಿ ರೈತ ಶುಭಕರನ್ ಸಿಂಗ್ ಅವರ ಸಾವಿನ ತನಿಖೆಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವ ಮಾರ್ಚ್ 7 ರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹರಿಯಾಣ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಏಪ್ರಿಲ್ 1 ರಂದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಫೆಬ್ರವರಿ 21 ರಂದು ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವನ್ನಪ್ಪಿದ್ದರು ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಕೆಲವು ಪ್ರತಿಭಟನಾ ನಿರತ ರೈತರು ಗಡಿಯಲ್ಲಿ ನಿರ್ಮಿಸಲಾದ ಬ್ಯಾರಿಕೇಡ್‌ಗಳತ್ತ ಸಾಗಲು ಪ್ರಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ದೆಹಲಿಗೆ ಸಾಗುತ್ತಿದ್ದ ಮೆರವಣಿಗೆಯನ್ನು ತಡೆಯುವಾಗ ಈ ಘಟನೆ ಸಂಭವಿಸಿದೆ. ಜುಲೈ 10 ರಂದು, ಶಂಭು ಗಡಿಯಲ್ಲಿನ ತಡೆಗೋಡೆಯನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ಹರ್ಯಾಣ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತು.

ಯಾವುದೇ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯ ಸರ್ಕಾರ ಕಾನೂನು ಪ್ರಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬಹುದು ಎಂದೂ ನ್ಯಾಯಾಲಯ ಹೇಳಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪಂಜಾಬ್ ಸರ್ಕಾರಕ್ಕೆ ಇದೇ ರೀತಿಯ ನಿರ್ದೇಶನವನ್ನು ನೀಡಿದ್ದು, ಅದರ ಬದಿಯಲ್ಲಿರುವ ಯಾವುದೇ ಬ್ಯಾರಿಕೇಡಿಂಗ್ ಅನ್ನು ಸಹ ತೆಗೆದುಹಾಕಬೇಕು ಎಂದು ಹೇಳಿದೆ.

ಇದನ್ನೂ ಓದಿ; ರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ : ಶಂಭು ಗಡಿ ತೆರೆಯುವಂತೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘6 ತಿಂಗಳಲ್ಲಿ ನನ್ನ ಪ್ರಾಣ ತೆಗೆಯಲು ಇದು 7ನೇ ಯತ್ನ!’: ಕೋರ್ಟ್-ಪೋಲಿಸ್ ಇಲಾಖೆ ಹಾಗೂ ಬಿಜೆಪಿ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ!

ಕೋಲ್ಕತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತಾದ ಕಾಳಿಘಾಟ್ ನಿವಾಸದ ಹೊರಭಾಗದಲ್ಲಿ ಶುಕ್ರವಾರ ನಡುರಾತ್ರಿ ಭಾರಿ ಹೈಡ್ರಾಮಾವೊಂದು ಸಂಭವಿಸಿದೆ. 2...

́ನಿಮ್ಮ ದೀಪಾವಳಿ ವೀಕೆಂಡ್ ಹಾಳುಮಾಡಲ್ಲ, ಸೋಮವಾರ ಉತ್ತರ ಕೊಡ್ತೀವಿ!’: ಎಥನಾಲ್ ಮಿಶ್ರಣ ಸ್ಪಷ್ಟೀಕರಣ ನೀಡಿದ ತೈಲ ಸಂಸ್ಥೆಗಳಿಗೆ ಸಚಿವ ರಿಜ್ವಾನ್ ಅರ್ಷಾದ್ ಟಾಂಗ್!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20 ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ...

ಯೂಟರ್ನ್ ಹೊಡೆದ ಚುನಾವಣಾ ಆಯೋಗ : SIR ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವು

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವಾಗಿದೆ. ಎಸ್‌ಐಆರ್ ವೇಳೆ ಡಿಲೀಟ್ ಪಟ್ಟಿಗೆ (ಎಎಸ್‌ಡಿಡಿ) ಬಿದ್ದ ಅರ್ಹ ಮತದಾರರು ತಮ್ಮ ಹಕ್ಕು ಮರಳಿ...

‘ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!’: ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೊಂದಲಕ್ಕೀಡುಮಾಡುವ ಬದಲು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಇವಿಎಂ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ...

‘ಅಮೆರಿಕ ಅಧ್ಯಕ್ಷರ ಹತ್ಯೆ ಮಾಡುವಂತೆ ಧ್ವನಿ ಕೇಳಿಸುತ್ತಿತ್ತು’: ವೈಟ್ ಹೌಸ್ ಬಳಿ ಮಾರಕಾಸ್ತ್ರಗಳಿದ್ದ ಕಾರಿನೊಂದಿಗೆ ವೆನಿಜುವೆಲ್ಲಾ ಪ್ರಜೆ ಬಂಧನ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ 26 ವರ್ಷದ ರೋನಿ ಯೋರ್ಡ್ರಿಕ್ಸ್ ಗುವಾನಿಪಾ ಚ್ರಿನೋಸ್ ಎಂಬ ವೆನಿಜುಎಲ್ಲಾ ಮೂಲದ ವಲಸಿಗನನ್ನು ಯುಎಸ್ ಸೀಕ್ರೆಟ್ ಸರ್ವಿಸ್...

‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...

ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ಪಡೆಯುವುದು ಫಲಾನುಭವಿಗಳ ಹಕ್ಕಲ್ಲ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟನೆ

'ಗೃಹಲಕ್ಷ್ಮಿ' ಒಂದು ಕಲ್ಯಾಣ (ಪರೋಪಕಾರಿ) ಯೋಜನೆಯಾಗಿದ್ದು, ಇದರ ಅನುಷ್ಠಾನವು ಹೆಚ್ಚಾಗಿ ಆಡಳಿತಾತ್ಮಕ ಅಗತ್ಯತೆಗಳನ್ನು ಅವಲಂಬಿಸಿರುತ್ತದೆ. ಹಾಗಾಗಿ, ಈ ಯೋಜನೆಯ ಫಲಾನುಭವಿಗಳು ಇದನ್ನು ತಮ್ಮ ಹಕ್ಕು ಎಂದು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನ್ಯಾಯಾಂಗದ ಹಸ್ತಕ್ಷೇಪದ...