Homeಮುಖಪುಟನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ಮೋದಿ ಏಕೆ ಅಡಗಿಕೂತಿದ್ದಾರೆ? - ರಾಹುಲ್

ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ಮೋದಿ ಏಕೆ ಅಡಗಿಕೂತಿದ್ದಾರೆ? – ರಾಹುಲ್

“ಪ್ರಧಾನಿ ಏಕೆ ಮೌನವಾಗಿದ್ದಾರೆ? ಅವರು ಯಾಕೆ ಅಡಗಿದ್ದಾರೆ? ಸಾಕು ಇನ್ನು ಸಾಕು. ಏನಾಯಿತು ಎಂದು ನಾವು ತಿಳಿದುಕೊಳ್ಳಬೇಕು. ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಭೂಮಿಯನ್ನು ತೆಗೆದುಕೊಳ್ಳಲು ಎಷ್ಟು ಧೈರ್ಯ? ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಭೂಮಿಯನ್ನು ತೆಗೆದುಕೊಳ್ಳಲು ಎಷ್ಟು ಧೈರ್ಯ? ಮೋದಿ ಏಕೆ ಅಡಗಿಕೂತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಭಾರತೀಯ ಮತ್ತು ಚೀನಾದ ಸೈನ್ಯಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ರಾಹುಲ್ ಆಗ್ರಹಿಸಿದ್ದಾರೆ.

ಪಶ್ಚಿಮ ಹಿಮಾಲಯದ ಭಾರತ ಮತ್ತು ಚೀನಾ ನಡುವೆ ವಾರಗಳವರೆಗೆ ನಡೆದ ವಿವಾದದ ತೀವ್ರ ಉಲ್ಬಣದಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಕಮಾಂಡಿಂಗ್ ಆಫೀಸರ್ ಸೇರಿದಂತೆ ತನ್ನ 20 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಹೇಳಿದೆ.

“ಪ್ರಧಾನಿ ಏಕೆ ಮೌನವಾಗಿದ್ದಾರೆ? ಅವರು ಯಾಕೆ ಅಡಗಿದ್ದಾರೆ? ಸಾಕು ಇನ್ನು ಸಾಕು. ಏನಾಯಿತು ಎಂದು ನಾವು ತಿಳಿದುಕೊಳ್ಳಬೇಕು. ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಭೂಮಿಯನ್ನು ತೆಗೆದುಕೊಳ್ಳಲು ಎಷ್ಟು ಧೈರ್ಯ? ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ಕೂಡ ರಾಹುಲ್ ಗಾಂಧಿಯವರು “ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು ಮತ್ತು ಸೈನಿಕರನ್ನು ನೆನೆದು ನಾನು ಅನುಭವಿಸುವ ನೋವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಅವರ ಎಲ್ಲ ಪ್ರೀತಿಪಾತ್ರರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಯೋಧರ ಹತ್ಯೆ ಬಗ್ಗೆ ಪ್ರಧಾನಿ ಮೌನವೇಕೆ? ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಇದನ್ನೂಓದಿ: ಕರ್ನಲ್ ಸಂತೋಷ್ ಬಾಬು ಪೋಷಕರ ಹೇಳಿಕೆ: ನಮ್ಮ ಮಗ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಕ್ಕೆ ಹೆಮ್ಮೆಯಿದೆ

ಇದನ್ನೂಓದಿ: ಲಡಾಖ್ ಘರ್ಷಣೆ: 20 ಭಾರತೀಯ ಸೈನಿಕರ ಹತ್ಯೆ, ನಾಲ್ವರ ಸ್ಥಿತಿ ಗಂಭೀರ 

ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...