Homeಮುಖಪುಟನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? - ರಾಹುಲ್ ಗಾಂಧಿ...

ನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? – ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

“ಕೆಲವರು ಬದುಕುಳಿಯಲೂ ಹೆಣಗುತ್ತಿರುವಾಗ ಅದಾನಿ ₹12 ಲಕ್ಷ ಕೋಟಿ ಗಳಿಸಿ ಶೇ. 50 ರಷ್ಟು ತಮ್ಮ ಸಂಪತ್ತನ್ನು ಹೆಚ್ಚಿಸಿಕೊಂಡಿದ್ದಾರೆ. ಇದು ಹೇಗೆ ಎಂದು ಹೇಳಬಲ್ಲಿರಾ?” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “2020ರಲ್ಲಿ ನಿಮ್ಮ ಸಂಪತ್ತು ಎಷ್ಟು ಹೆಚ್ಚಾಗಿದೆ? ಶೂನ್ಯ. ನೀವು ಬದುಕಲು ಹೆಣಗಾಡುತ್ತಿದ್ದೀರಿ; ಆದರೆ ಅವರು (ಅದಾನಿ) ₹12 ಲಕ್ಷ ಕೋಟಿ ರೂ. ಗಳಿಸಿ ತಮ್ಮ ಸಂಪತನ್ನು ಶೇಕಡಾ 50ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಏಕೆ ಎಂದು ಹೇಳಬಲ್ಲೀರಾ?” ಎಂದು ಬ್ಲೂಮ್‌ಬರ್ಗ್ ವರದಿಯೊಂದನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬ್ಲೂಮ್‌ಬರ್ಗ್ ವರದಿಯ ಪ್ರಕಾರ, 2021ರಲ್ಲಿ ಸಂಪತ್ತು ಗಳಿಕೆಯಲ್ಲಿ ಇಡೀ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಅದಾನಿ ₹12 ಲಕ್ಷ ಕೋಟಿ ರೂ. ಗಳಿಸಿದ್ದಾರೆ. ಇದರೊಂದಿಗೆ ಒಟ್ಟು ನಿವ್ವಳ ಆಸ್ತಿಮೌಲ್ಯ 50 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಏರಿಕೆ ಕಂಡಿದೆ. ಈ ಪಟ್ಟಿಯಲ್ಲಿ ಅಮೆಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಹಾಗೂ ಟೆಸ್ಲಾ ಸಿಇಒ ಎಲನ್ ಮಸ್ಕ್ ಅವರನ್ನೇ ಹಿಂದಿಕ್ಕಿದ್ದಾರೆ.


ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

0
ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿ ಅಖಿಲೇಶ್ ಮಿಶ್ರಾ ದಿ ಐರಿಶ್ ಟೈಮ್ಸ್‌ನ ಸಂಪಾದಕೀಯಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಪಕ್ಷಗಳನ್ನು ಟೀಕಿಸಿ, ಮೋದಿಯನ್ನು ಶ್ಲಾಘಿಸಿ ಪೋಸ್ಟ್‌ ಮಾಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ದಿ ಐರಿಶ್ ಟೈಮ್ಸ್‌ನ ಸಂಪಾದಕೀಯದಲ್ಲಿ ಪ್ರಧಾನಿ ನರೇಂದ್ರ...