Homeಸಿನಿಮಾಕ್ರೀಡೆಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ...

ಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ ಉತ್ತರ ನೀಡಿದ ನೀರಜ್ ಚೋಪ್ರಾ ತಾಯಿ

- Advertisement -
- Advertisement -

ಭಾನುವಾರ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯನಾಗಿರುವ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. 25 ವರ್ಷ ವಯಸ್ಸಿನ ಚೋಪ್ರಾ ಫೈನಲ್ ಸುತ್ತಿನಲ್ಲಿ 88.17 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಅಸಾಧಾರಣ ಸಾಧನೆಯೊಂದಿಗೆ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದರು. ಈವೆಂಟ್‌ನಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ ಎರಡನೇ ಸ್ಥಾನ ಗಳಿಸಿದ್ದಾರೆ.

ಪಾಕಿಸ್ತಾನದ ಪ್ರತಿಸ್ಪರ್ಧಿ ವಿರುದ್ಧ ಭಾರತೀಯ ಅಥ್ಲೆಟ್‌ವೊಬ್ಬನ ಗೆಲುವನ್ನು ಕೆಲವರು ಪಾಕ್ ವಿರುದ್ಧದ ಯುದ್ಧದ ಗೆಲುವು ಎಂಬಂತೆ ಬಿಂಬಿಸಿದ್ದರು. ಆದರೆ, ಚೋಪ್ರಾ ಅವರ ತಾಯಿ ಸರೋಜ್ ದೇವಿ ಅವರು, ”ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮಗ ಪಾಕಿಸ್ತಾನಿ ಎದುರಾಳಿಯ ವಿರುದ್ಧ ಗೆದ್ದ ಬಗ್ಗೆ ವರದಿಗಾರ ಕೇಳಿದ ಪ್ರಶ್ನೆಗೆ ನೀಡಿರುವ ಉತ್ತರ ಎಲ್ಲರ ಹೃದಯವನ್ನು ತಟ್ಟಿದೆ.

ನೀರಜ್ ಚೋಪ್ರಾ ಅವರ ತಾಯಿ ತನ್ನ ಮಗನ ಗಮನಾರ್ಹ ಸಾಧನೆಯ ನಂತರ ಮಾಧ್ಯಮಗಳಿಗೆ ನೀಡಿರುವ ಸಂದರ್ಶನದ ವೀಡಿಯೊ ಇದೀಗ ಭಾರೀ ವೈರಲ್ ಆಗಿದೆ.

”ಪಾಕಿಸ್ತಾನದ ಅಥ್ಲೇಟ್ ಅರ್ಷದ್ ವಿರುದ್ಧ ತಮ್ಮ ಮಗನ ವಿಜಯದ ಬಗ್ಗೆ ತಾವೆಷ್ಟು ಭಾವುಕರಾಗಿದ್ದೀರಿ?” ಎಂದು ವರದಿಗಾರ ಕೇಳಿದಾಗ, ”ನೋಡಿ, ಎಲ್ಲರೂ ಮೈದಾನದಲ್ಲಿ ಆಡಲು ಬಂದಿದ್ದಾರೆ. ಒಬ್ಬರು ಅಥವಾ ಇನ್ನೊಬ್ಬರು ಖಂಡಿತವಾಗಿಯೂ ಗೆಲ್ಲುತ್ತಾರೆ. ಹಾಗಾಗಿ ಇಲ್ಲಿ ಪಾಕಿಸ್ತಾನ ಅಥವಾ ಹರ್ಯಾಣದವರು ಎಂಬ ಪ್ರಶ್ನೆಯೇ ಇಲ್ಲ. ಇದು ಬಹಳ ಸಂತೋಷದ ವಿಷಯವಾಗಿದೆ. ಆ ಪಾಕಿಸ್ಥಾನಿ ಗೆದ್ದಿದ್ದರೂ ಬಹಳ ಸಂತೋಷವಾಗುತ್ತಿತ್ತು” ಎಂದು ಸರೋಜ್ ದೇವಿ ಹೇಳಿದ್ದಾರೆ.

”ನೀರಜ್ ಒಬ್ಬ ಪಾಕಿಸ್ತಾನಿ ಅಥ್ಲೇಟ್‌ನನ್ನು ಸೋಲಿಸಿ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ?” ಎಂದು ವರದಿಗಾರರು ನೀರಜ್ ಚೋಪ್ರಾ ಅವರ ತಾಯಿ ಬಳಿ ಕೇಳಿದರು. ಅದಕ್ಕೆ ಅವರು,”ಒಬ್ಬ ಆಟಗಾರನು ಆಟಗಾರ ಅಷ್ಟೇ. ಅವನು ಎಲ್ಲಿಂದ ಬಂದಿದ್ದಾನೆ ಎಂಬುದು ಮುಖ್ಯವಲ್ಲ, ಪಾಕಿಸ್ತಾನಿ ಆಟಗಾರ(ನದೀಮ್) ಗೆಲುವು ಸಾಧಿಸಿದ್ದರೂ ನನಗೆ ಸಂತೋಷವಾಗುತ್ತಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Its the real sportsmanship. We r really proud of Niraj for his great achievement and extremely proud of his mother’s statement of true sportsmanship attitude. Because of this attitude Niraji is world beater today. Hats off to both of u.Mother India is really grateful to u both .

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...