Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

- Advertisement -
- Advertisement -

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು. ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌.ವಿ. ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಬುಧವಾರದಂದು ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯ ನೇಮಕ ಪ್ರಕ್ರಿಯೆ ಹೇಗೆ?

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ನೇಮಿಸಲಾಗುತ್ತದೆ.

ಸಂವಿಧಾನದ 124 ನೇ ವಿಧಿ

ಭಾರತ ಸಂವಿಧಾನವು ಸಿಜೆಐ ನೇಮಕದ ಯಾವುದೇ ಕಾರ್ಯವಿಧಾನವನ್ನು ಉಲ್ಲೇಖಿಸಿಲ್ಲ. ಸಂವಿಧಾನದ 124 (1) ನೇ ವಿಧಿಯು, “ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುವ ಭಾರತದ ಸುಪ್ರೀಂ ಕೋರ್ಟ್ ಇರುತ್ತದೆ” ಎಂದು ಹೇಳುತ್ತದೆ.

ಸಂವಿಧಾನದ 124 ನೇ ವಿಧಿಯ ಷರತ್ತು (2) ಸರ್ವೋಚ್ಚ ನ್ಯಾಯಾಲಯದ ಪ್ರತಿಯೊಬ್ಬ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಹೇಳುತ್ತದೆ. ಹೀಗಾಗಿ, ಸಾಂವಿಧಾನಿಕ ನಿಬಂಧನೆಯ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ವಿಧಾನವು ‘ಸಂಪ್ರದಾಯ’ದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟವರಿಗೂ ಕಾನೂನಿನ ರಕ್ಷಣೆ ಖಾತ್ರಿಪಡಿಸುವ ಅಗತ್ಯವಿದೆ: ಯುಯು ಲಲಿತ್

ಹಿರಿತನದ ಆಧಾರದಲ್ಲಿ ಸಿಜೆಐಯಿಂದ ಶಿಫಾರಸ್ಸು

ನಿರ್ಗಮಿಸುತ್ತಿರುವ ಸಿಜೆಐ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ಇದು ಒಂದು ಸಂಪ್ರದಾಯವಾಗಿದ್ದು, ಕಟ್ಟುನಿಟ್ಟಾಗಿ ಹಿರಿತನವನ್ನು ಆಧರಿಸಿ ನೇಮಕ ಮಾಡಲಾಗುತ್ತದೆ. ಒಕ್ಕೂಟ ಸರ್ಕಾರದ ಕಾನೂನು ಸಚಿವರು ಈ ಶಿಫಾರಸನ್ನು ಪ್ರಧಾನಿಗೆ ರವಾನಿಸುತ್ತಾರೆ, ಅವರು ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ.

ಕಾರ್ಯನಿರ್ವಹಿಸುತ್ತಿರುವ ಸಿಜೆಐ ತನ್ನ 65 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಅತ್ಯಂತ ಹಿರಿಯ ನ್ಯಾಯಾಧೀಶರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ನೇಮಕಕ್ಕೆ ಪರಿಗಣಿಸುವ ‘ಹಿರಿತನ’ವು ವಯಸ್ಸಿನ ಮೂಲಕ ವ್ಯಾಖ್ಯಾನಿಸಲಾಗುವುದಿಲ್ಲ. ಅದರ ಬದಲಾಗಿ ನೇಮಕಗೊಳ್ಳುತ್ತಿರುವ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ

ಕಾರ್ಯವಿಧಾನದ ಮೆಮೊರಾಂಡಮ್ (The Memorandum of Procedure – MoP)

ಸಿಜೆಐಯನ್ನು ಅನ್ನು ನೇಮಿಸುವ ನಿಜವಾದ ಕಾರ್ಯವಿಧಾನವನ್ನು ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ನಲ್ಲಿ ಹೇಳಲಾಗಿದೆ. ಸಿಜೆಐ ನೇಮಕಾತಿಯು ಅಧಿಕಾರವನ್ನು ಹೊಂದಲು ಯೋಗ್ಯವೆಂದು ಪರಿಗಣಿಸಲಾದ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರಬೇಕು ಎಂದು MoP ಹೇಳುತ್ತದೆ.

MoP ಪ್ರಕಾರ, ‘ಸೂಕ್ತ ಸಮಯದಲ್ಲಿ’ ನಿವೃತ್ತರಾಗುತ್ತಿರುವ ಸಿಜೆಐ ಶಿಫಾರಸನ್ನು ಪಡೆಯುವ ಮೂಲಕ ಒಕ್ಕೂಟ ಸರ್ಕಾರದ ಕಾನೂನು ಸಚಿವರು ಕಾರ್ಯವಿಧಾನವನ್ನು ಪ್ರಾರಂಭಿಸುತ್ತಾರೆ. ಸಿಜೆಐ ಹುದ್ದೆಯನ್ನು ಅಲಂಕರಿಸಲಿರುವ ಹಿರಿಯ ನ್ಯಾಯಾಧೀಶರ ಫಿಟ್‌ನೆಸ್ ಬಗ್ಗೆ ಹಾಲಿ ಮುಖ್ಯ ನ್ಯಾಯಮೂರ್ತಿಗೆ ಯಾವುದೇ ಅನುಮಾನಗಳಿದ್ದರೆ ಅವರು ಕೊಲಿಜಿಯಂ ಅನ್ನು ಸಂಪರ್ಕಿಸಬಹುದು.

“ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುವ ಶಿಫಾರಸನ್ನು ಕಾನೂನು ಸಚಿವರು ಪ್ರಧಾನಿಗೆ ಸಲ್ಲಿಸುತ್ತಾರೆ” ಎಂದು MoP ಹೇಳುತ್ತದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಸರ್ಕಾರ ಒಪ್ಪದಿರುವ ಪರಿಸ್ಥಿತಿಯ ಬಗ್ಗೆ MoP ಏನನ್ನೂ ಹೇಳಿಲ್ಲ!.

ಇದನ್ನೂ ಓದಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...