Homeಮುಖಪುಟ'ಇನ್ನೆಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..'; ಪ್ರಧಾನಿ ಮೋದಿ ವಿರುದ್ಧ ಒವೈಸಿ ವಾಗ್ದಾಳಿ

‘ಇನ್ನೆಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..’; ಪ್ರಧಾನಿ ಮೋದಿ ವಿರುದ್ಧ ಒವೈಸಿ ವಾಗ್ದಾಳಿ

ಸರ್ಕಾರದ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ; ನೀವೇಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?

- Advertisement -
- Advertisement -

“ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಸ್ಲಿಮರು ಬಹುಸಂಖ್ಯಾತ ಸಮುದಾಯವಾಗುತ್ತಾರೆ ಎಂಬ ಭಯವನ್ನು ಹಿಂದೂಗಳಲ್ಲಿ ಮೂಡಿಸುತ್ತಿದ್ದಾರೆ. ಎಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..? ನಮ್ಮ ಧರ್ಮ ಬೇರೆ ಇರಬಹುದು; ಆದರೆ, ನಾವು ಈ ದೇಶಕ್ಕೆ ಸೇರಿದವರು” ಎಂದು ಹೈದರಾಬಾದ್ ಸಂಸದ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಂಮರಿಗೆ ಹೆಚ್ಚು ಮಕ್ಕಳು ಎಂಬರ್ಥದಲ್ಲಿ ಟೀಕೆ ಮಾಡಿದ್ದ ಪ್ರಧಾನಿ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಅವರು, “ನೀವು ದ್ವೇಷದ ಗೋಡೆಯನ್ನು ಏಕೆ ಕಟ್ಟುತ್ತಿದ್ದೀರಿ? ಮುಸ್ಲಿಮರು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಾರೆ ಎಂಬ ಭಯವನ್ನು ಏಕೆ ಸೃಷ್ಟಿಸುತ್ತಿದ್ದೀರಿ? ಮೋದಿ ಸರಕಾರದ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ. ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಮತ್ತು ಇದನ್ನು ಹೇಳಲು ನನಗೆ ನಾಚಿಕೆ ಇಲ್ಲ” ಎಂದು ಓವೈಸಿ ಹೇಳಿದರು.

‘ಈ ಮಾಹಿತಿಯ ಮೂಲ ಮೋದಿ ಸರ್ಕಾರದ ಡೇಟಾವೇ ಹೊರತು ನಾವಲ್ಲ’ ಎಂದು ಓವೈಸಿ ಹೇಳಿದ್ದಾರೆ. “ನರೇಂದ್ರ ಮೋದಿ ದ್ವೇಷವನ್ನು ಸೃಷ್ಟಿಸುತ್ತಿದ್ದಾರೆ; ಮುಸ್ಲಿಮರು ಗರಿಷ್ಠ ಸಂತಾನೋತ್ಪತ್ತಿ ದರವನ್ನು ಹೊಂದಿದ್ದಾರೆ ಎಂದು ಹೇಳುವ ಮೂಲಕ ಅವರು ಬಹುಸಂಖ್ಯಾತ ಸಮುದಾಯವನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಐಎಂಐಎಂ ನಾಯಕ ಹೇಳಿದರು.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ಕುರಿತಾದ ಹೇಳಿಕೆಗೆ ರಾಜಕೀಯ ಬಿರುಗಾಳಿ ಎಬ್ಬಿಸಿದ್ದರು. ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಾಯಿ, ಸಹೋದರಿಯರ ಬಳಿ ಚಿನ್ನ ಲೆಕ್ಕ ಹಾಕಿ, ಅದರ ಬಗ್ಗೆ ಮಾಹಿತಿ ಪಡೆದು ಆ ಆಸ್ತಿಯನ್ನು ಹಂಚುತ್ತೇವೆ ಎಂದು ಹೇಳುತ್ತದೆ. ಯಾರಿಗೆ ಹಂಚುತ್ತೇವೆ ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿತ್ತು; ದೇಶದ ಆಸ್ತಿಗಳ ಮೇಲಿನ ಮೊದಲ ಹಕ್ಕು ಮುಸ್ಲಿಮರಿಗೆ” ಎಂದು ಹೇಳಿದ್ದರು.

“ಈ ಹಿಂದೆ ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ಅವರು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು. ಇದರರ್ಥ ಈ ಆಸ್ತಿಯನ್ನು ಯಾರಿಗೆ ಹಂಚಲಾಗುತ್ತದೆ? ಇದನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಾಗುತ್ತದೆ. ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ” ಎಂದು ಪ್ರಧಾನಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಚುನಾವಣಾ ಸಮಿತಿಯು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ತಮ್ಮ ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರಿಂದ ನಿರೀಕ್ಷಿತ ರಾಜಕೀಯ ಭಾಷನಗಳ ಉನ್ನತ ಗುಣಮಟ್ಟದ ಬಗ್ಗೆ ತಿಳಿಸುವಂತೆ ಸೂಚಿಸಿದೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...