Homeರಾಷ್ಟ್ರೀಯ‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

‘ಎಷ್ಟು ಮಾಜಿ ಸೈನಿಕರಿಗೆ ಕೆಲಸ ಕೊಟ್ಟಿದ್ದೀರಿ?’: ಅನಂದ್‌ ಮಹೀಂದ್ರಾಗೆ ಮಾಜಿ ಸೈನಿಕರ ಗಂಭೀರ ಪ್ರಶ್ನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ವಿವಾದಿತ ಯೋಜನೆ ‘ಅಗ್ನಿಪಥ್‌’ನಿಂದ ಕಡ್ಡಾಯ ನಿವೃತ್ತಿ ಹೊಂದುವ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸುವುದಾಗಿ ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರಾ ಅವರು ಹೇಳಿದ್ದಾರೆ. ಮಹೀಂದ್ರಾ ಅವರು ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸೇನೆಯ ಮಾಜಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರು, ಮಹೀಂದ್ರಾ ಗ್ರೂಪ್‌ ಈ ಹಿಂದೆ ತನ್ನ ಪ್ರಮುಖ ಹುದ್ದೆಗಳಲ್ಲಿ ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆಯೆ ಎಂದು ಪ್ರಶ್ನಿಸಿದ್ದಾರೆ.

‘ಅಗ್ನಿಪಥ್’ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ, ಈ ಯೋಜನೆಯಡಿಯಲ್ಲಿ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುತ್ತೇವೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಗ್ನೀಪಥ್ ವಿಚಾರವಾಗಿ ನಡೆಯುವ ಹಿಂಸಾಚಾರದಿಂದ ದುಃಖಿತನಾಗಿದ್ದೇನೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ, ಈಗ ನಾನು ಪುನಃ ಹೇಳುತ್ತೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳ ಲಾಭವು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಗಳನ್ನಾಗಿ ಮಾಡುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವ ಜನರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ” ಎಂದು ಮಹೀಂದ್ರಾ ಟ್ವೀಟ್ ಮಾಡಿದ್ದರು.

ಮಹೀಂದ್ರಾ ಅವರ ಘೋಷಣೆಯನ್ನು ಕೆಲವರು ಶ್ಲಾಘಿಸಿದರೆ, ಸೇನೆಯ ಮಾಜಿ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವರು ಮಹೀಂದ್ರಾ ಗ್ರೂಪ್ ಈ ಹಿಂದೆ ಎಷ್ಟು ಮಾಜಿ ಅಧಿಕಾರಿಗಳನ್ನು ನೇಮಿಸಿಕೊಂಡಿದೆ ಎಂದು ಗಂಭೀರ ಪ್ರಶ್ನೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ‘ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ಈ ಹೊಸ ಯೋಜನೆಗಾಗಿ ಏಕೆ ಕಾಯಬೇಕು? ಇಲ್ಲಿಯವರೆಗೆ ಸಾವಿರಾರು ಹೆಚ್ಚು ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರು (ಜವಾನರು ಮತ್ತು ಅಧಿಕಾರಿಗಳು) ಪ್ರತಿ ವರ್ಷ ನಿವೃತ್ತಿ ಹೊಂದುತ್ತಿದ್ದು, 2 ನೇ ವೃತ್ತಿಜೀವನವನ್ನು ನಡೆಸಲು ತೀವ್ರವಾಗಿ ಬಯಸುತ್ತಿದ್ದಾರೆ. ಅವರನ್ನು ಮಹೇಂದ್ರ ಗ್ರೂಪ್ ತಲುಪಿದೆಯೆ. ನಿಮ್ಮ ಗ್ರೂಪ್‌ನಿಂದ ಅಂಕಿ ಅಂಶಗಳನ್ನು ಪಡೆಯುವುದು ಒಳ್ಳೆಯದು” ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಮತ್ತು ಚೀಫ್ಸ್ ಆಫ್ ಸ್ಟಾಫ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಅರುಣ್ ಪ್ರಕಾಶ್ ಪ್ರಶ್ನಿಸಿದ್ದಾರೆ.

“ಆನಂದ್ ಮಹೀಂದ್ರಾ ಸರ್, ಮಾಜಿ ನೌಕಾಪಡೆಯ ಮುಖ್ಯಸ್ಥರು ಕೋರಿರುವಂತೆ, ನಮಗೆ ಕೆಲವು ಅಂಕಿಅಂಶಗಳನ್ನು ನೀಡಬಹುದೇ? ಅಂತಹ ಭರವಸೆಗಳನ್ನು ಕೇಳಿ ನಾನು ನಲವತ್ತು ವರ್ಷಗಳ ಸೇವೆಯ ನಂತರ ನಿವೃತ್ತಿ ಹೊಂದಿದ್ದೇನೆ” ಎಂದು ಭಾರತೀಯ ವಾಯುಪಡೆಯ ಮಾಜಿ ಏರ್ ವೈಸ್ ಮಾರ್ಷಲ್ ಮನಮೋಹನ್ ಬಹದ್ದೂರ್ ಬರೆದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಆನಂದ್ ಮಹೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ, ಟಿಎಂಸಿ ನಾಯಕ ಸಾಕೇತ್ ಗೋಖಲೆ, “ಆನಂದ ಮಹೀಂದ್ರ ಅವರಿಗೆ ಎರಡು ಪ್ರಮುಖ ಪ್ರಶ್ನೆಗಳು. ಒಂದನೇಯದಾಗಿ, ಮಹೀಂದ್ರಾ ಗ್ರೂಪ್ ಪ್ರಸ್ತುತ ಎಷ್ಟು ಮಾಜಿ ಸೈನಿಕರನ್ನು ನೇಮಿಸಿಕೊಂಡಿದೆ? ನಿಮ್ಮ ಒಟ್ಟು ಉದ್ಯೋಗಿಗಳಲ್ಲಿ ಎಷ್ಟು ಶೇಖಡ ಜನರು ಮಾಜಿ ಸೈನಿಕರಾಗಿದ್ದಾರೆ? ಎರಡನೆಯದಾಗಿ, ನಿಮ್ಮ ಹೇಳಿಕೆಯ ಹಿನ್ನಲೆಯಲ್ಲಿ ಹೇಳುವುದಾದರೆ, ಮಹೀಂದ್ರಾ ಗ್ರೂಪ್ ಸ್ಟೆಪ್‌ ಅಗ್ನಿವೀರರಿಗೆ ಶೇಖಡವಾರು ಉದ್ಯೋಗಗಳನ್ನು ಕಾಯ್ದಿರಿಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಆನಂದ್ ಮಹೀಂದ್ರ ಅವರ ಟ್ವೀಟ್‌ ಅನ್ನು ಉಲ್ಲೇಖಿಸಿ RPG ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕೂಡಾ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. “ಆರ್‌ಪಿಜಿ ಗ್ರೂಪ್‌ ಕೂಡ ಅಗ್ನಿವೀರ್‌ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

17.5 ರಿಂದ 21 ವಯಸ್ಸಿನೊಳಗಿನ ಸೇನಾ ಉದ್ಯೋಗಾಕಾಂಕ್ಷಿಗಳನ್ನು ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ್’ ಯೋಜನೆಯನ್ನು ಒಕ್ಕೂಟ ಸರ್ಕಾರವು ಘೋಷಿಸಿದ ನಂತರ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಈ ಯೋಜನೆಯ ಅನ್ವಯ, ನಾಲ್ಕು ವರ್ಷಗಳು ಪೂರ್ಣಗೊಂಡ ನಂತರ, ಅಗ್ನಿಪಥ್‌‌ಗೆ ಹೊಸದಾಗಿ ನೇಮಕಗೊಂಡವರಲ್ಲಿ 75% ದಷ್ಟು ಜನರು 12 ಲಕ್ಷ ರೂ. ನೊಂದಿಗೆ ಅವರ ಕಡ್ಡಾಯ ನಿವೃತ್ತಿ ಪಡೆಯಬೇಕಾಗುತ್ತದೆ. ಆದರೆ ಅವರು ಯಾವುದೇ ಪಿಂಚಣಿಗೆ ಅರ್ಹರಾಗಿರುವುದಿಲ್ಲ. ಉಳಿದ 25% ಜನರು ಸಶಸ್ತ್ರ ಪಡೆಗಳಲ್ಲಿ 15 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಬಹುದಾಗಿದೆ.

ಯೋಜನೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದರೂ, ಮೋದಿ ನೇತೃತ್ವದ ಸರ್ಕಾರವು ಅದನ್ನು ಹಿಂತೆಗೆದುಕೊಳ್ಳಲು ಸ್ಪಷ್ಟವಾಗಿ ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...