Homeಮುಖಪುಟಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

ಆಪರೇಷನ್ ಸಿಂಧೂರದಲ್ಲಿ ಎಷ್ಟು ಭಾರತೀಯ ವಿಮಾನಗಳು ನಷ್ಟವಾಗಿವೆ: ಕೇಂದ್ರವನ್ನು ಮತ್ತೆ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಆಪರೇಷನ್ ಸಿಂಧೂರದಲ್ಲಿ ಭಾರತೀಯ ವಿಮಾನಗಳ ನಷ್ಟದ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಮೇಲಿನ ಟೀಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮತ್ತೆ ಮುಂದುವರೆಸಿದ್ದಾರೆ. ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ?” ಎಂಬ ಪ್ರಶ್ನೆಯನ್ನು ಮತ್ತೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ತಮ್ಮ ಈ ಹಿಂದಿನ ಪೋಸ್ಟ್ ಅನ್ನು ಮತ್ತೆ ಹಂಚಿಕೊಂಡಿದ್ದು, ಪ್ರಶ್ನೆಯನ್ನು ಪುನರುಚ್ಛರಿಸಿದ್ದಾರೆ. “ವಿದೇಶಾಂಗ ಸಚಿವ ಜೈಶಂಕರ್ ಅವರ ಮೌನವು ಕೇವಲಷ್ಟೆ ಹೇಳುತ್ತಿಲ್ಲ – ಅದು ಖಂಡನೀಯ. ಹಾಗಾಗಿ ನಾನು ಮತ್ತೆ ಕೇಳುತ್ತೇನೆ: ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ತಿಳಿದಿದ್ದರಿಂದ ನಾವು ಎಷ್ಟು ಭಾರತೀಯ ವಿಮಾನಗಳನ್ನು ಕಳೆದುಕೊಂಡಿದ್ದೇವೆ? ಇದು ಒಂದು ಲೋಪವಲ್ಲ. ಇದು ಅಪರಾಧವಾಗಿದೆ. ಮತ್ತು ದೇಶಕ್ಕೆ ಸತ್ಯಕ್ಕೆ ತಿಳಿಯಬೇಕಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಆರಂಭದಲ್ಲಿ ಭಾರತವು ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಸಚಿವ ಜೈಶಂಕರ್ ಅವರ ಹಿಂದಿನ ಹೇಳಿಕೆಗಳ ವಿಡಿಯೊವನ್ನು ಉಲ್ಲೇಖಿಸಿ ಅವರು ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಈ ಹಿಂದಿನ ಟ್ವೀಟ್‌ನಲ್ಲಿ, “ನಮ್ಮ ದಾಳಿಯ ಆರಂಭದಲ್ಲಿ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಇದನ್ನು ಮಾಡಿದೆ ಎಂದು ವಿದೇಶಾಂಗ ಸಚಿವ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಯಾರು ಅದನ್ನು ಅಧಿಕೃತಗೊಳಿಸಿದ್ದಾರೆ? ಇದರ ಪರಿಣಾಮವಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿತು?” ಎಂದು ಕೇಳಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, “ಆಪರೇಷನ್ ಸಿಂಧೂರ ಆರಂಭದ ನಂತರದ ಆರಂಭಿಕ ಹಂತವಾದ ಆರಂಭದಲ್ಲಿಯೇ ನಾವು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ವಿದೇಶಾಂಗ ಸಚಿವರು ಹೇಳಿದ್ದರು. ಇದನ್ನು ಆರಂಭಕ್ಕೂ ಮುನ್ನ ಎಂದು ತಪ್ಪಾಗಿ ನಿರೂಪಿಸಲಾಗುತ್ತಿದೆ. ಸತ್ಯಗಳ ಬದಲಿಗೆ ಈ ಸಂಪೂರ್ಣ ತಪ್ಪು ನಿರೂಪಣೆಯನ್ನು ಹೊರತರಲಾಗುತ್ತಿದೆ” ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿಯವರ ಮೂರ್ಖತನ ಕೇವಲ ಆಕಸ್ಮಿಕವಲ್ಲ – ಅದು ಕೆಟ್ಟದು. ಅವರು ಪಾಕಿಸ್ತಾನದ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೇ 15 ರಂದು, ಜೈಶಂಕರ್ ಹೀಗೆ ಹೇಳಿದ್ದರು: “ಕಾರ್ಯಾಚರಣೆಯ ಆರಂಭದಲ್ಲಿ, ನಾವು ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಎಂದು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದೆವು. ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ. ಆದ್ದರಿಂದ ಮಿಲಿಟರಿಗೆ ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಅವರು ಆ ಉತ್ತಮ ಸಲಹೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.”

ಆಪರೇಷನ್ ಸಿಂಧೂರದಲ್ಲಿ ಪ್ರಾರಂಭವಾದ ನಂತರ ನಡೆದ ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ನಡುವಿನ ಸಂಭಾಷಣೆಯನ್ನು ಸಚಿವ ಜೈ ಶಂಕರ್ ಉಲ್ಲೇಖಿಸುತ್ತಿದ್ದರು.

ಅದಾಗ್ಯೂ, ಭಾರತವು ಫೈಟರ್ ಜೆಟ್‌ಗಳನ್ನು ಕಳೆದುಕೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಅವರು ಅಲ್ ಜಜೀರಾ ಜೊತೆಗೆ ಮಾತನಾಡುತ್ತಾ, ಪಾಕಿಸ್ತಾನವು ಐದು ಭಾರತೀಯ ಜೆಟ್‌ಗಳು, ಒಂದು ಡ್ರೋನ್ ಮತ್ತು ಹಲವಾರು ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ತಿಳಿಸಿದ್ದರು.

ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ವಿಮಾನಗಳನ್ನು ಭಾರತೀಯ ಪ್ರದೇಶದೊಳಗೆ ಹೊಡೆದುರುಳಿಸಲಾಗಿದೆ ಮತ್ತು ಸಂಘರ್ಷದ ಸಮಯದಲ್ಲಿ ಯಾವುದೇ ಕಡೆಯವರು ಪರಸ್ಪರರ ವಾಯುಪ್ರದೇಶವನ್ನು ದಾಟಿಲ್ಲ ಎಂದು ದೃಢಪಡಿಸಿದ್ದರು. ಈ ಹೇಳಿಕೆಯನ್ನು ಭಾರತವು ಅನುಮೋದಿಸಿದೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮೇ 9 ರಂದು, ಪಾಕಿಸ್ತಾನದ ವಾಯುಪಡೆಯ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್ ಅವರು ಪತನಗೊಂಡ ಐದು ವಿಮಾನಗಳಲ್ಲಿ ಮೂರು ರಫೇಲ್‌ಗಳು, ಒಂದು ಮಿಗ್ -29 ಮತ್ತು ಒಂದು ಸು -30 ಸೇರಿವೆ ಎಂದು ಹೇಳಿಕೊಂಡಿದ್ದು, ವಿಮಾನಗಳು ಎಲ್ಲಿ ಹೊಡೆದುರುಳಿಸಲಾಗಿದೆ ಎಂಬುದರ ಎಲೆಕ್ಟ್ರಾನಿಕ್ ಸಹಿಗಳು ಮತ್ತು ನಿರ್ದಿಷ್ಟ ನಿರ್ದೇಶಾಂಕಗಳನ್ನು ಸಹ ಪ್ರಸ್ತುತಪಡಿಸಿದ್ದರು.

ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ದಿ ಗ್ಲೋಬಲ್ ಟೈಮ್ಸ್ ಮೇ 14 ರಂದು ಪಾಕಿಸ್ತಾನವು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು. ಅದಾಗ್ಯೂ, ಚೀನಾದಲ್ಲಿರುವ ಭಾರತದ ರಾಯಭಾರ ಕಚೇರಿ ಈ ವರದಿಯನ್ನು “ತಪ್ಪು ಮಾಹಿತಿ” ಎಂದು ಕರೆದಿದೆ. ಆದರೆ, ವರದಿಯಾದ ನಷ್ಟಗಳ ಬಗ್ಗೆ ಭಾರತವು ಔಪಚಾರಿಕ ದೃಢೀಕರಣ ಅಥವಾ ನಿರಾಕರಣೆಯನ್ನು ಈ ವರೆಗೆ ನೀಡಿಲ್ಲ.

ಕದನ ವಿರಾಮ ಘೋಷಣೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾರತದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, “ನಾವು ಯುದ್ಧ ಸನ್ನಿವೇಶದಲ್ಲಿದ್ದೇವೆ ಮತ್ತು ನಷ್ಟಗಳು ಅದರ ಒಂದು ಭಾಗವಾಗಿದೆ. ವಿವರಗಳಿಗೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನಾವು ಇನ್ನೂ ಯುದ್ಧದಲ್ಲಿರುವುದರಿಂದ ಮತ್ತು ಎದುರಾಳಿಗೆ ಅನುಕೂಲವನ್ನು ನೀಡುವುದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮ ಎಲ್ಲಾ ಪೈಲಟ್‌ಗಳು ಮನೆಗೆ ಮರಳಿದ್ದಾರೆ.” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...