HomeಮುಖಪುಟBJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?:...

BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದಲ್ಲಿ ವ್ಯಾಪಕ ನಿರುದ್ಯೋಗ ಬಿಕ್ಕಟ್ಟು ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಈಡೇರಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ನೀವು ಇಷ್ಟೊತ್ತಿಗಾಗಲೇ 15 ಕೋಟಿ ಉದ್ಯೋಗಗಳನ್ನು ಒದಗಿಸಬೇಕಿತ್ತು. ಆದರೆ ನಿಜವಾಗಿಯೂ ಎಷ್ಟು ಉದ್ಯೋಗಗಳನ್ನು ಒದಗಿಸಿದ್ದೀರಿ? ಈ ವರ್ಷದ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ ಎಂದು ಹೇಳಿದೆ ಎಂದು ಅವರು ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಈ ಮಧ್ಯೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆ ನಡೆಯುತ್ತಿದೆ. ಎರಡೂ ಸದನಗಳಿಗೂ ಚರ್ಚೆಗೆ 12 ಗಂಟೆಗಳ ಕಾಲಾವಕಾಶ ನೀಡಿವೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 7 ರಂದು ಲೋಕಸಭೆಯಲ್ಲಿ ಮತ್ತು ನಂತರ ಫೆಬ್ರವರಿ 8 ರಂದು ರಾಜ್ಯಸಭೆಯಲ್ಲಿ ಚರ್ಚೆಗೆ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಉಭಯ ಸದನಗಳು ಫೆಬ್ರವರಿ 11 ರ ನಂತರ ಒಂದು ತಿಂಗಳ ಅವಧಿಯ ವಿರಾಮ ತೆಗೆದುಕೊಳ್ಳುತ್ತವೆ. ಅದರ ನಂತರ, ಮಾರ್ಚ್ 13 ರಂದು ಕಲಾಪಗಳು ಪುನರಾರಂಭಗೊಳ್ಳುತ್ತವೆ. ಬಜೆಟ್ ಅಧಿವೇಶನವು ಏಪ್ರಿಲ್ 8 ರವರೆಗೆ ಮುಂದುವರಿಯುತ್ತದೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ಸಂಸತ್ತಿನಲ್ಲಿ ತಮ್ಮ 50 ನಿಮಿಷಗಳ ಭಾಷಣದಲ್ಲಿ, ರಾಷ್ಟ್ರಪತಿ ಕೋವಿಂದ್ ಅವರು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಶ್ಲಾಘಿಸಿದರು. 2047 ರ ವೇಳೆಗೆ “ಭವ್ಯವಾದ, ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ” ದೇಶವನ್ನು ನಿರ್ಮಿಸಲು “ಕಷ್ಟಪಟ್ಟು ಕೆಲಸ ಮಾಡಲು” ಜನರನ್ನು ಒತ್ತಾಯಿಸಿದರು.

2047 ರಲ್ಲಿ, ದೇಶವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತದೆ. ಆ ಕಾಲದ ಭವ್ಯ, ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಈಗ ಶ್ರಮಿಸಬೇಕಾಗಿದೆ. ನಮ್ಮ ಕಠಿಣ ಪರಿಶ್ರಮದಿಂದಾಗಿ ಫಲಪ್ರದ ಫಲಿತಾಂಶಳು ಸಿಗುತ್ತದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ಈ ಪ್ರಯಾಣದಲ್ಲಿ ನಾವೆಲ್ಲರೂ ಪಾಲನ್ನು ಹೊಂದಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Budget-2022 | ಬಜೆಟ್‌-2022 | ಪ್ರಮುಖ ಅಂಶಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

0
ಲೋಕಸಭೆ ಚುನಾವಣೆಗೆ "ದೇವರು ಮತ್ತು ಪೂಜಾ ಸ್ಥಳಗಳ" ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ...