Homeಮುಖಪುಟಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ?

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸುತ್ತಿರುವ ಸಾರ್ವಕರ್ ಉತ್ಸವವನ್ನು ಟೀಕಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕ್ಷಮೆ ಕೇಳಿ ಜೈಲಿಂದ ಬಿಡುಗಡೆಯಾದ ನಂತರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಟ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸಾಧನೆಗಳಿಲ್ಲದ ಬಿಜೆಪಿ ಸರ್ಕಾರ ವೈಫಲ್ಯ ಮರೆಮಾಚಲು ಜನೋತ್ಸವ ಬದಲಿಗೆ ಈ ಉತ್ಸವಗನ್ನು ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಾರ್ವಕರ್ ಸ್ವಾತಂತ್ರ್ಯ ಹೋರಾಟ ಮಾಡುವ ಉದ್ದೇಶ ಇದ್ದಿದ್ದರೆ ಅವರು ವಿದೇಶದಲ್ಲಿ ಬಂಧನವಾದಾಗ ಭಾರತಕ್ಕೆ ಬರಲು ಯಾಕೆ ಒಪ್ಪಲಿಲ್ಲ? ಸಾರ್ವಕರ್ ಸೆರೆವಾಸದಲ್ಲಿದ್ದಾಗ ಬ್ರಿಟೀಷರಿಗೆ ಆರು ಬಾರಿ ಕ್ಷಮಾಪಣಾ ಪತ್ರ ಬರೆದಿದ್ದು ಯಾಕೆ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಸಾವರ್ಕರ್ ಜೈಲಿಂದ ಬಿಡುಗಡೆಯಾದ ನಂತರ ಎಷ್ಟು ಹೋರಾಟ ಮಾಡಿದರು? ಅದರ ಪರಿಣಾಮಗಳೇನು?ಮುಸ್ಲೀಂ ಲೀಗ್ ಜತೆ ಅವರು ದೇಶದ ಹಲವು ಕಡೆಗಳಲ್ಲಿ ಸರ್ಕಾರ ರಚಿಸಿದ್ದು ಯಾಕೆ? ಅವರು ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಲಿಲ್ಲ ಯಾಕೆ? ಧರ್ಮದ ಆಧಾರದ ಮೇಲೆ ನಮ್ಮ ದೇಶ ವಿಭಜನೆ ಮಾಡಬೇಕು ಎಂದು ಮೊದಲು ಧ್ವನಿ ಎತ್ತಿದ ಸಾವರ್ಕರ್ ಪೂಜೆ ಯಾಕೆ ಮಾಡುತ್ತಿದ್ದೀರಿ? ಸಾರ್ವಕರ್ ನಾಸ್ತಿಕರಾಗಿದ್ದರು, ಈಗ ಪ್ರತಿ ಗಣೇಶೋತ್ಸವದ ಪೆಂಡಾಲ್ ನಲ್ಲಿ ಸಾರ್ವಕರ್ ಫೋಟೋ ಇಡುತ್ತಿರುವುದೇಕೆ? ಆ ಮೂಲಕ ದೇವರಿಗೆ ಅಪಮಾನ ಮಾಡುತ್ತಿರುವುದೇಕೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

1940ರ ಮಥುರಾದಲ್ಲಿ ನಡೆದ ಹಿಂದು ಮಹಾಸಭಾ ಅಧಿವೇಶನದಲ್ಲಿ ಸಾರ್ವಕರ್ ಅವರು ನಾನು ಬ್ರಿಟೀಷರ ಸೇನೆಗೆ 1 ಲಕ್ಷ ಯೋಧರನ್ನು ಸೇರಿಸಿದ್ದೇನೆ ಎಂದು ಬಹಿರಂಗವಾಗಿ, ಹೆಮ್ಮೆಯಿಂದ ಹೇಳಿಕೊಂಡಿದ್ದರು. ಎರಡನೇ ಮಹಾಯುದ್ಧದಲ್ಲಿ ಸಾರ್ವಕರ್ ಅವರು ಬ್ರಿಟೀಷರಿಗೆ ಸಹಕಾರ ನೀಡುವುದಾಗಿ ಅಂದಿನ ವೈಸರಾಯ್ ಗಿಲ್ ಲಿತ್ ಗೌ ಅವರಿಗೆ ತಿಳಿಸಿದರು. ಸಾರ್ವಕರ್ ಕ್ಷಮಾಪಣಾ ಪತ್ರ ಬರೆದಿದ್ದು ಮಾಸ್ಟರ್ ಸ್ಟ್ರೋಕ್ ಆದರೆ ಅವರು 1929 ಆ.1ರಿಂದ 1947ರ ವರೆಗೆ ಬ್ರಿಟೀಷರಿಂದ 60 ರೂ. ಪಿಂಚಣಿ ಪಡೆದಿದ್ದು ಯಾಕೆ? ಅಲ್ಲದೆ ತಮಗೆ ತಾವೇ ವೀರ ಸಾರ್ವಕರ್ ಎಂಬ ಬಿರುದು ಕೊಟ್ಟಿಕೊಂಡ ಅವರೆಂಥ ಹೋರಾಟಗಾರ ಎಂದು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಅವರು ಮಠಗಳಿಗೆ 30%, ಗುತ್ತಿಗೆದಾರರಿಗೆ 40%, ಬಿಬಿಎಂಪಿಯಲ್ಲಿ 50%, ತಮ್ಮ ಕಾರ್ಯಕರ್ತರಿಗೆ 60% ಕಮಿಷನ್ ನಿಗದಿ ಮಾಡಿದ್ದಾರೆ. ರೈತರು ಕಣ್ಣೀರು ಹಾಕುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಎರಡು ಪತ್ರ ಬರೆಯುತ್ತಿದ್ದಾರೆ. ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದು ಯುವಕರ ಭವಿಷ್ಯ ನಾಶವಾಗುತ್ತಿದೆ. ಕೋಮುಗಲಭೆ ಸೃಷ್ಟಿಸುತ್ತಿದ್ದೀರ. ಶಿವಮೊಗ್ಗದಲ್ಲಿ ಕೋಮುಗಲಭೆಯಿಂದ ಸಣ್ಣ ವ್ಯಾಪಾರಿಗಳಿಗೆ 300 ಕೋಟಿ ರೂ. ನಷ್ಟವಾಗಿದೆ. ಇವರ ಆಡಳಿತದಲ್ಲಿ ರಸ್ತೆ ಗುಂಡಿಗೆ ಸಾವು ಸಂಭವಿಸುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿಯವರಿಗೆ ಸಿದ್ದರಾಮಯ್ಯ ಏನು ತಿಂದರು, ಡಿ.ಕೆ. ಶಿವಕುಮಾರ್ ಏನು ಹೇಳಿದರು ಎಂಬುದರ ಮೇಲೆ ಆಸಕ್ತಿ ಇದೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಾರ್ವಕರ್, ಹಿಂದುತ್ವ ಎಂಬಂತೆ ಭಾವಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...