Homeಕರ್ನಾಟಕಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ?: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ...

ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ?: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

- Advertisement -
- Advertisement -

”ಕೇಂದ್ರ ಸರ್ಕಾರಕ್ಕೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಮೋದಿ ನೋಡಿ ವೋಟ್ ಹಾಕಲಿಲ್ಲ ಎಂದು ದ್ವೇಷ ತೀರಿಸಿ ಕೊಳ್ತಿದ್ದೀರಾ?” ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ನಿರಾಕರಣೆ ಮಾಡಿದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಎನ್‌ಡಿಎ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

”ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ನಾವೇನು ಪುಕ್ಸಟ್ಟೆಯಾಗಿ ಅಕ್ಕಿ ಕೇಳಿದ್ವಾ? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸದೇ ಇದ್ದಲ್ಲಿ, ಕೇಂದ್ರದ‌ ಆಶಿರ್ವಾದ ಸಿಗೋದಿಲ್ಲ ಎಂದು ಧಮಕಿ ಹಾಕಿದ್ದರು. ಈಗ ಅದನ್ನು ಅನುಷ್ಠಾನಕ್ಕೆ ತರುತ್ತೀರಾ? ಎಂದು ಕೇಳಿದರು.

”ಬಿಜೆಪಿಗೆ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ಮರೆತುಹೋಗಿದೆ. ಅವರ ಆಡಳಿತ ನೋಡಿಯೇ ಜನರು ಅವರನ್ನು ಪ್ರತಿಪಕ್ಷ ಸ್ಥಾನದಲ್ಲಿ ಇಟ್ಟಿದ್ದಾರೆ. ಬೇರೆ ಕಡೆಯಿಂದ ಅಕ್ಕಿ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಯಾವುದೇ ರಾಜ್ಯ ಸರ್ಕಾರವಾದರೂ ಕೇಂದ್ರದಿಂದಲೇ ಅಕ್ಕಿ ತರಿಸಿಕೊಳ್ಳುವುದು ಸಹಜ. ಅದು ಕೇಂದ್ರದಿಂದಲೇ ಖರೀದಿ ಮಾಡಬೇಕು ಅಂತ ಇದೆ” ಎಂದರು.

ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಮುಂದಾದ ಪಂಜಾಬ್ ಸಿಎಂ ಭಗವಂತ್ ಮಾನ್

”ಕೇಂದ್ರದ ವಿರುದ್ಧ ನಾಳೆ ಪ್ರತಿಭಟನೆಗೆ ರಾಜ್ಯ ಬಿಜೆಪಿಗೂ ಆಹ್ವಾನ ಇದೆ. ನೀವು ಬನ್ನಿ, 25 ಸಂಸದರು ಇದ್ದಾರೆ, ಈಗಲಾದರೂ ಬನ್ನಿ. ಧಮ್ಮು ತಾಕತ್ತು ಅಂತೀರಲ್ಲ, ಅದನ್ನ ಈಗ ಬಂದು ತೋರಿಸಿ” ಎಂದು ಸವಾಲು ಹಾಕಿದರು.

ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ: 

ಉಚಿತ ಪ್ರಯಾಣದ ಕುರಿತು ಮಾತನಾಡಿ, ”ಈ ಯೋಜನೆಗೆ ಸಾವಿರಾರು ಕೋಟಿ ಆಗುತ್ತೆ ಅಂತ ಲೆಕ್ಕ ಹಾಕಿದ್ದೇವೆ. BMTC, KSRTC, NERTC, KKRTC ಯಾವುದೇ ಇರಬಹುದು. ಮಾತು ಕೊಟ್ಟಿದ್ದೇವೆ, ಅದರಂತೆ ನಡೆದುಕೊಳ್ತಿದ್ದೇವೆ” ಎಂದರು.

”ಬಿಜೆಪಿಯವರು ದೇವಸ್ಥಾನಕ್ಕೆ ಹೋಗಿ ಎಂದು ಹೇಳಿದರೂ ಯಾರೂ ಹೋಗುತ್ತಿರಲಿಲ್ಲ. ನಾವು ಯೋಜನೆ ತಂದ ಬಳಿಕ ಎಲ್ಲರೂ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ.  ಬಿಜೆಪಿಯವರು ಇದನ್ನು ವಿರೋಧಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...