Homeಮುಖಪುಟಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಎಷ್ಟು? ಮಾಹಿತಿ ಬಿಚ್ಚಿಟ್ಟ ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಎಷ್ಟು? ಮಾಹಿತಿ ಬಿಚ್ಚಿಟ್ಟ ಸುಪ್ರೀಂ ತೀರ್ಪು

- Advertisement -
- Advertisement -

ನಿನ್ನೆ(ಫೆ.15) ಸುಪ್ರೀಂ ಕೋರ್ಟ್‌ ರದ್ದುಗೊಳಿಸಿರುವ ಚುನಾವಣಾ ಬಾಂಡ್ ಯೋಜನೆಯ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) 6,566 ಕೋಟಿ ರೂ.ಗಳನ್ನು ಗಳಿಸಿತ್ತು ಎಂದು ತಿಳಿದು ಬಂದಿದೆ. ಮತದಾರರ ಮಾಹಿತಿ ಹಕ್ಕಿನ ಉಲ್ಲಂಘನೆಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬರೆದ ಪ್ರತ್ಯೇಕ ತೀರ್ಪಿನಲ್ಲಿ ರಾಜಕೀಯ ಪಕ್ಷಗಳು ಸಂಗ್ರಹಿಸಿರುವ ಹಣದ ವಿವರಗಳು ಬೆಳಕಿಗೆ ಬಂದಿವೆ.

ಬಿಜೆಪಿಯ ಚುನಾವಣಾ ಬಾಂಡ್ ಗಳಿಕೆಯು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬಾಂಡ್‌ಗಳ ಮೂಲಕ ಗಳಿಸಿದ್ದಕ್ಕಿಂತ ಸುಮಾರು ಆರು ಪಟ್ಟು ಹೆಚ್ಚಿದೆ. ಕಾಂಗ್ರೆಸ್‌ ಕೇವಲ 1,123 ಕೋಟಿ ರೂ. ಗಳಿಸಿತ್ತು ಎಂದು ವರದಿಗಳು ತಿಳಿಸಿವೆ. ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ದಾವೆ ಹೂಡಿದ್ದ ಸಿಪಿಎಂ ಪಕ್ಷ ಮಾತ್ರ ಬಾಂಡ್‌ಗಳ ಮೂಲಕ ಒಂದು ರೂಪಾಯಿಯನ್ನು ಕೂಡ ಸ್ವೀಕರಿಸಿಲ್ಲ ಎಂಬ ಮಾಹಿತಿ ದೊರೆತಿದೆ.

ಸಂಸತ್ತಿನಲ್ಲಿ ನೀಡಲಾದ ಅಂಕಿ ಅಂಶಗಳ ಪ್ರಕಾರ, ಇದುವರೆಗೆ 16,518 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಪ್ರತಿ ಪಕ್ಷಗಳು ಎಷ್ಟು ಪಡೆದಿವೆ ಎಂಬ ವಿವರಗಳನ್ನು ಸಂಸತ್ತಿನಲ್ಲಿ ಬಹಿರಂಗಪಡಿಸಿರಲಿಲ್ಲ. ಆಗ ಮಾಹಿತಿ ಈಗ ಸುಪ್ರೀಂ ಕೋರ್ಟ್‌ನ ತೀರ್ಪಿನ ಮೂಲಕ ಹೊರಬಿದ್ದಿದೆ.

ಇದುವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದವರ ಮಾಹಿತಿ ಸಿಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಮಾರ್ಚ್ ಒಳಗೆ ಆ ಮಾಹಿತಿಯನ್ನು ಸ್ಟೇಟ್‌ ಬ್ಯಾಂಕ್ ಇಂಡಿಯಾ ಚುನಾವಣಾ ಆಯೋಗಕ್ಕೆ ನೀಡಬೇಕಾಗಿದೆ. ಚುನಾವಣಾ ಆಯೋಗ ಮಾರ್ಚ್ 13ರ ಒಳಗೆ ಆ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿಬೇಕು. ಪ್ರಸ್ತುತ ಲಭ್ಯವಿರುವ ಮಾಹಿತಿ ಪ್ರಕಾರ, 2017 ರಿಂದ 2023 ರ ಅವಧಿಯಲ್ಲಿ ಬಿಜೆಪಿಗೆ ಬಂದಿರುವ ದೇಣಿಗೆ 6,566 ಕೋಟಿ ತಲುಪಿದೆ ರೂಪಾಯಿ. ಚುನಾವಣಾ ಬಾಂಡ್‌ಗಳಿಂದ ಕೇಂದ್ರ ಅಥವಾ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷಗಳು ಹೆಚ್ಚು ಲಾಭ ಪಡೆದಿವೆ ಎಂದು ತಿಳಿದುಬಂದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ಇತರ ಪಕ್ಷಗಳ ಗಳಿಕೆ:
ತೃಣಮೂಲ ಕಾಂಗ್ರೆಸ್ : 1,092 ಕೋಟಿ ರೂ
ಬಿಜು ಜನತಾ ದಳ : 774 ಕೋಟಿ ರೂ
ಡಿಎಂಕೆ : 616 ಕೋಟಿ ರೂ
ಭಾರತ್ ರಾಷ್ಟ್ರ ಸಮಿತಿ (ಹಳೆಯ ಟಿಆರ್‌ಎಸ್) : 386 ಕೋಟಿ ರೂ
ವೈಎಸ್ಆರ್ ಕಾಂಗ್ರೆಸ್ : 382 ಕೋಟಿ ರೂ
ಟಿಡಿಪಿ : 146 ಕೋಟಿ ರೂ
ಶಿವಸೇನೆ : 101.38 ಕೋಟಿ ರೂ
ಆಮ್ ಆದ್ಮಿ ಪಕ್ಷ: 94.28 ಕೋಟಿ ರೂ

ಮಾರ್ಚ್ ನಂತರ ಪ್ರಸಕ್ತ ಹಣಕಾಸು ವರ್ಷದ ಅಂಕಿ ಅಂಶಗಳನ್ನು ಆಡಿಟ್ ಮಾಡಿದಾಗ ಈ ಅಂಕಿ ಅಂಶಗಳು ಮತ್ತೆ ಏರಿಕೆಯಾಗಲಿವೆ. ಶೇ. 92.45 ರಷ್ಟು ಚುನಾವಣಾ ಬಾಂಡ್‌ಗಳ ಮೌಲ್ಯವು 1 ಕೋಟಿ ರೂ. 1 ಸಾವಿರ ಮೌಲ್ಯದ ಕೇವಲ 99 ಬಾಂಡ್‌ಗಳನ್ನು ಮಾತ್ರ ನೀಡಲಾಗಿತ್ತು ಎಂದು ವರದಿಗಳಿಂದ ತಿಳಿದು ಬಂದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಸಾಂವಿಧಾನಿಕ ಪೀಠದ ಮುಂದೆ ಮಂಡಿಸಲಾಗಿದ್ದ ಪ್ರಮುಖ ವಾದಗಳಲ್ಲಿ ದೇಣಿಗೆಯ ಹೆಚ್ಚಿನ ಭಾಗವು ಕೇಂದ್ರದಲ್ಲಿ ಆಡಳಿತ ಪಕ್ಷಕ್ಕೆ ಹೋಗುತ್ತಿದೆ ಎಂಬುದಾಗಿತ್ತು. ಈ ಆತಂಕವು ಸರಿಯಾಗಿದೆ ಎಂದು ಮೇಲಿನ ದತ್ತಾಂಶ ಬಹಿರಂಗಪಡಿಸಿದೆ.

2014-15ರಿಂದ 2016-17ರ ಅವಧಿಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಅಪರಿಚಿತ ಮೂಲಗಳಿಂದ ಬಂದಿದ್ದ ದೇಣಿಗೆಯ ಪಾಲು ಶೇ.66ರಿಂದ 2018-19ರಿಂದ 2021-22ರ ಅವಧಿಯಲ್ಲಿ ಶೇ.72ಕ್ಕೆ ಏರಿಕೆಯಾಗಿದೆ.

2014-15ರಿಂದ 2016-17ರ ಅವಧಿಯಲ್ಲಿ ರಾಷ್ಟ್ರೀಯ ರಾಜಕೀಯ ಪಕ್ಷಗಳ ಒಟ್ಟು ಆದಾಯ ₹3,864 ಕೋಟಿಗಳಿಂದ 2018-19ರಿಂದ 2021-22ರ ಅವಧಿಯಲ್ಲಿ ₹11,829 ಕೋಟಿಗೆ ಏರಿದೆ.

ಒಟ್ಟಾರೆಯಾಗಿ, 2018-19 ರಿಂದ 2021-22 ರ ನಡುವೆ ಚುನಾವಣಾ ಬಾಂಡ್ ಯೋಜನೆಯಿಂದ ಬಂದ ಆದಾಯವು ರಾಷ್ಟ್ರೀಯ ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇಕಡಾ 58 ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:  ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...