Homeಮುಖಪುಟಚುನಾವಣಾ ಬಾಂಡ್: 745 ಕೋಟಿ ದೇಣಿಗೆ ಹೈದರಾಬಾದ್‌ ಮೂಲದ ಕಂಪೆನಿಗಳಿಂದ ಪಡೆದಿದ್ದ ಬಿಜೆಪಿ

ಚುನಾವಣಾ ಬಾಂಡ್: 745 ಕೋಟಿ ದೇಣಿಗೆ ಹೈದರಾಬಾದ್‌ ಮೂಲದ ಕಂಪೆನಿಗಳಿಂದ ಪಡೆದಿದ್ದ ಬಿಜೆಪಿ

- Advertisement -
- Advertisement -

ಬಿಜೆಪಿ ದೇಶದಲ್ಲಿ ಅತಿ ಹೆಚ್ಚು ಠೇವಣಿ ಅಂದರೆ 6,061 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ಪಡೆದಿದ್ದು, ಇದರಲ್ಲಿ ಶೇ.12ರಷ್ಟು ಅಂದರೆ 745 ಕೋಟಿ ರೂ.ಹೈದರಾಬಾದ್‌ ಮೂಲದ ಕಂಪೆನಿಗಳಿಂದ ದೇಣಿಗೆಯನ್ನು ಪಡೆದಿದೆ ಎನ್ನುವುದು ಇದೀಗ ಬಹಿರಂಗವಾಗಿದೆ.

2017-2018 ಮತ್ತು 2023-2024ರ ನಡುವೆ ಹೈದರಾಬಾದ್‌ನಲ್ಲಿ ಖರೀದಿಸಿದ ಸುಮಾರು 745 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ ನಿಧಿಯನ್ನು ಬಿಜೆಪಿ ಖಾತೆಗೆ ಜಮಾ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ಡೇಟಾ ತೋರಿಸುತ್ತದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್, ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್, ಗ್ರೀನ್ಕೋ ಅನಂತಪುರ ವಿಂಡ್ ಪವರ್ ಪ್ರೈವೇಟ್ ಲಿಮಿಟೆಡ್ ಮತ್ತು ದಿವ್ಯೇಶ್ ಪವರ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವಾರು ಸಂಸ್ಥೆಗಳು ಹೈದರಾಬಾದ್‌ನ ಎಸ್‌ಬಿಐ ಬ್ರಾಂಚ್‌ನಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಹೈದರಾಬಾದ್‌ನ ಮೇಘಾ ಇಂಜಿನಿಯರಿಂಗ್ (ಎಂಇಐಎಲ್) ಮಾತ್ರ ತಲಾ 1 ಕೋಟಿ ಮೌಲ್ಯದ 140 ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ, ಅವುಗಳಲ್ಲಿ ಹೆಚ್ಚಿನ ಹಣ ಬಿಜೆಪಿಗೆ ರವಾನೆಯಾಗಿದೆ. ಹೆಸರು ಸೂಚಿಸದ ಸಂಸ್ಥೆಯು ಬಿಜೆಪಿಗೆ ಅತ್ಯಧಿಕ ಮೊತ್ತದ ಸುಮಾರು 585 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ, ನಂತರ 195 ಕೋಟಿ ರೂಪಾಯಿಗಳನ್ನು ಬಿಆರ್‌ಎಸ್‌ಗೆ ಮತ್ತು 85 ಕೋಟಿ ರೂಪಾಯಿಗಳನ್ನು ಡಿಎಂಕೆಗೆ ನೀಡಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಅಕ್ಟೋಬರ್ 2020ರಲ್ಲಿ ರೂ 20 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅದೇ ವರ್ಷದ ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಏಷ್ಯಾದ ಅತಿ ಉದ್ದದ ರಸ್ತೆ ಸುರಂಗ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಕಂಪನಿಯು ಪಡೆದುಕೊಂಡಿದೆ.

ಹೈದರಾಬಾದ್‌ನಿಂದ ಎರಡನೇ ಮತ್ತು ಮೂರನೇ ಅತ್ಯಧಿಕ ಮೊತ್ತವು ಕ್ರಮವಾಗಿ 50 ಕೋಟಿ ರೂ. ಮತ್ತು 49 ಕೋಟಿ ರೂಗಳಾಗಿದ್ದು, ಕ್ರಮವಾಗಿ ನವೆಂಬರ್ 10, 2022 ಮತ್ತು ಡಿಸೆಂಬರ್ 12, 2022ರಂದು ಬಿಜೆಪಿಗೆ  ವರ್ಗಾವಣೆಯಾಗಿದೆ.

ಹೈದರಾಬಾದ್‌ನ ಇತರ ಚುನಾವಣಾ ಬಾಂಡ್‌ ದೇಣಿಗೆದಾರರಲ್ಲಿ ಈ ಹಿಂದೆ ಚುನಾವಣಾ ಬಾಂಡ್ ದೇಣಿಗೆ ನೀಡಲು ನಿರಾಕರಿಸಿದ್ದ ಯಶೋಧ ಆಸ್ಪತ್ರೆ ಸೇರಿದೆ. ಯಶೋಧ ಆಸ್ಪತ್ರೆ ಒಟ್ಟು 162 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ಬಿಆರ್‌ಎಸ್‌ಗೆ 94 ಕೋಟಿ, ಕಾಂಗ್ರೆಸ್‌ಗೆ 64 ಕೋಟಿ, ಬಿಜೆಪಿಗೆ 2 ಕೋಟಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ 1 ಕೋಟಿ ರೂಪಾಯಿ ನೀಡಲಾಗಿದೆ ಎಂದು ಇತ್ತೀಚಿನ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಆಸ್ಪತ್ರೆ ಡಿಸೆಂಬರ್ 2020 ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಗೆ ಒಳಪಟ್ಟಿತ್ತು ಎನ್ನಲಾಗಿದೆ.

ಮೊದಲ ಪಟ್ಟಿ ಬಿಡುಗಡೆಯಾದ ನಂತರ, ಹೈದರಾಬಾದ್‌ನ ಯಶೋದಾ ಆಸ್ಪತ್ರೆ ದೇಣಿಗೆ ನೀಡಿರುವುದನ್ನು ನಿರಾಕರಿಸಿದೆ ಮತ್ತು ಗಾಜಿಯಾಬಾದ್‌ನ ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿರಬಹುದು ಎಂದು ಹೇಳಿತ್ತು. ಆದರೆ ಗಾಜಿಯಾಬಾದ್‌ನ ಯಶೋಧ ಆಸ್ಪತ್ರೆ ಕೂಡ ದೇಣಿಗೆ ನೀಡಿರುವುದನ್ನು ತಳ್ಳಿಹಾಕಿದೆ.

ಇದನ್ನು ಓದಿ: ಚುನಾವಣಾ ಬಾಂಡ್ ಖರೀದಿಸಿದ್ದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಆರೋಪಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...