Homeಮುಖಪುಟಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು

- Advertisement -
- Advertisement -

ಇಂದು ಸುಳ್ಳು ಸುದ್ದಿಗಳ ಹಾವಳಿ ಮಿತಿಮೀರಿದೆ. ಸರ್ಕಾರಗಳೇ ಹಲವು ಆಪ್‌ಗಳು ಮತ್ತು ವೆಬ್‌ಸೈಟ್‌ಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವುದನ್ನು ತಡೆಯಲು ಹೆಣಗಾಡುತ್ತಿವೆ. ಆದರೆ ಇದೇ ಸರ್ಕಾರಗಳು ಕೆಲ ವರ್ಷಗಳಿಂದ ತಮ್ಮದೇ ಪಕ್ಷದ ಕಾರ್ಯಕರ್ತರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾಗ ನೋಡಿಕೊಂಡು ಸುಮ್ಮನಿದ್ದಿದ್ದನ್ನು ನಾವು ಮರೆಯಬಾರದು. ಆದರೂ ಸಹ ಸುಳ್ಳು ಸುದ್ದಿಗಳಿಂದ ಅತಿ ಹೆಚ್ಚು ಹಾನಿಗೊಳಗಾಗುವುದು ಅಮಾಯಕ ಬಡವರಾಗಿದ್ದಾರೆ. ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಮೊದಲು ಅದು ಸತ್ಯವೇ ಎಂದು ಪರಿಶೀಲಿಸಬೇಕು. ಅದು ಹೇಗೆ? ಇಲ್ಲಿವೆ ನೋಡಿ ಕೆಲವು ಸೂಚನೆಗಳು.

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ.

ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ಕೆಲವು ಉದಾಹರಣೆಗಳನ್ನು ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...