Homeಮುಖಪುಟಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ 'Fridays For Future' ಸಂಸ್ಥೆಯ ಬಗ್ಗೆ ಗೊತ್ತೆ?

ಬೆಂಗಳೂರಿನಲ್ಲಿ ದಿಶಾ ರವಿ ಸ್ಥಾಪಿಸಿರುವ ‘Fridays For Future’ ಸಂಸ್ಥೆಯ ಬಗ್ಗೆ ಗೊತ್ತೆ?

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ

- Advertisement -
- Advertisement -

ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಹಂಚಿಕೊಂಡಿರುವ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 21 ವರ್ಷದ ದಿಶಾ ರವಿಯವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ದಿಶಾ ಅವರ ಹಿನ್ನೆಲೆಯ ಕುರಿತು ಈಗ ಸಾಕಷ್ಟು ಚರ್ಚೆಗಳಾಗುತ್ತಿವೆ. ದಿಶಾ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. Fridays For Future (FFF – ಭವಿಷ್ಯಕ್ಕಾಗಿ ಶಕ್ರವಾರ) ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ (ಎಡಿಟ್ ಮಾಡಿ) ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

FFF ಎನ್ನುವ ಸಂಘಟನೆಯನ್ನು ಗ್ರೇಟಾ ಥನ್‌ಬರ್ಗ್ 2018 ರಲ್ಲಿ ಸ್ವೀಡನ್‌ನಲ್ಲಿ ಸ್ಥಾಪಿಸಿದ್ದರು. ಅಂದಿನಿಂದ ಇದು ಜಗತ್ತಿನಾದ್ಯಂತ ತನ್ನ ಶಾಖೆಗಳನ್ನು ಹೆಚ್ಚಿಸಿಕೊಂಡು ಬಂದಿದೆ. ಇದರ ಬೆಂಗಳೂರು ಶಾಖೆಯ ಸಂಸ್ಥಾಪಕರಲ್ಲಿ ದಿಶಾ ರವಿ ಕೂಡಾ ಒಬ್ಬರಾಗಿದ್ದಾರೆ.

ಪ್ರಸ್ತುತ ಜಗತ್ತಿನಲ್ಲಿ ಹವಾಮಾನ ಬದಲವಣೆಯಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಪ್ರಕೃತಿಯ ಸಮತೋಲನವನ್ನು ಕಾಪಾಡುವ ಸಲುವಾಗಿ ಹೋರಾಟ, ಜಾಗೃತಿ ಮತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಈ ಸಂಸ್ಥೆಯು ರಚನೆಯಾಗಿದೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ಜಗತ್ತಿನಾಧ್ಯಂತ ಇರುವ ಶಾಲಾ ಮಕ್ಕಳು ಪ್ರತಿ ಶುಕ್ರವಾರ ಶಾಲೆಯಿಂದ ಹೊರಗುಳಿದು ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಮತ್ತು ಪ್ರಕೃತಿಯಲ್ಲಿ ಸಿಗುವ ನವೀಕರಿಸಬಹುದಾದ ಇಂಧನವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ತರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವುದು FFF ಚಳವಳಿಯ ಹಿಂದಿನ ಉದ್ದೇಶವಾಗಿದೆ.

FFF ವತಿಯಿಂದ ಇತ್ತೀಚೆಗೆ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅವುಗಳಲ್ಲಿ ಪ್ರಮುಖವಾದವು, ಮಹಾರಾಷ್ಟ್ರದಲ್ಲಿನ ಆರೇ ಅರಣ್ಯ ಉಳಿಸಿ ಹೋರಾಟ, ಗೋವಾದಲ್ಲಿನ ಮೊಲೆಮ್ ಅರಣ್ಯ ಉಳಿಸಿ ಹೋರಾಟ ಮತ್ತು EIA 2020 (ಪರಿಸರ ಪರಿಣಾಮದ ಮೌಲ್ಯಮಾಪನ-2020ದ ಕುರಿತ ಹೋರಾಟಗಳು ಸೇರಿವೆ.

ಹವಾಮಾನ ಮುಷ್ಕರಕ್ಕೆ ಸಂಬಂಧಿಸಿದಂತೆ FFFನ ವೆಬ್‌ಸೈಟ್ ಪ್ರಕಾರ, “ಹವಾಮಾನ ಮುಷ್ಕರಗಳು ಅಥವಾ ಮೆರವಣಿಗೆಗಳು ಅಹಿಂಸಾತ್ಮಕ ಮತ್ತು ಶಾಂತಿಯುತವಾದುದಾಗಿದ್ದು, ಪ್ರಸ್ತುತ ಜಗತ್ತಿನ ಹವಾಮಾನ ಬಿಕ್ಕಟ್ಟು ಮತ್ತು ಪರಿಸರದ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನಮ್ಮ ಬೇಡಿಕೆಗಳನ್ನು ನಮ್ಮ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಗೆ ತಿಳಿಸಲು ನಾವು ಅಳವಡಿಸಿಕೊಂಡ ಮಾರ್ಗಗಳಾಗಿವೆ” ಎಂದು ಹೇಳುತ್ತದೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಜೊತೆಗೆ, “ಫ್ರೈಡೇಸ್‌ ಫಾರ್‌ ಫ್ಯೂಚರ್‌ ಎಂಬುದು ಹವಾಮಾನ ನ್ಯಾಯಕ್ಕಾಗಿ (Climate Justice) ಜಾಗತಿಕ ಜನರು ನಡೆಸುವ ಚಳುವಳಿಯಾಗಿದೆ. FFF ಅನ್ನು‌ ಭಾರತದಲ್ಲಿ ಎಲ್ಲರನ್ನೂ ಒಳಗೊಂಡಂತಹ ಸಮತಾವಾದ, ಪಕ್ಷೇತರ, ಸ್ವಾಯತ್ತ ಮತ್ತು ವಿಕೇಂದ್ರೀಕೃತ ಚಳುವಳಿಯಾಗಿಸುತ್ತೇವೆ” ಎಂದು ಈ ಸಂಸ್ಥೆಯು ಹೇಳಿಕೊಂಡಿದೆ.

FFF ಭಾರತದ ವಿರುದ್ಧ ಸರ್ಕಾರಗಳು ಸಮರ ಸಾರಿರುವುದು ಇದೇ ಮೊದಲಲ್ಲ. ಈ ವೆಬ್‌ಸೈಟ್‌ ಅನ್ನು 2020 ರ ಜುಲೈನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಆಕ್ಷೇಪಾರ್ಹವಾದದ್ದು ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಜೊತೆಗೆ ಇದು ಕಾನೂನುಬಾಹಿರ ಮತ್ತು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂಬ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದರೆ ಕೆಲವು ದಿನಗಳ ನಂತರ ‘ತಪ್ಪಾಗಿ ನೋಟಿಸ್ ನೀಡಲಾಗಿದೆ’ ಎಂದು ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿತ್ತು.

2019 ರಲ್ಲಿ ಯುವಜನತೆಯ ನೇತೃತ್ವದಲ್ಲಿ ನಡೆದ ಜಾಗತಿಕ ಹವಾಮಾನ ಮುಷ್ಕರದ (global climate strike) ಭಾಗವಾಗಿ ಭಾರತದಲ್ಲಿಯೂ ಸಾವಿರಾರು ಸಂಖ್ಯೆಯ ಯುವಜನತೆ ಒಟ್ಟಿಗೆ ಸೇರಿ 2019 ರ ಸೆಪ್ಟಂಬರ್ ತಿಂಗಳಿನಲ್ಲಿ ಹಲವಾರು ಹವಾಮಾನ ಮುಷ್ಕರಗಳನ್ನು ಆಯೋಜಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ದನಿಯೆತ್ತಿ ಅದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಹೋರಾಡುತ್ತಿರುವ ಫ್ರೈಡೇಸ್ ಫಾರ್ ಫ್ಯೂಚರ್ ಸಂಸ್ಥೆಯು ಸಮಾಜಮುಖಿಯಾದದ್ದಾಗಿದೆ. ಹಾಗಾಗಿಯೇ ಗ್ರೇಟಾ ಥನ್‌ಬರ್ಗ್ ಅವರಿಗೆ ಜಾಗತಿಕವಾಗಿ ದೊಡ್ಡ ಮಟ್ಟದ ಮನ್ನಣೆ ಸಿಕ್ಕಿದೆ. ಈಗ ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಾಗತಿಕವಾಗಿ ಪಕ್ಷಾತೀತ ಬೆಂಬಲ ಸಿಗುತ್ತಿರುವುದೂ ಇದೇ ಕಾರಣಕ್ಕೆ ಎಂದು ಹೇಳಬಹುದು.

ಈ ಸಂಸ್ಥೆಯ ವೆಬ್‌ಸೈಟ್‌ಗೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಟ್ರಿಲಿಯನ್‌ಗಟ್ಟಲೆ ಮೌಲ್ಯವಿರುವ ಕಂಪನಿಗಿಂತ ಜನರ ಗೌಪ್ಯತೆ ಮುಖ್ಯ ಎಂದ ಸುಪ್ರೀಂ: ವಾಟ್ಸಾಪ್, ಕೇಂದ್ರ ಸರ್ಕಾರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...