Homeಕರ್ನಾಟಕನನ್ನ ವೈಯಕ್ತಿಕ ಜೀವನ, ಶಾಸಕಿ ಹುದ್ದೆ ಮೇಲೆ ಹೇಗೆ ಪರಿಣಾಮ ಬೀರುತ್ತದೆ?: ವಿರೋಧಿಗಳಿಗೆ ನಯನಾ ಮೋಟಮ್ಮ...

ನನ್ನ ವೈಯಕ್ತಿಕ ಜೀವನ, ಶಾಸಕಿ ಹುದ್ದೆ ಮೇಲೆ ಹೇಗೆ ಪರಿಣಾಮ ಬೀರುತ್ತದೆ?: ವಿರೋಧಿಗಳಿಗೆ ನಯನಾ ಮೋಟಮ್ಮ ಪ್ರಶ್ನೆ

- Advertisement -
- Advertisement -

ಕರ್ನಾಟಕದ ಮೂಡಿಗೆರೆ (ಎಸ್‌ಸಿ ಮೀಸಲು) ಕ್ಷೇತ್ರದಿಂದ ನೂತನ ಶಾಸಕಿಯಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ನಯನಾ ಮೋಟಮ್ಮ ಅವರ ಖಾಸಗಿ ಫೋಟೊಗಳನ್ನು ಒಟ್ಟುಗೂಡಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವ ಮೂಲಕ ಬಿಜೆಪಿಯ ಕೆಲವು ಗುಂಪುಗಳು ಅವರನ್ನು ಕೆಣಕಲು ಯತ್ನಿಸಿದ್ದಾರೆ. ಅವರಿಗೆ ನಯನಾ ಅವರು ತೀಕ್ಷ್ಣವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

“ಇದು ಮೂಲತಃ ಡ್ರೆಸ್ಸಿಂಗ್ ಸಂಸ್ಕೃತಿಗೆ ಸಂಬಂಧಿಸಿದೆ, ನಾನು ಸೀರೆಯುಟ್ಟ ಮಹಿಳೆಯಾಗಿ ನನ್ನನ್ನು ಗುರುತಿಸಿಕೊಳ್ಳುತ್ತೇನೆ. ನಾನು ‘ವಾಸ್ತವವಾಗಿ’ ಇರುವುದು ಹೀಗೇ” ಎಂದು ನಯನಾ ಅವರು ವಿವರಿಸಿದ್ದಾರೆ.

”ನಾನು ನನ್ನ ಪತಿ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುತ್ತಿರುವ ದೃಶ್ಯಗಳು, ಕೆಲವು ಸ್ವಿಮ್ಮಿಂಗ್ ಪೂಲ್‌ನಲ್ಲಿರುವ ಫೋಟೋಗಳು ಹಾಗೂ ನನ್ನ ಸಮೀಪದಲ್ಲಿ ಮದ್ಯದ ಬಾಟಲಿ ಬಿದ್ದಿರುವ ಫೋಟೋಗಳನ್ನು ಹರಿಬಿಟ್ಟು ಅಪಪ್ರಚಾರದ ಪ್ರಚಾರ ಮಾಡಲಾಗುತ್ತಿದೆ” ಎಂದು ನಯನಾ ಹೇಳಿದ್ದಾರೆ.

ಈ ಎಲ್ಲಾ ಫೋಟೋಗಳನ್ನು ಅವರು ಈ ಹಿಂದೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅವೆಲ್ಲವನ್ನೂ ಸಂಗ್ರಹಿಸಿ ವಿಡಿಯೋ ಮಾಡಿ ಅಪಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಬಿಜೆಪಿ ಶಿವಮೊಗ್ಗದ ಫೇಸ್‌ಬುಕ್ ಪುಟದಿಂದ ವೀಡಿಯೊಗಳನ್ನು ತೆಗೆದುಹಾಕಲಾಗಿದೆ ಎಂದು ನಯನಾ ಹೇಳಿದರು.

ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಧರಿಸಿದ್ದ ಸೀರೆಗಳಿಗಿಂತ ಭಿನ್ನವಾದ ಉಡುಪುಗಳು, ಕ್ರೀಡಾಪಟುಗಳು ಮತ್ತು ಇತರ ಉಡುಪನ್ನು ಧರಿಸಿರುವುದು ಆ ವಿಡಿಯೋದಲ್ಲಿ ಕಂಡುಬರುತ್ತದೆ. ಅವು ಮಹಿಳಾ ರಾಜಕಾರಣಿಗೆ ಸಾಂಪ್ರದಾಯಿಕವಲ್ಲದ ಉಡುಪು ಎಂದು ಅವರ ವಿರೋಧಿಗಳು ಪ್ರತಿಪಾದಿಸಲು ಹೊರಟಿದ್ದಾರೆ. ನಯನಾ ಅವರು ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಒಂದು ದಿನ ಮುಂಚಿತವಾಗಿ, ಮತ್ತು ಮೇ 13 ರಂದು ಅವರ ವಿಜಯವನ್ನು ಘೋಷಿಸಿದ ಕೂಡಲೇ, ಬಿಜೆಪಿಗೆ ಸಂಬಂಧಿಸಿದ ಕೆಲವು ಗುಂಪುಗಳು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಆ ದೃಶ್ಯಗಳನ್ನು ಪ್ರಸಾರ ಮಾಡಿವೆ.

ನಯಾನಾ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಮೇ 20ರಂದು ಕೆಲವು ದೃಶ್ಯಗಳನ್ನು  ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ನೃತ್ಯ ಮಾಡುವುದು, ಓಡುವುದು ಮತ್ತು ಸೆಲ್ಫಿ ತೆಗೆದುಕೊಳ್ಳುವುದನ್ನು ಕಾಣಬಹುದು. ಅವರ ರಾಜಕೀಯ ಚಟುವಟಿಕೆಗಳ ದೃಶ್ಯಗಳೊಂದಿಗೆ ಅವುಗಳನ್ನು ಜೋಡಿಸಲಾಗಿದೆ. ”ಸೋಲಿನ ಹತಾಶೆ ನಿಮ್ಮನ್ನು ಮತ್ತಷ್ಟು ಕಾಡಲು ಬಿಡಬೇಡಿ. ಹೌದು…ರಾಜಕಾರಣ, ನಾನು, ನಾನು, ಮತ್ತು ನನ್ನ ವೈಯಕ್ತಿಕ ಜೀವನ ಎಂಬ ವ್ಯತ್ಯಾಸವೇ ಗೊತ್ತಿಲ್ಲದ ಮೂರ್ಖರಿಗೆ ಉತ್ತರವಾಗಿದೆ” ಎಂದು ನಯನಾ ಹೇಳಿದ್ದಾರೆ.

ನಯನಾ ಅವರು ವೀಡಿಯೊವನ್ನು ಹೊರಹಾಕುವ ತನ್ನ ನಿರ್ಧಾರದ ಬಗ್ಗೆ ಮಾತನಾಡುತ್ತಾ, ”ನಾನು ಯಾವಾಗಲೂ ಸ್ಪಷ್ಟವಾಗಿದ್ದೇನೆ. ನನ್ನ ವೈಯಕ್ತಿಕ ಜೀವನ ಮತ್ತು ರಾಜಕೀಯ ಜೀವನ ಬೇರೆ ಬೇರೆ, ನಾನು ನನ್ನ ವೈಯಕ್ತಿಕ ಜೀವನವನ್ನು ರಾಜಕೀಯ ಕೆಲಸದಿಂದ ಹೊರಗಿಡುತ್ತೇನೆ. ನಾನು ಹೀಗೆಯೇ ಬದುಕುತ್ತೇನೆ ಎಂದು ಜನರಿಗೆ ತೋರಿಸುತ್ತೇನೆ… ನನಗೆ ಮರೆಮಾಡಲು ಏನೂ ಇಲ್ಲ” ಎಂದು ಹೇಳಿದ್ದಾರೆ.

”ಮತದಾನದ ದಿನಕ್ಕೆ ಒಂದು ದಿನ ಮೊದಲು (ಮೇ 10 ರಂದು) ರಾಜಕೀಯ ವಿರೋಧಿಗಳು ನನ್ನ ಖಾಸಗಿ ಫೋಟೋಗಳನ್ನು ಸಂಗ್ರಹಿಸಿ ವಿಡಿಯೋ ಮಾಡಿ ಹರಿಬಿಟ್ಟರು. ಅದನ್ನು ಬಿಜೆಪಿ ಮತ್ತು ಜೆಡಿಎಸ್ ನಡುವೆ [ನಿಖರವಾಗಿ] ಯಾರು ಮಾಡಿದ್ದಾರೆ ಎಂದು ನನಗೆ ತಿಳಿದಿಲ್ಲ, ಅವರು ‘ನಾರಿ ವಿತ್ ಸೀರೆ’ ಎಂದು [ನಿರೂಪಣೆಯನ್ನು ಹೊಂದಿದ್ದ] ವೀಡಿಯೊವೊಂದನ್ನು ಹರಿಬಿಟ್ಟರು. ಆದರೆ ನಾನು ಈ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದೇನೆ ನೃತ್ಯ, ಓಟ, ಸೆಲ್ಫಿ ತೆಗೆದುಕೊಳ್ಳುವುದು, ಸಾಮಾಜಿಕ ಕೂಟಗಳಿಗೆ ಹಾಜರಾಗುವುದು. ನನ್ನ ಎದುರಿಸಲು ಸಾಧ್ಯವಾಗದವರು ಈ ರೀತಿ ಮಾಡಿದ್ದಾರೆ. ಆದರೆ ನಾನು ಅವರ ಈ ಅಪಪ್ರಚಾರದ ಕುತಂತ್ರವನ್ನು ಎದುರಿಸುತ್ತೇನೆ. ಅವರ ಈ ಕುತಂತ್ರಕ್ಕೆ ನಾನು ಕುಗ್ಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

”ನನ್ನ ವೈಯಕ್ತಿಕ ಜೀವನವು ಶಾಸಕಿ ಹುದ್ದೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ. ”ನಾನು ಕೆಲವು ಬಟ್ಟೆಗಳನ್ನು ಧರಿಸಿರುವುದರಿಂದ ನನ್ನ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೇ? ಒಬ್ಬ ವಕೀಲೆಯಾಗಿ, ಕ್ಲೈಂಟ್‌ನೊಂದಿಗೆ ಭೇಟಿಯಾದಾಗ ನಾನು ಕಾರ್ಪೊರೇಟ್ ಬಟ್ಟೆಗಳನ್ನು ಧರಿಸುತ್ತೇನೆ. ನಾನು ನನ್ನ ವೈಯಕ್ತಿಕ ಜಾಗದಲ್ಲಿದ್ದಾಗ, ನಾನು ಜವಾಬ್ದಾರಿಯುತವಾಗಿ ವರ್ತಿಸುವವರೆಗೂ ನನಗೆ ಬೇಕಾದುದನ್ನು ಧರಿಸಬಹುದು ಮತ್ತು ನನಗೆ ಬೇಕಾದುದನ್ನು ತಿನ್ನಬಹುದು” ಎಂದು ಹೇಳಿದ್ದಾರೆ.

”ನಾನು ಈ ಎಲ್ಲಾ ವಿಷಯಗಳನ್ನು ಬಚ್ಚಿಡಲು ಬಯಸಿದ್ದರೆ, ನಾನು ಅವುಗಳನ್ನು ನನ್ನ ಸಾಮಾಜಿಕ ಮಾಧ್ಯಮದಿಂದ ಡಿಲೀಟ್ ಮಾಡುತ್ತಿದ್ದೆ. ನನ್ನ ವ್ಯಕ್ತಿತ್ವ ಏನೆಂದು ಜನಕ್ಕೆ ಗೊತ್ತಾಗಲಿ ಎಂದು ನಾನು ಹಾಗೆಯೇ ಬಿಟ್ಟಿದ್ದೇನೆ. ನಾನು ಸಾಮಾಜಿಕ ಜೀವನವನ್ನು ಹೊಂದಿರುವುದರಿಂದ ನನ್ನ ಕೆಲಸ ಅಥವಾ ಜವಾಬ್ದಾರಿಗಳಿಂದ ನಾನು ನುಣುಚಿಕೊಳ್ಳುತ್ತಿಲ್ಲ” ಎಂದು ಅವರು ಹೇಳಿದರು.

ನಯನಾ ಮೋಟಮ್ಮ ಹಿನ್ನೆಲೆ:

ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದಿಂದ ಕಾನೂನು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಯನಾ, ಈ ಹಿಂದೆ ಕಾರ್ಪೊರೇಟ್ ವಕೀಲರು ಮತ್ತು ಉದ್ಯಮಿಯಾಗಿದ್ದರು. ಚುನಾವಣೆಗೂ ಮುನ್ನ ಕರ್ನಾಟಕ ಹೈಕೋರ್ಟ್‌ನಲ್ಲಿ ಅಭ್ಯಾಸ ನಡೆಸಿದ್ದರು. 43 ವರ್ಷದ ಅವರು ಪ್ರಸ್ತುತ ಕರ್ನಾಟಕ ವಿಧಾನಸಭೆಯಲ್ಲಿ ಅತ್ಯಂತ ಕಿರಿಯ ಮಹಿಳಾ ಶಾಸಕಿಯಾಗಿದ್ದಾರೆ. ಅವರ ತಾಯಿ ಮೋಟಮ್ಮ, ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕಿ, ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕಿಯಾದ ಮೊದಲ ಮಹಿಳೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...