Homeಮುಖಪುಟಅಹಮದಾಬಾದ್ ನಲ್ಲಿ ’ಹೌಡಿ ಟ್ರಂಪ್’ ಬೃಹತ್ ಸಮಾವೇಶಕ್ಕೆ ಸಜ್ಜು

ಅಹಮದಾಬಾದ್ ನಲ್ಲಿ ’ಹೌಡಿ ಟ್ರಂಪ್’ ಬೃಹತ್ ಸಮಾವೇಶಕ್ಕೆ ಸಜ್ಜು

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿದ್ದು, ಪ್ರಧಾನಿ ತವರು ನೆಲ ಅಹಮದಾಬಾದ್ ನಲ್ಲಿ ಬೃಹತ್ ಸಮಾವೇಶ ನಡೆಸಿ ಟ್ರಂಪ್‌ಗೆ ಅತಿದೊಡ್ಡ ಗೌರವ ಸಲ್ಲಿಸಲು ಸಿದ್ದತೆ ನಡೆದಿದೆ. ಅಮೆರಿಕಾದಲ್ಲಿ ಹೌಡಿ ಮೋದಿ ಕಾರ್ಯಕ್ರಮದ ಮೂಲಕ ನರೇಂದ್ರ ಮೋದಿಗೆ ಗೌರವ ಸಲ್ಲಿಸಿದ್ದಕ್ಕೆ ಪ್ರತಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಡೊನಾಲ್ಡ್ ಟ್ರಂಪ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಹಿಂದೆ ಒಬಮಾ ಅವರನ್ನು ಸ್ವಾಗತಿಸಿದ್ದಕ್ಕಿಂತಲೂ ಅದ್ದೂರಿಯಾಗಿ ಗೌರವಿಸಲು ಭಾರತ ಸರ್ಕಾರ ಸಿದ್ದತೆ ನಡೆಸುತ್ತಿದೆ. ಅಂದಹಾಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24 ಮತ್ತು 25ರಂದು ಎರಡು ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ ಎಂದು ಶ್ವೇತಭವನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಟ್ರಂಪ್ ಎರಡು ದಿನಗಳಲ್ಲಿ ನವದೆಹಲಿ ಮತ್ತು ಅಹಮದಾಬಾದ್ ನಗರಗಳಿಗೆ ಭೇಟಿ ನೀಡುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಜೊತೆ ಸ್ಟೀಫನಿ ಗ್ರಿಷಮ್ ಕೂಡ ಬರುತ್ತಿದ್ದಾರೆ. ಭಾರತ ಭೇಟಿಯ ಸಂದರ್ಭದಲ್ಲಿ ಹಲವು ವಿಷಯಗಳ ಕುರಿತು ಟ್ರಂಪ್ ಮತ್ತು ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ. ಇದರಿಂದ ಅಮೆರಿಕ ಮತ್ತು ಭಾರತ ನಡುವಿನ ವ್ಯೂಹಾತ್ಮಕ ಪಾಲುದಾರಿಕೆ ಬಲಗೊಳ್ಳಲಿದೆ. ಉಭಯ ದೇಶಗಳ ಜನರ ನಡುವೆ ಸಂಬಂಧಗಳು ವೃದ್ಧಿಯಾಗಲಿವೆ ಎಂದು ಅದು ಹೇಳಿದೆ.

ಪ್ರಧಾನಿ ಮೋದಿಯ ತವರು ಗುಜರಾತ್‌ನ ರಾಜಧಾನಿ ಅಹಮದಾಬಾದ್‌ಗೆ ಟ್ರಂಪ್‌ ಭೇಟಿ ನೀಡುವ ವೇಳೆ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಗಾಂಧಿ ಜೀವನ ಮತ್ತು ನಾಯಕತ್ವದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವುದರ ಹಿಂದೆ ವ್ಯಾಪಾರ ಮತ್ತು ರಕ್ಷಣಾ ಒಪ್ಪಂದ ಮಾಡಿಕೊಳ್ಳುವುದು ಪ್ರವಾಸದ ಮುಖ್ಯ ಉದ್ದೇಶ ಎಂದು ಶ್ವೇತಭವನ ತಿಳಿಸಿದೆ.

ಟ್ರಂಪ್ ಭೇಟಿಯ ಸಮಯದಲ್ಲಿ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕ ಹೇರಿಕೆ ಕಡಿಮೆ ಮಾಡುವಂತೆ ಭಾರತಕ್ಕೆ ಮನವಿ ಮಾಡಲಿದೆ ಎನ್ನಲಾಗುತ್ತಿದೆ. ಜೊತೆಗೆ ಕೃಷಿ, ತಯಾರಿಕಾ ವಸ್ತುಗಳು, ಡೈರಿ ಉತ್ಪನ್ನಗಳು, ಮೆಡಿಕಲ್ ಡಿವೈಸಿಸ್, ಐಸಿಟಿ ವಸ್ತುಗಳ, ಆಮದು ಸುಂಕ ಕಡಿಮೆ ಮಾಡುವಂತೆ ಅಮೆರಿಕ ಮನವಿ ಮಾಡಲಿದೆ ಎಂದು ಹೇಳಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...