Homeಮುಖಪುಟಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಸಮನ್ಸ್‌ಗಳಿಗೆ ಪ್ರತಿಕ್ರಿಯೆ ನೀಡದ ಕಾರಣ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದೆ.

ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ, ದೆಹಲಿ ಮದ್ಯ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಸ್ಥೆ ನೀಡಿದ ಸಮನ್ಸ್‌ಗೆ ಪ್ರತಿಕ್ರಿಯಿಸದೆ ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ವರದಿಯ ಪ್ರಕಾರ, ನ್ಯಾಯಾಲಯವು ಈ ವಿಚಾರದಲ್ಲಿ ಶನಿವಾರ ಕೆಲವು ವಿಚಾರಗಳನ್ನು ಆಲಿಸಿತು ಮತ್ತು ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಕೇಜ್ರಿವಾಲ್ ಅವರಿಗೆ   ಇಡಿ 5ನೇ ಸಮನ್ಸ್ ನೀಡಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಶುಕ್ರವಾರ ಡಿಡಿಯು ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಎಎಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಕೇಜ್ರಿವಾಲ್ ಪಾಲ್ಗೊಂಡಿದ್ದರು.

ಕೇಜ್ರಿವಾಲ್ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಎಎಪಿ ಹೇಳಿದೆ ಮತ್ತು ಅವರಿಗೆ ನೀಡಲಾದ ಸಮನ್ಸ್ ಕಾನೂನುಬಾಹಿರ ಎಂದು ಆರೋಪಿಸಿದೆ. ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ದೆಹಲಿಯಲ್ಲಿ ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಶುಕ್ರವಾರ ಇಡಿ ಮುಂದೆ ಹಾಜರಾಗದ ಕೇಜ್ರಿವಾಲ್ ಅವರನ್ನು ಕೆಲವು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸಚಿವೆ ಮತ್ತು ಬಿಜೆಪಿಯ ಹಿರಿಯ ನಾಯಕ ಮೀನಕಾಶಿ ಲೇಖಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್ ಅವರು ಇಡಿ  ಮುಂದೆ ಹಾಜರಾಗದೆ, ಬಿಜೆಪಿ ಪ್ರಧಾನ ಕಚೇರಿಯ ಮುಂದೆ ನಾಟಕ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೀತಿ ನಿರೂಪಣೆ, ಸಭೆಗಳು ಮತ್ತು ಲಂಚದ ಆರೋಪದ ಬಗ್ಗೆ ಕೇಜ್ರಿವಾಲ್ ಅವರ ಹೇಳಿಕೆಯನ್ನು ದಾಖಲಿಸಲು ಇಡಿ ಬಯಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಅಬಕಾರಿ ನೀತಿಯ (2021-22) ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳನ್ನು ಆರೋಪಿಸಿ ಎಫ್‌ಐಆರ್‌ ದಾಖಲಿಸಿತ್ತು. ಬಳಿಕ ಪ್ರಕರಣದ ತನಿಖೆಯನ್ನು ‘ಇಡಿ’ ಕೈಗೆತ್ತಿಕೊಂಡಿದೆ. ಭ್ರಷ್ಟಾಚಾರದ ಆರೋಪದ ನಂತರ ನೀತಿಯನ್ನು ಹಿಂಪಡೆಯಲಾಗಿದೆ.

ಡಿಸೆಂಬರ್ 2, 2023 ರಂದು ಎಎಪಿ ನಾಯಕ ಸಂಜಯ್ ಸಿಂಗ್ ಮತ್ತು ಅವರ ಸಹಾಯಕ ಸರ್ವೇಶ್ ಮಿಶ್ರಾ ಅವರನ್ನು ಹೆಸರಿಸಿ ಪ್ರಕರಣದಲ್ಲಿ ಸಲ್ಲಿಸಿದ ಆರನೇ ಚಾರ್ಜ್ ಶೀಟ್‌ನಲ್ಲಿ, ಎಎಪಿ ತನ್ನ ವಿಧಾನಸಭಾ ಚುನಾವಣಾ ಪ್ರಚಾರದ ಭಾಗವಾಗಿ ನೀತಿಯ ಮೂಲಕ ಗಳಿಸಿದ  45 ಕೋಟಿ ಮೌಲ್ಯದ ಕಿಕ್‌ಬ್ಯಾಕ್‌ಗಳನ್ನು  2022ರಲ್ಲಿ ಗೋವಾ ಚುನಾವಣೆಯಲ್ಲಿ ಬಳಸಿದೆ ಎಂದು ಇಡಿ ಹೇಳಿಕೊಂಡಿದೆ.

ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಸಿಬಿಐ ಹಲವಾರು ಸುತ್ತಿನ ವಿಚಾರಣೆಯ ನಂತರ ಬಂಧಿಸಿತ್ತು ಮತ್ತು ಅಕ್ಟೋಬರ್ 5ರಂದು ಇಡಿ ರಾಜ್ಯಸಭಾ ಸದಸ್ಯರಾಗಿರುವ ಸಿಂಗ್ ಅವರನ್ನು ಬಂಧಿಸಿತ್ತು.

ಇದನ್ನು ಓದಿ: ‘ಭಾರತ್ ಮಾತಾ ಕೀ ಜೈ’ ಹೇಳದ ಮಹಿಳೆಗೆ ಸಭೆಯಿಂದ ಹೊರ ನಡೆಯುವಂತೆ ಸೂಚಿಸಿದ ಕೇಂದ್ರ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...