Homeಮುಖಪುಟಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ...

ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

- Advertisement -
- Advertisement -

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರದ ಹಿಂದೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪಾತ್ರ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯ ಒದಗಿಸುವಂತೆ ಕುಕಿ ಸಂಘಟನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ನ.8) ಆದೇಶಿಸಿದೆ.

ಗಲಭೆಗೆ ತಾನೇ ಕುಮ್ಮಕ್ಕು ನೀಡಿದ್ದಾಗಿ ಸಿಎಂ ಬೀರೇನ್ ಸಿಂಗ್ ಹೇಳಿಕೊಂಡಿದ್ದಾರೆ. ಈ ಕುರಿತ ಆಡಿಯೋ ಇದೆ ಎಂದು ಕುಕಿ ಮಾನವ ಹಕ್ಕು ಸಂಘಟನೆ ಟ್ರಸ್ಟ್‌ ಆರೋಪಿಸಿದೆ. ಹಾಗಾಗಿ, ಸಿಎಂ ಅವರ ಸಂಭಾಷಣೆಯದ್ದು ಎನ್ನಲಾದ ಆಡಿಯೊ ಟೇಪ್‌ ಮತ್ತು ದಾಖಲೆಗಳ ಮೂಲ ವಿವರಗಳನ್ನು ಒದಗಿಸುವಂತೆ ಸಿಜೆಐ ಡಿ ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ಸೂಚಿಸಿದೆ.

“ಸ್ವತಃ ಮುಖ್ಯಮಂತ್ರಿಗಳೇ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಲು ಅವಕಾಶ ಮಾಡಿಕೊಟ್ಟಿರುವಾಗ, ರಾಜ್ಯ ಸರ್ಕಾರ ಯಾವ ರೀತಿಯಲ್ಲಿ ಘಟನೆಯ ತನಿಖೆ ನಡೆಸಬಹುದು?” ಎಂದು ಕುಕಿ ಟ್ರಸ್ಟ್ ಪರ ವಕೀಲ ಪ್ರಶಾಂತ್‌ ಭೂಷಣ್‌ ಪ್ರಶ್ನಿಸಿದ್ದಾರೆ.

ಆಡಿಯೋ ಟೇಪ್‌ಗಳನ್ನು ಲಾಂಬಾ ಆಯೋಗಕ್ಕೆ ಸಲ್ಲಿಸಲಾಗಿದೆ. ಈ ನ್ಯಾಯಾಲಯ ಮಣಿಪುರ ಹಿಂಸಾಚಾರ ಪ್ರಕರಣ ಆಲಿಸುತ್ತಿದೆ. ಇದು ಸಾಮಾನ್ಯ ಪ್ರಕರಣವಲ್ಲ ಎಂದು ಪ್ರಶಾಂತ್ ಭೂಷಣ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕುಕಿ ಸಂಘಟನೆಯ ಆರೋಪಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಪ್ರಕರಣದ ತನಿಖೆ ನಡೆಯುತ್ತಿದೆ. ಶಾಂತಿ ಕಾಪಾಡಲು ಸಿಎಂ ಎಲ್ಲಾ ಕುಕಿ ಸಮುದಾಯದ ಶಾಸಕರನ್ನು ಭೇಟಿಯಾಗಿದ್ದಾರೆ. ಆದರೆ, ಟ್ರಸ್ಟ್‌ ಶಾಂತಿ ಬಯಸುತ್ತಿಲ್ಲ. ಬೆಂಕಿಯಾಡುತ್ತಲೇ ಇರುವಂತೆ ನೋಡಿಕೊಳ್ಳುವುದು ಅದರ ಉದ್ದೇಶ. ಹೈಕೋರ್ಟ್‌ನ ಘನತೆಗೆ ಧಕ್ಕೆ ತರಬಾರದು ಎಂಬುವುದು ನನ್ನ ಸಲಹೆ ಎಂದಿದ್ದಾರೆ.

ಆದರೆ, ಸಿಎಂ ಅವರದ್ದು ಎನ್ನಲಾದ ಆಡಿಯೋ ಟೇಪ್‌ಗಳ ಸತ್ಯಾಸತ್ಯತೆ ಪರೀಕ್ಷಿಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...