Homeಕರ್ನಾಟಕಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಿಂದ ನಿನ್ನೆ ಹೆಣ್ಣು ಮಗು ಅಪಹರಣ, ಇಂದು ದಿಢೀರ್‌ ಪತ್ತೆ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಿಂದ ನಿನ್ನೆ ಹೆಣ್ಣು ಮಗು ಅಪಹರಣ, ಇಂದು ದಿಢೀರ್‌ ಪತ್ತೆ

- Advertisement -
- Advertisement -

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 40 ದಿನದ ಹೆಣ್ಣು ಮಗುವನ್ನು ಸೋಮವಾರ (ಜೂ.13) ಮಧ್ಯಾಹ್ನ ತಾಯಿಯ ಕೈಯಿಂದ ಕಿತ್ತುಕೊಂಡು ಹೋಗಲಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ, ಇಂದು (ಜೂ.14) ಆಸ್ಪತ್ರೆಯ ಆವರಣದಲ್ಲಿ ಮಗು ಪತ್ತೆಯಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ನಿವಾಸಿಯಾಗಿರುವ ಮಗುವಿನ ತಾಯಿ ಉಮ್ಮೆ ಜೈನಾಬ್ ಹೇಳುವಂತೆ, “ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ನಾನು ಅಳುತ್ತಿರುವ ಮಗುವನ್ನು ಸಮಾಧಾನ ಮಾಡಲು ಪ್ರಯತ್ನಿಸುತ್ತಿದ್ದೆ. ಮಧ್ಯವಯಸ್ಕನೊಬ್ಬ ಕಪ್ಪು ಟೀ ಶರ್ಟ್ ಧರಿಸಿ ಬಂದ ವ್ಯಕ್ತಿ ನನ್ನ ಮಗುವನ್ನು ಕಿತ್ತುಕೊಂಡಾಗ ನಾನು ಎದ್ದು ಅವನ ಹಿಂದೆ ಓಡಲು ಪ್ರಯತ್ನಿಸಿದೆ. ಆದರೆ ಆಗಲ್ಲಿಲ್ಲ. ಆತ ವೇಗವಾಗಿ ಹೋರಟುಹೋದ. ನಾನು ಸಹಾಯಕ್ಕಾಗಿ ಕೂಗಿದೆ ಆದರೆ ಯಾರೂ ಇರಲಿಲ್ಲ” ಎಂದಿದ್ದರು.

ತಾಯಿ ಮತ್ತು ಸಂಬಂಧಿಕರು ಎಚ್ಚರಿಕೆ ನೀಡಿದ ಕೂಡಲೇ ಆಸ್ಪತ್ರೆಯ ಭದ್ರತಾ ಪ್ರಭಾರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಹೇಳಿಕೆ ಹಾಗೂ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಗಳ ಹುಡುಕಾಟಕ್ಕೆ ಎರಡು ತಂಡಗಳನ್ನು ರಚಿಸಿದ್ದರು.

ಇಂದು ಕಿಮ್ಸ್ ಆಸ್ಪತ್ರೆಯ ಕಾಂಪೌಂಡ್ ಬಳಿ ಮಗುವನ್ನಿಟ್ಟು ಪರಾರಿಯಾಗಿದ್ದಾರೆ. ನಿನ್ನೆ ಕಳ್ಳತನವಾಗಿದ್ದ ಮಗುವೇ ಇದು ಅನ್ನೋದು ಖಾತ್ರಿಯಾದ ಮೇಲೆ ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ. ಪೊಲೀಸರ ತನಿಖೆಯ ಬಳಿಕ ಅಪಹರಣ ಮಾಡಿದ ಆರೋಪಿಗಳ ಬಗ್ಗೆ ತಿಳಿಯಬೇಕಾಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಎಲ್ಲಿಯೂ ಮಗುವನ್ನು ಎತ್ತಿಕೊಂಡು ಓಡುತ್ತಿರುವ ಯಾವುದೇ ಸುಳಿವು ಸಿಲುಕಿಲ್ಲ. ಆಸ್ಪತ್ರೆಯಲ್ಲಿ ಬಿಗಿ ಭದ್ರತೆಯಿದ್ದರೂ ಮಗು ಹೇಗೆ ಕಳ್ಳತನವಾಯಿತು ಎಂಬ ಹಲವು ಅನುಮಾನಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...