Homeಕರ್ನಾಟಕರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ 'ಬಿಜೆಪಿ' ಪ್ರತಿಭಟನೆ

ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಇತ್ತೀಚೆಗೆ 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಹಳೆಯ ಕೇಸ್‌ ವಿಲೇವಾರಿ ಭಾಗವಾಗಿ  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಆರೋಪಿಯ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆಯನ್ನು ನಡೆಸುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆ  ಹದ್ದಿನಂತೆ ಕಾಯುತ್ತಿದ್ದ ಬಿಜೆಪಿ ಇದನ್ನೇ ರಾಜಕೀಯಕ್ಕೆ ಬಳಸಿಕೊಂಡಿದ್ದು, ತಮ್ಮ ಕೀಳು ಮಟ್ಟದ ರಾಜಕೀಯಕ್ಕೆ ಕ್ರಿಮಿನಲ್‌ ಓರ್ವನ ಬಂಧನವನ್ನು ಅಸ್ತ್ರವಾಗಿ ಬಳಸಿರುವುದು ವಿಪರ್ಯಾಸವೇ ಆಗಿದೆ.

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

ಶ್ರೀಕಾಂತ್‌ಗೆ ‘ಕರಸೇವಕನ’ ಹಣೆ ಪಟ್ಟಿ ಕಟ್ಟಿ ಬಂಧನ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ  ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

1992ರ ಡಿ.5ರಂದು ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಹುಬ್ಬಳ್ಳಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇತರ ಆರೋಪಿಗಳ ಪತ್ತೆಗೆ ಇತ್ತೀಚೆಗೆ ಪೊಲೀಸರು ಬಲೆ ಬೀಸಿದ್ದರು. ಆ ಮೂಲಕ 1992ರ ಹಬ್ಬಳ್ಳಿ ಗಲಭೆ ಕೇಸ್‌ ಮರುಜೀವ ಪಡೆದುಕೊಂಡಿತ್ತು. ಇನ್ನುಳಿದ ಆರೋಪಿಗಳಾದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸಲು ತಂಡ ರಚನೆ ಮಾಡಿದ್ದರು.

ಬಿಜೆಪಿಯ ಈ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹಿಂದುತ್ವ ಮುಂದಿಟ್ಟುಕೊಂಡು ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರಸಾದ್ ಅಬ್ಬಯ್ಯ, ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯದಲ್ಲಿ ನಾನಾ ಸಮಸ್ಯೆಗಳಿವೆ. ಅವುಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಬದಲಾಗಿ ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದು ಬಿಜೆಪಿಯ ಹತಾಶೆಯನ್ನು ಸೂಚಿಸುತ್ತದೆ. ಬಿಜೆಪಿಗರಿಗೆ ಕ್ರಿಮಿನಲ್​ಗಳ ಮೇಲೆ ಪ್ರೀತಿ ಇದ್ದರೆ, ತಮ್ಮದೇ ಸರ್ಕಾರ ಇದ್ದಾಗ ತಮ್ಮ ಭಕ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿಕೊಳ್ಳಬೇಕಿತ್ತು. ಅವರಿಗೆ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣಗಳು ಇರಬೇಕು. ಅವರು ಓಡಾಡಬೇಕೆಂಬ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ಶ್ರೀಕಾಂತ್‌ ಬಂಧನದ ಕುರಿತು ಮಾತನಾಡಿದ ಬಿಕೆ ಹರಿಪ್ರಸಾದ್‌, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಪ್ರಕರಣಗಳಿವೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್‌, ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್‌, ದೀರ್ಘಕಾಲದಿಂದ ಬಾಕಿ ಉಳಿದಿರುವ ಹಳೆಯ ಪ್ರಕರಣ​ಗಳನ್ನು ಕ್ಲಿಯರ್ ಮಾಡುವಂತೆ ಆದೇಶ ಕೊಟ್ಟಿದ್ದೇವೆ. ಇದರ ಭಾಗವಾಗಿ ಬಾಬರಿ ಮಸೀದಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ಗಲಭೆ ಕೇಸ್‌ಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಹಿಂದೂ ಕಾರ್ಯಕರ್ತರ ಬಣ್ಣ ಹಚ್ಚುವುದು ಸೂಕ್ತವಲ್ಲ. ಕಾನೂನಿನ ಅಡಿಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಉದ್ದೇಶ ಪೂರಕವಾಗಿ ಯಾವುದನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ವಕ್ತಾರ ರಮೇಶ್‌ ಈ ಬಗ್ಗೆ ಮಾತನಾಡಿದ್ದು, ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ:CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...