ಮಸೀದಿಯಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಪ್ರಚೋದನಾಕಾರಿ ಹೇಳಿಕೆ ಕೊಟ್ಟ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಗರ ಪಾಲಿಕೆ 8ರ ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಎಂಬವರು ಮುತಾಲಿಕ್ ವಿರುದ್ಧ ಧರ್ಮಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂದು ದೂರು ನೀಡಿದ್ದಾರೆ.
ಮುತಾಲಿಕ್ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಬಂದ ಪ್ರಮೋದ್ ಮುತಾಲಿಕ್ ಮಾದ್ಯಮದವರೊಂದಿಗೆ ಮಾತನಾಡುತ್ತಾ, ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶವಿರೋಧಿಗಳು, ಅಂಜುಮನ್ ಕಮೀಟಿಯವರು ನೀಚರು. ನಾವು ಮಸೀದಿಯಲ್ಲಿ ಗಣಪತಿ ಕೂರಿಸುತ್ತೇವೆ. ಮಸೀದಿಯಲ್ಲಿ ಗಣೇಶ ಕೂರಿಸುವ ತಾಕತ್ತು ನಮಗಿದೆ. ನಿಮಗೆ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ಅಫಘಾನಿಸ್ತಾನ ಅಲ್ಲ, ನಿಮ್ಮಪ್ಪನ ಆಸ್ತಿಯಲ್ಲ. ಅಂಜುಮನ್ ಕಮೀಟಿ ಕೋರ್ಟ್‌ಗೆ ಹೋಗ್ತೀನಿ ಅನ್ನೋದು ಸರಿ ಅಲ್ಲ ಎಂದು ಹೇಳಿದ್ದರು.
ಇದನ್ನು ಓದಿ: ಉತ್ತರಪ್ರದೇಶ: ಪೊಲೀಸರ ನಿರ್ಲಕ್ಷ್ಯ; ಮೂವರು ಆರೋಪಿಗಳು ಕಸ್ಟಡಿಯಿಂದ ಪರಾರಿ


