Homeಕರ್ನಾಟಕಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ 'ಎನ್‌ಕೌಂಟರ್'ನಲ್ಲಿ ಹತ

ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

- Advertisement -
- Advertisement -

ಐದು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದ ವ್ಯಕ್ತಿಯನ್ನು ಪೊಲೀಸ್‌ ‘ಎನ್‌ಕೌಂಟರ್‌’ನಲ್ಲಿ ಹುಬ್ಬಳ್ಳಿಯಲ್ಲಿ ಭಾನುವಾರ ಮೃತರಾಗಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ‘ಎನ್‌ಕೌಂಟರ್’ ಮಾಡಿದ್ದಾಗಿ ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹುಬ್ಬಳ್ಳಿ ಬಾಲಕಿ ಅಪಹರಣ

ಕೊಲೆ ಆರೋಪಿಯನ್ನು ಬಿಹಾರದ ಪಾಟ್ನಾ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಹೇಳಿದ್ದಾರೆ.

ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಸಲು ಪೊಲೀಸರು ಆತನ ಕಾಲಿಗೆ ಮತ್ತು ನಂತರ ಬೆನ್ನಿಗೆ ಗುಂಡು ಹಾರಿಸಿದ್ದಾಗಿ ಪೊಲೀಸರು ಹೇಳಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆರೋಪಿಯನ್ನು ಕೆಎಂಸಿ-ಆರ್‌ಐಗೆ ಕರೆತರಲಾಯಿತು ಎಂದು ತಿಳಿಸಿದ್ದಾರೆ.

ಅದಾಗ್ಯೂ, ತೀವ್ರ ರಕ್ತಸ್ರಾವದಿಂದ ಆರೋಪಿ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳಾ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಐದು ವರ್ಷದ ಬಾಲಕಿಯೊಬ್ಬರು ತನ್ನ ತಾಯಿ ಮನೆ ಮುಂದೆ ಆಟವಾಡುತ್ತಿದ್ದಾಗ ಆರೋಪಿ ಅವರನ್ನು ಅಪಹರಿಸಿದ್ದರು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಬಾಲಕಿಯನ್ನು ನಂತರ ಹತ್ತಿರದ ಶೆಡ್‌ಗೆ ಕರೆದೊಯ್ದ ಆರೋಪಿ ಅವರ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದರು.

ಈ ವೇಳೆ ಜೋರಾಗಿ ಕೂಗಿದ್ದ ಬಾಲಕಿಯ ಶಬ್ಧ ಕೇಳಿ ಸ್ಥಳೀಯರು ಅನುಮಾನಗೊಂಡು ಅವರನ್ನು ರಕ್ಷಿಸಲು ಶೆಡ್‌ಗೆ ಧಾವಿಸಿದ್ದರು. ಆದರೆ, ಸ್ಥಳದಿಂದ ಓಡಿಹೋಗುವ ಮೊದಲು ಆರೋಪಿ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯರು ಅವನನ್ನು ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದರೂ, ಆರೋಪಿ ತಪ್ಪಿಸಿಕೊಂಡಿದ್ದ. ಅದಾಗ್ಯೂ, ಕೆಲವೇ ನಿಮಿಷಗಳಲ್ಲಿ ಮತ್ತೊಂದು ಗುಂಪು ರಿತೇಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಮಧ್ಯೆ, ಬಾಲಕಿಯನ್ನು ಕೆಎಂಸಿ-ಆರ್‌ಐಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ, ಅಶೋಕ್ ನಗರ, ವಿಶ್ವೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಅಥವಾ ಆತನನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿ ದಿನವಿಡೀ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸ್ ಉನ್ನತ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಫಲಿತಾಂಶ ಸಿಕ್ಕಿರಲಿಲ್ಲ ಮತ್ತು ಸಮಯ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳಲು ಪ್ರಾರಂಭವಾಯಿತು. ಸಂಜೆ 6:00 ರ ಸುಮಾರಿಗೆ, ಕೆಎಂಸಿ-ಆರ್‌ಐ ಪ್ರವೇಶ ದ್ವಾರದ ಮುಂದೆ ಜಮಾಯಿಸಿದ ಜನರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹುಬ್ಬಳ್ಳಿ-ಧಾರವಾಡ ರಸ್ತೆಯನ್ನು ತಡೆದಿದ್ದರು. ಈ ವೇಳೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಅವರು ಟೈರ್‌ಗಳನ್ನು ಸಹ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, ಆರೋಪಿ ರಿತೇಶ್ ಕುಮಾರ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಬಾಲಕಿ ಅಪಹರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...