Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.

ಹುಬ್ಬಳ್ಳಿಯ ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ವಿವೇಕಾನಂದ ಎನ್ನುವ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದ ಕಾರಣಕ್ಕೆ, ಇದೇ ಡಿಸೆಂಬರ್ 21 ರಂದು ಆಕೆ ಗರ್ಭಿಣಿಯಿದ್ದಾಗಲೇ ಅವಳ ತಂದೆ ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ, ಆಕೆಯ ಗಂಡ ಮತ್ತವನ ತಂದೆತಾಯಿಗಳ ಮೇಲೂ ದೈಹಿಕವಾಗಿ ದಾಳಿ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸುವ ಜೊತೆಗೆ, ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಪರಿಣಾಮ, ಇಂತಹ ಹೇಯ ಕೃತ್ಯಗಳು ನಡೆಯುತ್ತಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಸಂಸ ಒಕ್ಕೂಟ, ದಲಿತ ಸಂಘರ್ಷ ಸಮಿತಿ (ಸಂಯೋಜಕ), ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ, ತಮಟೆ ಮೀಡಿಯಾ, ಎಐಎಸ್‌ಎ, ಸ್ಲಂ ಜನಾಂದೋಲನ – ಕರ್ನಾಟಕ, ಸ್ಲಂ ಜನರ ಸಂಘಟನೆ – ಕರ್ನಾಟಕ, ಜನವಾದಿ ಮಹಿಳಾ ಸಂಘಟನೆ, ಬಯಲು ಬಳಗ, ಎಐಸಿಸಿಟಿಯು, ಎಐಎಂಎಸ್‌ಎಸ್‌, ಎಐಪಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಬಹುತ್ವ ಕರ್ನಾಟಕ, ನಾವೆದ್ದು ನಿಲ್ಲದಿದ್ದರೆ, ಎಸ್‌ಎಫ್‌ಐ, ಡಿಎಚ್‌ಎಸ್‌, ಗಮನ ಮಹಿಳಾ ಸಮೂಹ, ಪಿ.ಯು.ಸಿ.ಎಲ್ – ಕರ್ನಾಟಕ , ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಕ್ಕೊತ್ತಾಯಗಳು:

  1. ಮಾನ್ಯ ಅವರ ಪತಿಯ ಕುಟುಂಬಕ್ಕೆ ಸರ್ಕಾರವು ರಕ್ಷಣೆ ಮತ್ತು ಪರಿಹಾರ ನೀಡಬೇಕು.
  2. ವಿವೇಕಾನಂದ ಅವರ ಬದುಕಿನ ಖಾತ್ರಿಗಾಗಿ ಅವರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು.
  3. ಪ್ರಕರಣದಲ್ಲಿ ಸರ್ಕಾರವು ನ್ಯಾಯಯುತ, ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೃತ್ಯ ಎಸಗಿದ
  4. ಕೃತ್ಯಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  5. ರಾಜ್ಯ ಸರ್ಕಾರವು ಸಾರ್ವಜನಿಕ ಸಮಾಲೋಚನೆ ಸೇರಿದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು.
  6. ಇದರಲ್ಲಿ ಮರ್ಯಾದೆಗೇಡು ಅಪರಾಧಗಳನ್ನು ತಡೆಗಟ್ಟುವಿಕೆ, ಸಂತ್ರಸ್ತರ ರಕ್ಷಣೆ, ಸಾಕ್ಷಿಗಳ ರಕ್ಷಣೆ, ಪರಿಹಾರ
  7. ಕ್ರಮಗಳು ಹಾಗೂ ವಿವಾಹ ಆಯ್ಕೆಯ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದೃಢೀಕರಿಸಲು ಮತ್ತು ರಕ್ಷಿಸಲು ಅಗತ್ಯ ಕ್ರಮಗಳನ್ನು ಒಳಗೊಂಡಿರಬೇಕು.
  8. ಮರ್ಯಾದೆಗೇಡು ಹತ್ಯೆಗಳ ತಡೆಗೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
  9. ಜಾತಿ ಆಧಾರಿತ ಹಿಂಸೆ ಮತ್ತು ಪಿತೃಪ್ರಧಾನ ಧೋರಣೆಗಳು ಎದುರಿಸಲು ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಮೌಲ್ಯಗಳನ್ನು ಉತ್ತೇಜಿಸಲು ಪೊಲೀಸ್, ಸ್ಥಳೀಯ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.
  10. ಸಂವಿಧಾನದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಆಶಯಗಳನ್ನು ಖಾತ್ರಿಪಡಿಸಲು ಸರ್ಕಾರಗಳು ಜಾತಿಯ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು.

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ-ಮಲ್ಯ ಇಬ್ಬರನ್ನೂ ಭಾರತಕ್ಕೆ ಕರೆತರುವುದಾಗಿ ವಿದೇಶಾಂಗ ಸಚಿವಾಲಯ ಭರವಸೆ

ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಸೇರಿದಂತೆ ಆರ್ಥಿಕವಾಗಿ ಪರಾರಿಯಾಗಿರುವವರನ್ನು ವಿದೇಶದಿಂದ ವಾಪಸ್ ಕರೆತಂದು ದೇಶದಲ್ಲಿ ಕಾನೂನು ಕ್ರಮ ಜರುಗಿಸಲು ಬದ್ಧವಾಗಿದೆ ಎಂದು ಭಾರತ ಸರ್ಕಾರ ಶುಕ್ರವಾರ ಹೇಳಿದೆ. ವಿಜಯ್ ಅವರೊಂದಿಗೆ ಸಾಮಾಜಿಕ ಮಾಧ್ಯಮ...

ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ದಾಳಿ: ಸೇನಾ ಅಧಿಕಾರಿಗಳ ಹೇಳಿಕೆ

ಉಕ್ರೇನಿಯನ್ ರಾಜಧಾನಿ ಕೈವ್ ನಲ್ಲಿ ಶನಿವಾರ ಮುಂಜಾನೆ ರಷ್ಯಾದಿಂದ ಬೃಹತ್ ದಾಳಿ ನಡೆದಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.  ಶನಿವಾರ ಬೆಳಗಿನ ಜಾವ ನಗರದಲ್ಲಿ ಸ್ಫೋಟಗಳ ಸದ್ದು ಕೇಳಿಬಂದಿತು, ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿವೆ...

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...