Homeಕರ್ನಾಟಕಹುಬ್ಬಳ್ಳಿಯಲ್ಲಿ ಕ್ರಿಮಿನಲ್‌ ಪರ ಪ್ರತಿಭಟನೆ: ಆರ್‌.ಅಶೋಕ್‌ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿಯಲ್ಲಿ ಕ್ರಿಮಿನಲ್‌ ಪರ ಪ್ರತಿಭಟನೆ: ಆರ್‌.ಅಶೋಕ್‌ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಹುಬ್ಬಳ್ಳಿಯಲ್ಲಿ 1992ರ ಗಲಭೆ ಪ್ರಕರಣದ ಆರೋಪಿ, ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದ ಶ್ರೀಕಾಂತ ಪೂಜಾರಿಯ ಬಂಧನವನ್ನು ರಾಜಕೀಯ ಅಸ್ತ್ರವಾಗಿ ಬಳಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕ ಆರ್‌.ಅಶೋಕ್‌ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

15 ಪ್ರಕರಣಗಳ ಆರೋಪಿ ಶ್ರೀಕಾಂತ ಪೂಜಾರಿಯನ್ನು 1992ರಲ್ಲಿ ಹುಬ್ಬಳ್ಳಿಯಲ್ಲಿ ಮಳಿಗೆಗೆ ಬೆಂಕಿ ಹಚ್ಚಿ ಹಿಂಸಾಚಾರವನ್ನು ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಳೇ ಕೇಸ್‌ ವಿಲೇವಾರಿ ದೃಷ್ಟಿಯಲ್ಲಿ ಪೊಲೀಸರು ಬಂಧಿಸಿದ್ದರು. ಕ್ರಿಮಿನಲ್‌ ಓರ್ವನ ಬಂಧನದ ಬೆನ್ನಲ್ಲಿ ಆತನನ್ನು ‘ಕರಸೇವಕ’ ಎಂದು ಹೆಸರಿಟ್ಟು ಬಿಜೆಪಿ ರಾಜಕೀಯ ಫಸಲು ತೆಗೆಯಲು ಮುಂದಾಗಿತ್ತು. ಇದರ ಭಾಗವಾಗಿಯೇ ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆ ಎದುರು ಜ. 3ರಂದು ಪ್ರತಿಭಟನೆ ನಡೆಸಿತ್ತು.

ಪ್ರತಿಭಟನೆ ವೇಳೆ ಮುಖ್ಯಮಂತ್ರಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಆರೋಪಿಸಿ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್‌ ಹಳ್ಳೂರು ಜ.5ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಆರ್‌.ಅಶೋಕ್‌, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್‌. ಪಾಟೀಲ, ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರು ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ರೌಡಿಶೀಟರ್‌ ಶ್ರೀಕಾಂತ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ನೆಪದಲ್ಲಿ ಜ.3ರಂದು ಶಹರ ಪೊಲೀಸ್‌ ಠಾಣೆ ಎದುರು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಖ್ಯಮಂತ್ರಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಅವಾಚ್ಯ ಪದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿ ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕ್ರಿಮಿನಲ್ಹಿನ್ನೆಲೆ ಹೊಂದಿದ್ದ ಆರೋಪಿ:

ಹುಬ್ಬಳ್ಳಿ ಶಹರ ಠಾಣೆ ಪೊಲೀಸರಿಂದ ಬಂಧಿತ ಶ್ರೀಕಾಂತ ಪೂಜಾರಿಯ ಹಿನ್ನೆಲೆ ನೋಡಿದಾಗ ಆತ ಕ್ರಿಮಿನಲ್‌ ಎನ್ನುವುದು ಬಯಲಾಗಿದೆ. ಆತನ ಮೇಲೆ ಒಟ್ಟು 15 ಪ್ರಕರಣಗಳಿರುವ ಬಗ್ಗೆ ವರದಿಯಾಗಿತ್ತು. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್‌ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ. ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್‌ಗಳಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ.

1992ರಲ್ಲಿ ಮಳಿಗೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 31 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶ್ರೀಕಾಂತ ಪೂಜಾರಿಯನ್ನು 2023ರ ಡಿಸೆಂಬರ್‌ 29ರಂದು ಬಂಧಿಸಲಾಗಿತ್ತು. ಶ್ರೀಕಾಂತ್ ಪೂಜಾರಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾನೆ.  ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಶುಕ್ರವಾರ ಆತನಿಗೆ ಜಾಮೀನು ಮಂಜೂರು ಮಾಡಿತ್ತು.

ಇದನ್ನು ಓದಿ: ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರ ‘ಬಿಜೆಪಿ’ ಪ್ರತಿಭಟನೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...