Homeಕರ್ನಾಟಕ1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ.

ಬಾಬರಿ ಮಸೀದಿ ಧ್ವಂಸದ ಒಂದು ದಿನದ ಮೊದಲು ಅಂದರೆ ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದಾಗ ಆರೋಪಿತ ವ್ಯಕ್ತಿಗಳು 30ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ಮೂವರು ಆರೋಪಿಗಳು ಮೃತಪಟ್ಟಿದ್ದಾರೆ. ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಆರೋಪಿಗಳಾದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅವರ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

ಪೊಲೀಸ್ ಕಮಿಷನರ್ ಸ್ಪಷ್ಟನೆ:

ಈ ಬಗ್ಗೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್, ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಭೇದಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. 2006ರಲ್ಲಿ ಈ ಪ್ರಕರಣವನ್ನು ದೀರ್ಘ ಕಾಲದಿಂದ ಬಾಕಿಯಿರುವ ಪ್ರಕರಣಗಳ ಪಟ್ಟಿಗೆ ಸೇರಿಸಲಾಗಿತ್ತು. ಕಳೆದ 3 ತಿಂಗಳಲ್ಲಿ ನಾವು ಅಂತಹ 37 ಪ್ರಕರಣಗಳನ್ನು ಭೇದಿಸಿದ್ದೇವೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.  ಹುಬ್ಬಳ್ಳಿ ಹಿಂಸಾಚಾರ ಪ್ರಕರಣದ ಆರೋಪಿಗಳ ಪೈಕಿ ಮೂವರು ಸಾವಿನಪ್ಪಿದ್ದಾರೆ. ಅವರ ಡೆತ್ ನೋಟ್ ಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಬಂಧಿತ ವ್ಯಕ್ತಿ 30 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಈಗ ಪತ್ತೆಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಇದರಲ್ಲಿ ವಿಶೇಷತೆ ಏನು ಇಲ್ಲ. ಸಾಮಾನ್ಯ ಪ್ರಕರಣಗಳಂತೆ ಇದನ್ನು ಸಹ ತನಿಖೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಗೃಹ ಸಚಿವರ ಹೇಳಿಕೆ: 

ದೀರ್ಘಕಾಲದಿಂದ ಬಾಕಿ ಉಳಿದಿರುವ ಹಳೆಯ ಪ್ರಕರಣ​ಗಳನ್ನು ಕ್ಲಿಯರ್ ಮಾಡುವಂತೆ ಆದೇಶ ಕೊಟ್ಟಿದ್ದೇವೆ. ಇದರ ಭಾಗವಾಗಿ ಬಾಬರಿ ಮಸೀದಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ಗಲಭೆ ಕೇಸ್‌ಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಹಿಂದೂ ಕಾರ್ಯಕರ್ತರ ಬಣ್ಣ ಹಚ್ಚುವುದು ಸೂಕ್ತವಲ್ಲ. ಕಾನೂನಿನ ಅಡಿಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಉದ್ದೇಶ ಪೂರಕವಾಗಿ ಯಾವುದನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆ:

ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್‌, ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ವೇಳೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು: ಪೋಷಕರು ಫೋಟೋಶೂಟ್‌ಗೆ ಹೋಗಬೇಡ ಎಂದಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...