Homeಕರ್ನಾಟಕಹಳೆ ಹುಬ್ಬಳ್ಳಿ ಗಲಭೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

- Advertisement -
- Advertisement -

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ನಾಲತವಾಡ ಹಾಗೂ ಸಿಕಂದರ್‌ ಎಂಬವರಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

2022ರ ಏ.17ರಂದು ದುಷ್ಕರ್ಮಿಯೋರ್ವ ಮುಸ್ಲಿಂ ಸಮುದಾಯದ ಜನರ ಭಾವನೆಗೆ ಧಕ್ಕೆ ತರುವ ರೀತಿಯ  ನಿಂದನಾತ್ಮಕ ಪೋಸ್ಟ್‌ ಮಾಡಿದ್ದ. ಇದನ್ನು ಖಂಡಿಸಿ ಜನರು ಪೊಲೀಸ್‌ ಠಾಣೆಯ ಎದುರು ಪ್ರತಿಭಟಿಸಿ ಆರೋಪಿಯ ಬಂಧನಕ್ಕೆ ಪಟ್ಟು ಹಿಡಿದಿದ್ದರು. ಆ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಗಲಭೆ ಉಂಟಾಗಿತ್ತು. ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು ಮತ್ತು ಪೊಲೀಸ್‌ ವಾಹನಗಳನ್ನು ಕೂಡ ಜಖಂ ಮಾಡಲಾಗಿತ್ತು.

ಈ ಮೊದಲು ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ ನಗರಸಭಾ ಸದಸ್ಯ ನಜೀರ್‌ ಹೊನ್ಯಾಳ ಸಹಿತ 7 ಮಂದಿಗೆ ಜಾಮೀನು ಮಂಜೂರಾಗಿತ್ತು.

ಬೆಂಗಳೂರಿನ ಕೊತ್ವಾಲ ಎಂಬ ನ್ಯಾಯಾಧೀಶರು ಹಿರಿಯ ವಕೀಲರ ಮೂಲಕ ಇಬ್ಬರ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 12 ಎಫ್‌ಐಆರ್‌ಗಳು ದಾಖಲಾಗಿದ್ದವು. ಈ ಮೊದಲು ಪ್ರಕರಣದ ತನಿಖೆ ನಡೆಸಿದ್ದ ಹಳೆ ಹುಬ್ಬಳ್ಳಿ ಪೊಲೀಸರು ತನಿಖೆ ನಡೆಸಿ ನಾಲ್ಕು ಸಾವಿರ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...