Homeಮುಖಪುಟನೇಹಾ ಕೊಲೆ ಪ್ರಕರಣ: 'ತನಿಖೆ ದಿಕ್ಕು ತಪ್ಪುತ್ತಿದೆ' ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

- Advertisement -
- Advertisement -

ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿದ್ದೆ, ನನ್ನಿಂದಾದ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನಯ್ಯ ಹಿರೇಮಠ, ‘ಮಗಳು ಕೊಲೆಯಾದ ನಂತರ ನಾನು ದುಃಖದಲ್ಲಿ ಇದ್ದೆ. ಮಗಳ ಅಂತ್ಯಕ್ರಿಯೆವರೆಗೂ ನನ್ನ ಜೊತೆಯಲ್ಲಿದ್ದ ನನ್ನವರು, ನಂತರ ಕಂಡಿರಲಿಲ್ಲ. ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿ, ಮಾಹಿತಿಯ ಕೊರತೆಯಿಂದ ಸರ್ಕಾರದ ವಿರುದ್ಧ ಮಾತನಾಡಿದ್ದೆ. ಪ್ರಕರಣದ ಕುರಿತು ಎಲ್ಲಾ ಮಾಹಿತಿಯನ್ನು ನಮ್ಮ ಪಕ್ಷದವರೇ ಸರ್ಕಾರಕ್ಕೆ ಒದಗಿಸಿದ್ದಾರೆ, ನನ್ನಿಂದ ತಪ್ಪಾಗಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದವರು ತೆರೆಮರೆಯಲ್ಲಿ ನನ್ನ ಮಗಳಿಗೆ ನ್ಯಾಯ ಕೊಡಿಸುವಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಪ್ರಕರಣ ಸಿಐಡಿಗೆ ವಹಿಸುವಲ್ಲಿಯೂ ಅವರ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಮಿಷನರ್ ಕೂಡ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಅವರ ವಿರುದ್ಧವೂ ನಾನು ಅಸಮಧಾನ ವ್ಯಕ್ತಪಡಿಸಿದ್ದೆ. ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದ ನಾನು ಏನೇ ತಪ್ಪು ಮಾತನಾಡಿದರೂ ಅನ್ಯಥಾ ಭಾವಿಸದೆ ನನ್ನಿಂದಾದ ತಪ್ಪಿಗೆ ಎಲ್ಲರಿಂದಲೂ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇಂತಹ ಪ್ರಕರಣಗಳು ನಡೆದಾಗ ಸೂಕ್ತ ಕ್ರಮ ಕೈಗೊಳ್ಳಲು ವಿಶೇಷ ಕಾನೂನು ರಚಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆ ಕಾನೂನಿಗೆ ‘ನೇಹಾ ಹಿರೇಮಠ ಕಾಯ್ದೆ’ ಎಂದು ಹೆಸರಿಡಬೇಕು. ಅಂತಹ ಕಾಯ್ದೆ ಜಾರಿಗೆ ಬಂದರೆ ಅಪರಾಧ ಮಾಡುವ ಮನಸ್ಥಿತಿಯವರಿಗೆ ಭಯ ಹುಟ್ಟಿಸುತ್ತದೆ. ಮತ್ತೊಂದು ಇಂತಹ ಪ್ರಕರಣ ಎಲ್ಲಿಯೂ ಮರುಕಳಿಸಬಾರದು. ಎಲ್ಲಾ ಹೆಣ್ಣು ಮಕ್ಕಳು ನಿರ್ಭಯದಿಂದ ಕಾಲೇಜಿಗೆ ಹೋಗುವಂತಾಗಬೇಕು ಎಂದು ಹೇಳಿದ್ದಾರೆ.

ಪ್ರಕರಣ ಸಿಐಡಿ ತನಿಖೆಗೆ: 

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿದೆ.

ಏಪ್ರಿಲ್ 18ರಂದು ಸಂಜೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಫಯಾಝ್ ಬಾಬಾಸಾಹೇಬ್ ಖೊಂಡಾನಾಯಕ್ ಎಂಬಾತನನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದರು.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...