Homeಚಳವಳಿಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

ಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಪ್ರತಿಭಟಿಸುತ್ತಿದ್ದ ರೈತರಿಗೆ ಬೆಂಬಲ ನೀಡಿದ ಸೈನಿಕರೊಬ್ಬರನ್ನು ಪೊಲೀಸರು ಇಂದು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.

ಈ ಕುರಿತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಪತ್ರಕರ್ತರಾದ ಅರುಣ್ ಕುಮಾರ್ ಟ್ವೀಟ್ ಮಾಡಿ, “ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದ ಸೈನಿಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಜೆಗೆಂದು ತಮ್ಮ ಹಳ್ಳಿಯಾದ ಕುಂದಗೋಳಕ್ಕೆ ಮರಳಿದ್ದ ಸೈನಿಕ ಇಂದಿನ ಭಾರತ್ ಬಂದ್‌ನಲ್ಲಿ ಭಾಗವಹಿಸಿದ್ದರು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕಳೆದ 13 ದಿನಗಳಿಂದ ಕೊರೆವ ಚಳಿಯಲ್ಲಿ ಹೋರಾಟ ನಡೆಸಿರುವ ರೈತರು ಕರೆ ನೀಡಿದ್ದ ಇಂದಿನ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ಖ್ಯಾತ ಕನ್ನಡ ಚಿತ್ರನಟ ಡಾ.ಶಿವರಾಜ್‌ ಕುಮಾರ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...