Homeಮುಖಪುಟಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ವನ್ಯ ಜೀವಿಗಳ ಮೇಲಾಗುವ ಪರಿಣಾಮ ಸಮೀಕ್ಷೆಗೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅಂಕೋಲಾ-ಹುಬ್ಬಳ್ಳಿ ಬ್ರಾಡ್‌ಗೇಜ್ ರೈಲು ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳಲ್ಲಿನ ವನ್ಯ ಜೀವಿಗಳ ಮೇಲಾಗುವ ಪರಿಣಾಮದ ಸಾಧಕ-ಭಾದಕಗಳ ಸಮೀಕ್ಷೆ ಸ್ವತಂತ್ರವಾಗಿ ನಡೆಸಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ವನ್ಯ ಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕ ಜೋಡಿಸುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಈ ಭಾಗದ ಜನರ ಬಹು ದಿನದ ಕನಸು. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸದರಿ ರೈಲು ಮಾರ್ಗಕ್ಕಾಗಿ ಸುದೀರ್ಘ ಹೋರಾಟ ನಡೆಯುತ್ತ ಬಂದಿದೆ. ಆದರೆ ಇದನ್ನು ಪರಿಸರವಾದಿಗಳು ನಿರಂತರವಾಗಿ ವಿರೋಧಿಸ್ತುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೆ ಅರ್ಧಕ್ಕೆ ಬಂದುನಿಂತಿರುವ ಅಂಕೋಲಾ-ಹುಬ್ಬಳ್ಳಿ ನಡುವಿನ 164.44 ಕಿ.ಮೀ. ಉದ್ದದ ರೈಲು ಮಾರ್ಗ ನಿಮಾಣಕ್ಕೆ 20-3-2020ರಂದು ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿ ಅನುಮತಿ ಕೊಟ್ಟಿತ್ತು.

ಇದನ್ನು ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಪೌಂಡೇಶನ್ ಮತ್ತು ಗಿರಿಧರ್ ಕುಲಕರ್ಣಿ ಎಂಬವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇವೆರಡು ಅರ್ಜಿಗಳು ಬುಧವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗಿಯ ಪೀಠದ ಮುಂದೆ ಬಂದಿದ್ದವು. ವಾದ ಆಲಿಸಿದ ನ್ಯಾಯಪೀಠ “ಅಭಿವೃದ್ಧಿಯಾಗಬೇಕು, ಆದರೆ ಅದರಿಂದ ವನ್ಯ ಜೀವಿ ಸಂಪತ್ತಿಗೆ ತೊಂದರೆಯಾಗಬಾರದು. ಆದ್ದರಿಂದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಯೋಜನೆಯ ಸಾಧಕ-ಬಾಧಕಗಳ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸಬೇಕು. ಲಭ್ಯವಿರುವ ಸಮೀಕ್ಷೆ ಮತ್ತು ವರದಿ ಪರಿಶೀಲಿಸಬೇಕು. ತಜ್ಞರ ನೆರವು ಬೇಕಿದ್ದರೆ ಪಡೆದುಕೊಳ್ಳಬಹುದು” ಎಂದು ಅಭಿಪ್ರಾಯಪಟ್ಟಿತು.

ಉಚ್ಛ ನ್ಯಾಯಾಲಯದ ತೀರ್ಪನ್ನು ಹುಬ್ಬಳ್ಳಿ-ಅಂಕೋಲಾ ರೈಲು ಹೋರಾಟ ಕ್ರಿಯಾ ಸಮಿತಿ ಸ್ವಾಗತಿಸಿದ್ದು, ಹೈಕೋರ್ಟ್ ನಿರ್ದೇಶನವು ಯೋಜನೆ ಜಾರಿಗಾಗಿ ಸಮಿತಿ ನಡೆಸುತ್ತಿರುವ ಸುದೀರ್ಘ ಹೋರಾಟಕ್ಕೆ ಶಕ್ತಿ ತುಂಬಿದೆ. ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಸರ್ಕಾರದ ವತಿಯಿಂದ ಯೋಜನೆಗೆ ಪೂರಕವಾಗಿ ಇರುವ ವಿವಿಧ ಅಧ್ಯಯನ ವರದಿಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಒದಗಿಸಲು ಕ್ರಮಕೈಗೊಳ್ಳುವಂತೆ ವಿನಂತಿಸಲಾಗುವುದೆಂದು ಹೋರಾಟ ಸಮಿತಿಯ ಅಧ್ಯಕ್ಷ ರಮಾನಂದ ನಾಯಕ, ಕಾರ್ಯದರ್ಶಿ ವಿಠ್ಠಲದಾಸ ಕಾಮತ್ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಹೈಕೋರ್ಟ್ ನಿರ್ದೇಶನವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗಾಗಿ ವಿಶೇಷ ವಕೀಲರನ್ನು ನೇಮಿಸಿತ್ತು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಎಷ್ಟು ಲಾಭದಾಯಕ ಮತ್ತು ಪರಿಸರ ಪೂರಕವೆಂಬುದನ್ನು ಸರ್ಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಗೂ ಮನವರಿಕೆ ಮಾಡಿಕೊಡಲಿದೆಯೆಂದು ಹೆಬ್ಬಾರ್ ಹೇಳಿದ್ದಾರೆ.


ಇದನ್ನೂ ಓದಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS

  2. Hubli 🔁Ankola railway route plan is the best one for the goods and passangers also… So plz expand the surroundung lines connect with Hubli Dividion SSS.

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...