Homeಕರ್ನಾಟಕಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ವ್ಯಂಗ್ಯ

ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ವ್ಯಂಗ್ಯ

’RSS ವಿರುದ್ಧ ಮಾತನಾಡಿದಾಗೆಲ್ಲಾ ನಾನು ಭಸ್ಮ ಆಗುತ್ತೇನೆ ಎನ್ನುತ್ತಾರೆ. ಆದರೆ, ನಾನು ಚೆನ್ನಾಗಿಯೇ ಇದ್ದೇನೆ'

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ‘ಚಡ್ಡಿ’ ಗದ್ದಲ ಹೆಚ್ಚಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಾಲಾ ಪಠ್ಯಪುಸ್ತಕಗಳ ಕೇಸರಿಕರಣವನ್ನು ವಿರೋಧಿಸಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI)ನ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿವಾಸದ ಹೊರಗೆ ಚಡ್ಡಿಗಳನ್ನು ಸುಟ್ಟುಹಾಕಿದ ನಂತರ ಚಡ್ಡಿ ಗದ್ದಲ ಹೆಚ್ಚಾಗಿದೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಚಾಲಕರ ಹುದ್ದೆಯಲ್ಲಿ ದಲಿತ ಅಥವಾ ಇತರ ಹಿಂದುಳಿದ ಜಾತಿಗಳು ಏಕಿಲ್ಲ ಎಂದು ಕಿಡಿಕಾರಿದ್ದಾರೆ.

“ಆರ್‌ಎಸ್‌ಎಸ್ ಒಂದು ಜಾತ್ಯತೀತವಲ್ಲದ ಸಂಘಟನೆ ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ದಲಿತ, ಒಬಿಸಿ ಅಥವಾ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಎಂದಾದರೂ ಸರಸಂಚಾಲಕ ಆಗಿದ್ದಾರೆಯೇ..? ನನ್ನ ಆರೋಪ ಸತ್ಯವಾಗಿರುವುದರಿಂದ ಅವರು ಸುಮ್ಮನಿದ್ದಾರೆ” ಎಂದರು.

ಇದನ್ನೂ ಓದಿ: ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಆರೆಸ್ಸೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಕಳುಹಿಸಲು ಚಡ್ಡಿಗಳನ್ನು ಸಂಗ್ರಹಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ,  “ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದಾಗೆಲ್ಲಾ ನಾನು ಭಸ್ಮ ಆಗುತ್ತೇನೆ ಎನ್ನುತ್ತಾರೆ. ಆದರೆ, ನಾನು ಚೆನ್ನಾಗಿಯೇ ಇದ್ದೇನೆ. ಚಡ್ಡಿಗಳು ಇನ್ನೇನು ಮಾಡಬಹುದು..? ಅವರಿಗೆ ಬೇರೆ ಕೆಲಸ ಏನಿದೆ. ಜನರ ಕೆಲಸ, ಬಡವರ ಕೆಲಸ ಮಾಡಲ್ಲ, ದಲಿತರ ಕೆಲಸ ಮಾಡಲ್ಲ.  ಚಡ್ಡಿಗಳು ಚಡ್ಡಿ ಕೆಲಸ ಮಾಡುತ್ತಾರೆ” ಎಂದಿದ್ದಾರೆ.

ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಕೇಸರಿಕರಣದ ಆರೋಪದ ಮೇಲೆ ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ‘ಚಡ್ಡಿಗಳನ್ನು’ ಸುಡಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದರು.

ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್ ನಾಯಕರು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಬಗ್ಗೆ ಮಾತನಾಡಬೇಕು ಎಂದು ಮಂಗಳವಾರ ಹೇಳಿದ್ದಾರೆ.

“ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಬೇರೆ ವಿಷಯವಿಲ್ಲ, ಆದ್ದರಿಂದ ಅವರು ಇಂತಹ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದ ಜನರು ಎಲ್ಲವನ್ನು ನೋಡುತ್ತಿದ್ದಾರೆ. ಅವರು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಬಗ್ಗೆ ಮಾತನಾಡಬೇಕು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...