Homeಕರ್ನಾಟಕಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ಉತ್ಸವಕ್ಕೆ ತಡೆ ಇಲ್ಲ: ತಡರಾತ್ರಿ ವಿಚಾರಣೆಯಲ್ಲಿ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ್ ಉತ್ಸವ ಆಚರಿಸುವ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ರಾತ್ರಿ ಹತ್ತು ಗಂಟೆಯಲ್ಲಿ ವಿಚಾರಣೆ ನಡೆಸಿತು. ಹುಬ್ಬಳ್ಳಿ ಪಾಲಿಕೆ ಅಧಿಕಾರಿಗಳ ನಿಲುವಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ವಕ್ಫ್ ಆಸ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಳನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ರಾತ್ರಿ 10 ಗಂಟೆಗೆ ವಿಚಾರಣೆ ಆರಂಭಿಸಿತು.

ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣಪತಿ ಉತ್ಸವ ಆಚರಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಗಣೇಶ್ ಉತ್ಸವದ ತಡೆ ಅರ್ಜಿ ಸಲ್ಲಿಕೆಯಾಗಿತ್ತು. ಈ ವಿಚಾರವಾಗಿ ತುರ್ತು ವಿಚಾರಣೆ ನಡೆಸಿ, ಅರ್ಜಿದಾರರು ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿತು.

ಈ ಆಸ್ತಿಯು ಸರ್ಕಾರಕ್ಕೆ ಸೇರಿದ್ದು, ಪಾಲಿಕೆ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು ವಿಚಾರಣೆ ನಡೆಸಿದರು.

ವಿಚಾರಣೆ ಹೀಗಿತ್ತು:

ರಾತ್ರಿ 10: 06

ಅರ್ಜಿದಾರರು: (ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ) ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ದೃಷ್ಟಿಯಿಂದ, ಈ ಅರ್ಜಿಯಲ್ಲೂ ಅದೇ ಆದೇಶವನ್ನು ನೀಡಬಹುದು.

ರಾತ್ರಿ 10: 08

ಪ್ರತಿವಾದಿಗಳು: ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಶ್ನೆಗಳು ಆಸ್ತಿಯ ಒಡೆತನಕ್ಕೆ ಸಂಬಂಧಿಸಿದೆ. ಇದು ಸರ್ಕಾರಿ ಭೂಮಿಯಾಗಿದೆ. ಅಲ್ಲಿನ ಪ್ರಶ್ನೆ ಇಲ್ಲಿ ಬರುವುದಿಲ್ಲ.

ಪ್ರತಿವಾದಿಗಳು: ಈ ಪ್ರಕರಣದಲ್ಲಿ ಖಾಸಗಿ ಕಕ್ಷಿದಾರರು ಮೊಕದ್ದಮೆ ಹೂಡಿದರು, ಅದು ಅಂತಿಮವಾಗಿ ಮೇಲ್ಮನವಿಯಲ್ಲಿ ದೃಢೀಕರಿಸಲ್ಪಟ್ಟಿದೆ.

ಪ್ರತಿವಾದಿಗಳು: ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. 1991ರ ವಹಿವಾಟು ಪರವಾನಗಿಯಾಗಿದೆ, ಗುತ್ತಿಗೆ ಅಲ್ಲ ಎಂದು ಹೇಳಿದೆ. ಇಲ್ಲಿನ ಭೂಮಿಯನ್ನು ಬಳಸುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಘೋಷಿಸಲಾಗಿದೆ.

ರಾತ್ರಿ 10: 12

ಪ್ರತಿವಾದಿಗಳು: ಈ ಜಾಗವನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿ ಇಡಬೇಕಿತ್ತು. ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿಶ್ಲೇಷಿಸಬೇಕಾಗುತ್ತದೆ.

ಕೋರ್ಟ್: ಯಾವುದೇ ವಿವಾದವಿಲ್ಲವೇ? ಆದರೆ ಸತ್ಯಗಳು ವಿಭಿನ್ನವಾಗಿವೆ.

ಪ್ರತಿವಾದಿ: ಯಾವುದೇ ವಿವಾದವಿಲ್ಲ. ಇದು ಕಾರ್ಪೋರೇಷನ್‌ ಆಸ್ತಿಯಾಗಿದೆ. ಆಸ್ತಿಯನ್ನು ತನಗೆ ಬೇಕಾದಂತೆ ಬಳಸುವ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಮಧ್ಯಂತರ ಆದೇಶದ ಬಳಿಕ ಆಯುಕ್ತರು ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ಪ್ರತಿವಾದಿ: ಇದು ಕೇವಲ ಮೂರು ದಿನಗಳ ಆಚರಣೆ. ಸೂಚಿಸಿದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ 30×30 ಪ್ಯಾಂಡಲ್ ಹಾಕಲಾಗಿದೆ. ನಾವು ಅದನ್ನು ನ್ಯಾಯಯುತ ಮತ್ತು ಸರಿಯಾದ ಉದ್ದೇಶಕ್ಕಾಗಿ ಬಳಸುತ್ತೇವೆ.

ರಾತ್ರಿ 10: 23

ಪ್ರತಿವಾದಿ: ಅರ್ಜಿಯಲ್ಲಿ ಪರಿಗಣಿಸಲು ನಿಜವಾಗಿಯೂ ಏನೂ ಉಳಿದಿಲ್ಲ.

ರಾತ್ರಿ 10: 25

ಅರ್ಜಿದಾರರು: ಆಕ್ಷೇಪಣೆಗಳನ್ನು ಪರಿಗಣಿಸದೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದು ಅವರ ಆಸ್ತಿ, ಅವರು ಏನು ಬೇಕಾದರೂ ಮಾಡಬಹುದು. ಆದರೆ ಈ ಸಮಯದಲ್ಲಿ ಅಲ್ಲ. ಅವರು ವಾಸ್ತವಿಕ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಬೇಕು. ಇದೇ ಮೊದಲ ಬಾರಿಗೆ ಪಾಲಿಕೆ ಇಂಥ ನಿರ್ಧಾರ ಕೈಗೊಂಡಿದೆ. ಇದು ಪಾಲಿಕೆ ಆಸ್ತಿಯಾಗಿದ್ದರೂ ಇಂದಿನ ವಾಸ್ತವ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯ ನಿರ್ಧರಿಸಬೇಕು.

ಕೋರ್ಟ್: ರಾತ್ರಿ 10:45ಕ್ಕೆ ಆದೇಶ ನೀಡಲಾಗುವುದು.

ರಾತ್ರಿ 11: 18

ಆದೇಶ ಮಾಡಲು ಮುಂದಾದ ಪೀಠ

ರಾತ್ರಿ 11: 23

ನ್ಯಾಯಾಲಯ: ಆಸ್ತಿಯು ಪ್ರತಿವಾದಿಯವರಿಗೆ ಸೇರಿದೆ ಎಂಬುದರಲ್ಲಿ ವಿವಾದವಿಲ್ಲ. ತೀರ್ಪಿನ ಪರಿಶೀಲನೆಯಿಂದ ಪ್ರತಿವಾದಿಯು ಆಸ್ತಿಯ ಮಾಲೀಕರೆಂದು ಸ್ಪಷ್ಟವಾಗುತ್ತದೆ. ಅರ್ಜಿದಾರರು ಎರಡು ಸಂದರ್ಭಗಳಲ್ಲಿ ಮಾತ್ರ ಜಾಗವನ್ನು ಬಳಸಲು ಅನುಮತಿ ಪಡೆದಿದ್ದಾರೆ.

ರಾತ್ರಿ 11:30

ನ್ಯಾಯಾಲಯ: ಸದರಿ ಆಸ್ತಿಯು ಪ್ರತಿವಾದಿಯದ್ದಾಗಿದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ.

ಕೋರ್ಟ್ ನಿಲುವು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ಅಧಿಕಾರಿಗಳ ನಿರ್ಧಾರ‌ಕ್ಕೆ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. (ಇಲ್ಲಿ ಗಣೇಶ್ ಚತುರ್ಥಿ ಆಚರಿಸಲು ತಡೆಯುವುದಕ್ಕೆ ಸಾಧ್ಯವಿಲ್ಲವೆಂದು ಕೋರ್ಟ್ ತಿಳಿಸಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...