Homeಕರ್ನಾಟಕಹುಬ್ಬಳ್ಳಿ ಉದ್ವಿಗ್ನ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಅಭಿಷೇಕ್ ಹೀರೆಮಠ ಬಂಧನ

ಹುಬ್ಬಳ್ಳಿ ಉದ್ವಿಗ್ನ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಅಭಿಷೇಕ್ ಹೀರೆಮಠ ಬಂಧನ

- Advertisement -
- Advertisement -

ಅಭಿಷೇಕ್ ಹೀರೆಮಠ ಎಂಬ ಯುವಕನೊಬ್ಬ ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ಹಾರುವಂತೆ ಚಿತ್ರವನ್ನು ಎಡಿಟ್ ಮಾಡಿ, ಕೋಮು ಪ್ರಚೋದನಾಕಾರಿ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದರ ಪರಿಣಾಮ ಹುಬ್ಬಳ್ಳಿಯಲ್ಲಿ ಕೋಮು ಉದ್ವಿಗ್ವ ಪರಿಸ್ಥಿತಿ ಉಂಟಾಗಿದೆ.

ಈ ಸಂಬಂಧ ಶನಿವಾರ ತಡರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಮುಸ್ಲಿಂ ಜನಸಮೂಹ ಬೃಹತ್ ಪ್ರತಿಭಟನೆ ನಡೆಸಿದೆ.  ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಆರೋಪಿಯು ಮಸೀದಿಯ ಚಿತ್ರದ ಮೇಲೆ ಕೇಸರಿ ಧ್ವಜ ಹಾಕಿದ್ದಲ್ಲದೆ “ತಲೆ ಕೆಟ್ಟರೆ ಇಲ್ಲಿಯೂ ಭಗವಧ್ವಜ ಹಾರಿಸುವೆ, ಜೈ ಶ್ರೀರಾಮ್, ಜೈ ಹಿಂದೂ ಸಾಮ್ರಾಟ್” ಎಂದು ಬರೆದು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಎನ್ನಲಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಆರೋಪಿ ಅಭಿಷೇಕ್ ಹೀರೆಮಠನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಲವ್‌ ಜಿಹಾದ್‌’ಗೆ ‘ಲವ್‌ ಕೇಸರಿ’ ಅಂತೆ, ವಿರಕ್ತಿಯ ಕೇಸರಿ ಮತ್ತು ಲವ್ ಹೇಗೆ ಕೂಡುತ್ತವೆ?:…

ಘಟನೆ ಕುರಿತು ಹುಬ್ಬಳ್ಳಿ ಪೊಲೀಸ್ ಕಮಿಷನರ್ ಲಾಭೂರಾಮ್ ಮಾತನಾಡಿ “ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ಆದರೆ ನಿನ್ನೆ ರಾತ್ರಿ ಮಾತುಕತೆ ವೇಳೆ ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದು ಸರಿಯಲ್ಲ. ಈ ಕೃತ್ಯದ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಜನರು ಶಾಂತಿ ಕಾಪಾಡಬೇಕೆಂದು” ಮನವಿ ಮಾಡಿದ್ದಾರೆ.

ಘಟನೆಯನ್ನು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. “ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿಯಾಗಿವೆ. ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್ ಸುರಿಯದೇ ಸಹನೆ ಮೆರಯಬೇಕಿತ್ತು” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...