Homeಕರ್ನಾಟಕಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

ಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

- Advertisement -
- Advertisement -

ಫೆಬ್ರುವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಅದೇ ದಿನ “ಹಸು ತಬ್ಬಿಕೊಳ್ಳುವ ದಿನ” ಆಚರಿಸಲು ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಮನವಿ ಮಾಡಿದೆ.

“ಅನಿಮಲ್‌ ವೆಲ್‌ಫೇರ್‌ ಆಫ್‌ ಇಂಡಿಯಾ”ದ ಅಧಿಕೃತ ವೆಬ್‌ಸೈಟ್‌ನಲ್ಲಿಈ ಕುರಿತು ಪ್ರಕಟಿಸಲಾಗಿದ್ದು, ಮಂಡಳಿಯ ಕಾರ್ಯದರ್ಶಿ ಎಸ್‌.ಕೆ.ದುತ್ತ ಅವರು ಇದಕ್ಕೆ ಸಹಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ?

“ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದು ಮಂಡಲಿಯ ಮನವಿಯಲ್ಲಿ ಉದ್ದೇಶಿಸಲಾಗಿದೆ.

“ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದಿದೆ.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಲಾಗಿದೆ.

No photo description available.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿವೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದಾರೆ.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದಾರೆ.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...