Homeಕರ್ನಾಟಕCAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

CAA, NRC ಯಿಂದ ಅಜಾದಿ, ಮೋದಿ-ಶಾರಿಂದ ಅಜಾದಿ: ತುಮಕೂರಿನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ಜನಸಾಗರದ ನುಡವೆ ಅಜಾದಿ ಘೋಷಣೆಗಳು ಮೊಳಗಿದವು. ಎಲ್ಲಿ ನೋಡಿದರೂ ಜನರೇ ಗಿಜಿಗುಡುತ್ತಿದ್ದರು. ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದಿನ ವಿಸ್ತಾರವಾದ ಬಯಲು ಜನರಿಂದ ತುಂಬಿ ಹೋಗಿತ್ತು. ಪ್ರಗತಿಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನಾ ಧರಣಿಯಲ್ಲಿ ಸಿಸಿಎ ಯಿಂದ ಅಜಾದಿ, ಎನ್.ಆರ್.ಸಿ ಯಿಂದ ಅಜಾದಿ, ಮೋದಿಯಿಂದ ಅಜಾದಿ, ಅಮಿತ್ ಶಾರಿಮದ ಅಜಾದಿ ಬೇಕು ಎಂದು ಪ್ರತಿಭಟನಾಕಾರರ ದೊಡ್ಡ ದನಿಯಲ್ಲಿ ಕೂಗಿ ಹೇಳಿದರು.

ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದವರಲ್ಲಿ ವಿದ್ಯಾರ್ಥಿಗಳು, ಯುವಜನರು, ವಕೀಲರು, ಪ್ರಗತಿಪರ ಚಿಂತಕರು, ಮುಸ್ಲಿಂ ಮೌಲ್ವಿಗಳು, ಜಾತ್ಯತೀತ ಮನೋಭಾವವುಳ್ಳವರು ಇದ್ದರು. ಡಿಸೆಂಬರ್ 19ರಂದು ಧರಣಿ ನಡೆಸಲು ಪೊಲೀಸರು ನಿಷೇಧಾಜ್ಞೆಯ ನೆಪದಲ್ಲಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ, ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳು ಮೊಳಗಿದವು. ಜನರನ್ನು ಒಡೆಯುವುದನ್ನು ನಿಲ್ಲಿಸಬೇಕು ಎಂದು ಸಾರಿ ಸಾರಿ ಹೇಳಿದರು.

ವಿಡಿಯೋ ನೋಡಿ

ವಾಹನದಲ್ಲಿದ್ದ ವೇದಿಕೆಯ ಮೇಲೆ ನಿಂತಿದ್ದ ಮುಖಂಡರು ಭಾಷಣ ಮಾಡುವುದಕ್ಕೂ ಮೊದಲು ಜನಗಣ ಮನ ರಾಷ್ಟ್ರಗೀತೆಯನ್ನು ಹಾಡಲಾಯಿತು. ಎಲ್ಲರೂ ರಾಷ್ಟ್ರಗೀತೆಯನ್ನು ಶಿಸ್ತಿನಿಂದ ಹಾಡಿದರು. ನೂರಾರು ಪೊಲೀಸರು ಕೂಡ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಭಾರತಕ್ಕೆ ಜಯವಾಗಲಿ, ಸಂವಿಧಾನ ಉಳಿಯಲಿ ಎಂದು ಕೂಗಿದರು. ಪ್ರತಿಭನಾಕಾರರು ಸಿಎಎ ಮತ್ತು ಎನ್ಆರ್‌ಸಿ ಯಿಂದಾಗುವ ಸಂಕಷ್ಟಗಳ ಕುರಿತು ಚರ್ಚೆ ನಡೆಸಿದರು. ಮಾತುಮಾತಿಗೂ ಅಜಾದಿ ಬೇಕೆಂದು ಒತ್ತಾಯಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಮದಣಿ ಕಾಯ್ದೆ ಜಾರಿಗೊಳಿಸಬಾರದು. ಇದರಿಂದ ಎಲ್ಲರೂ ಮತ್ತೊಮ್ಮೆ ಕ್ಯೂ ನಿಲ್ಲಬೇಕಾದಂತಹ ಪರಿಸ್ಥಿತಿ ಬರುತ್ತದೆ. ಅಷ್ಟೇ ಅಲ್ಲ, ಸಿಎಎ ಮತ್ತು ಎನ್ಆರ್‌ಸಿ ಸಂವಿಧಾನದ ಆರ್ಟಿಕಲ್ 14, 21 ಮತ್ತು 15ನೇ ಪರಿಚ್ಛೇದದ ಸ್ಪಷ್ಟ ಉಲ್ಲಂಘನೆಯಾಗಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಪದ್ದತಿ ನಿಲ್ಲಬೇಕು. ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಸಿಎಎ ಮತ್ತು ಎನ್ಆರ್‌ಸಿ ದೇಶದ ಜನರನ್ನು ಧರ್ಮಧ ಆಧಾರದಲ್ಲಿ ಒಡೆಯುತ್ತವೆ. ಇಂತಹ ಸಂವಿಧಾನಬಾಹಿರ ಮತ್ತು ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾವು ಈ ದೇಶದಲ್ಲಿ ಹುಟ್ಟಿದ್ದೇವೆ. ಈ ದೇಶದಲ್ಲಿ ಬೆಳೆದು ಬದುಕಿದ್ದೇವೆ. ಇಲ್ಲಿಯೇ ಸಾಯುತ್ತೇವೆ. ನಾವು ಭಾರತೀಯರು, ಭಾರತದ ಪೌರತ್ವವನ್ನು ಹುಟ್ಟಿನಿಂದಲೇ ಪಡೆದಿದ್ದೇವೆ. ಕೇಂದ್ರ ಸರ್ಕಾರ ಮತರಾಜಕಾರಣ ಮಾಡುತ್ತಿದೆ. ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದಿವಾಸಿಗಳು, ನಿರಾಶ್ರಿತರು, ಬಡವರು, ಭೂಮಿ ಇಲ್ಲದವರು, ಮನೆ ಇಲ್ಲದವರು, ಅಲೆಮಾರಿಗಳು, ಹಟ್ಟಿ, ಹಾಡಿ, ದೊಡ್ಡಿಗಳಲ್ಲಿ ವಾಸ ಮಾಡುತ್ತಿರುವವರಿಗೆ ಯಾವುದೇ ದಾಖಲೆಗಳಿಲ್ಲ. ಇಂತವರನ್ನು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಸಿಎಎ-2019 ಕಾಯ್ದೆಯಂತೆ ಆಫ್ಘಾನಿಸ್ತಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ದಿಂದ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದು ಕೇವಲ ಐದು ವರ್ಷ ನೆಲೆಸಿದ್ದರೆ ಅವರನ್ನು ಅಕ್ರಮ ವಲಸಿಗರೆಂದು ಪರಿಗಣಿಸದೆ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದರಲ್ಲಿ ದೊಡ್ಡ ಯೋಜನೆಗಳಿಂದ ಸ್ಥಳಾಂತರಗೊಂಡವರು, ವಲಸೆ ಕಾರ್ಮಿಕರು, ಬುಡಕಟ್ಟು ಸಮುದಾಯಗಳು, ಕಳ್ಳಸಾಗಾಣಿಕೆಯಾದವರು, ಮದುವೆ ನಂತರ ಗಂಡನ ಮನೆಗೆ ಹೋದ ಮಹಿಳೆಯರು ಸೇರಿದಂತೆ ಇವರೆಲ್ಲರೂ ಎನ್.ಆರ್.ಸಿ. ಪೌರತ್ವದ ಆಧಾರಕ್ಕಾಗಿ ಬೇಕಾಗುವ 50 ವರ್ಷಗಳ ದಾಖಲೆಗಳನ್ನು ಪಡೆಯುವುದು ಕಷ್ಟಸಾಧ್ಯವೇ ಸರಿ ಎಂದು ಮುಖಂಡರು ಆರೋಪಿಸಿದರು.

ಶ್ರೀಲಂಕಾ ತಮಿಳರು, ಮ್ಯಾನ್ಮಾರಿನ ರೊಹಿಂಗ್ಯಾ ಸಮುದಾಯ, ಚೀನದಿಂದ ಬಂದಿರುವ ಬೌದ್ಧರು, ಬಾಂಗ್ಲಾದೇಶದ ಜಾತ್ಯತೀತ ವಿಚಾರವಾದಿಗಳು, ಪಾಕಿಸ್ತಾನದ ಆಹ್ಮದಿಯಾ ಸಮುದಾಯ ಮತ್ತು ಎಲ್ಲಾ ದೇಶಗಳ ಜಾತ್ಯತೀತರನ್ನು ಈ ಕಾಯ್ದೆಯಿಂದ ಹೊರಗಿಡಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿ ಕಾಯ್ದೆ ಮೂಲಭೂತ ಹಕ್ಕುಗಳು, ನೈಸರ್ಗಿಕ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಭಾರತದಲ್ಲಿ ವಸುದೈವಂ ಕುಟುಂಬಕಂ’ ಮತ್ತು ‘ಸರ್ವೇಜನೋ ಸುಖಿನೋಭವಂತು’ ‘ಮಾನವ ಕುಲಂ ತಾನೊಂದೇ ವಲಂ’ ‘ಸರ್ವಜನಾಂಗದ ಶಾಂತಿಯ ತೋಟ’ ‘ಧಾರ್ಮಿಕ ಸಹಿಷ್ಣತೆ’, ‘ಭ್ರಾತೃತ್ವ’ ‘ಸೋದರತೆ ತತ್ವಗಳು ಮಾನವೀಯತೆಯನ್ನೇ ಸಾರುತ್ತವೆ. ಹಿಂದೂ, ಮುಸ್ಲಿಂ, ಕ್ರಿಶ್ಛಿಯನ್, ಬೌದ್ದ ಸಿಖ್, ಪಾರ್ಸಿ, ಜೈನ ಸೇರಿದಂತೆ ಹಲವು ಧರ್ಮಗಳ ಜನರು ಪರಸ್ಪರ ಯಾರಿಗೂ ತೊಂದರೆಯಾಗದಂತೆ ಸೋದರರಂತೆ ಜೀವಿಸುತ್ತಾ ಬಂದಿದ್ದಾರೆ. ಇಂತಹ ವೈವಿಧ್ಯಮಯ ಭಾಷೆ, ಧರ್ಮ, ಆಚಾರ-ವಿಚಾರಗಳ ಪರಂಪರೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸಿಎಎ ಮತ್ತು ಎನ್‍ಆರ್‍ಸಿ ಜಾರಿಯಿಂದ ಜನತೆ ಘಾಸಿಗೊಂಡಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜನಪರ ಚಿಂತಕ ಪ್ರೊ.ಕೆ.ದೊರೈರಾಜ್, ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಡಿಎಸ್ಎಸ್ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಮಾಜಿ ಶಾಸಕರಾದ ಎಸ್.ಷಪಿ ಅಹಮದ್, ರಫೀಕ್ ಅಹಮದ್, ಮುಖಂಡರಾದ ಅಸ್ಲಾಂ ಪಾಷಾ, ನಯಾಜ್ ಅಹಮದ್, ಪರಿಸರವಾದಿ  ಸಿ.ಯತಿರಾಜು, ಕರ್ನಾಟಕ ಪ್ರಾಂತ ರೈತ ಸಂಘದ ಬಿ.ಉಮೇಶ್, ಸಾಮಾಜಿಕ ಕಾರ್ಯಕರ್ತರಾದ ತಾಜುದ್ದೀನ್, ಅತೀಕ್ ಅಹಮದ್, ಸಿಐಟಿಯು ಮುಖಂಡ ಸೈಯದ್ ಮುಜೀಬ್, ಸಿಪಿಐ ಗಿರೀಶ್, ಸಿಪಿಎಂ ಎನ್.ಕೆ.ಸುಬ್ರಮಣ್ಯ, ಅಫ್ತಾಬ್, ಕುಮಾರ್, ಉಬೇದ್ ಅಹಮದ್, ನಿಸಾರ್ ಅಹಮದ್, ರಫೀಕ್, ಕೆಜಿಎನ್ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...