Homeಕರ್ನಾಟಕಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಬೃಹತ್‌ ರ್‍ಯಾಲಿ

ಮೈಸೂರಿನಲ್ಲಿ ದಸಂಸ ಪ್ರತಿಭಟನೆ ನಡೆಸಿ ಚಿತ್ರ ಸಾಹಿತಿಯ ಹೇಳಿಕೆಯನ್ನು ಬೆಂಬಲಿಸಿದೆ

- Advertisement -
- Advertisement -

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿ, ಬಲಪಂಥೀಯರು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಅವರಿಗೆ ಸೂಕ್ತ ರೀತಿಯ ಭದ್ರತೆ ಒದಗಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಗುರುವಾರದಂದು ವಿಶ್ವವಿದ್ಯಾಲಯ ಆವರಣದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದೆ. ಜೊತೆಗೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೂಡಾ ದಲಿತ ಸಂಘರ್ಷ ಸಮಿತಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ದಾಖಲಿಸಿ ಹಂಸಲೇಖ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 1,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

“ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳನ್ನು ಮುಚ್ಚುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಮುಖ್ಯವಾಗಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಿಂದ ಪ್ರಾರಂಭಗೊಂಡ ರ್‍ಯಾಲಿ, ಅಂಬೇಡ್ಕರ್ ಕೇಂದ್ರ ಗ್ರಂಥಾಲಯದ ಮೂಲಕ ಸಾಗಿ, ಎಲ್ಲಾ ವಿಭಾಗಗಳಿಗೆ ಭೇಟಿ ಕೊಟ್ಟು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರನ್ನೂ ಒಳಗೊಂಡು ಆಡಳಿತ ಕಚೇರಿಯ ಮುಂದೆ ಇರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಾರ್ವಜನಿಕ ಜಾಗೃತಿ ನಡೆಸಲಾಯಿತು” ಎಂದು ಪ್ರತಿಭಟನೆಯ ಸಂಚಾಲಕರಲ್ಲೊಬ್ಬರಾದ ಲೋಕೇಶ್‌ ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕೂಪದ ವಿರಾಟ್‌ರೂಪವನ್ನು ಬಿಚ್ಚಿಟ್ಟ ಹಂಸಲೇಖ ಘಟನೆ!

“ಪ್ರಜಾತ್ಪಾತ್ಕಕ ವ್ಯವಸ್ಥೆಯಲ್ಲಿ ಜನರ ಮೂಲಭೂತ ಹಕ್ಕುಗಳಾದ ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕುತ್ತು ಬರುತ್ತಿರುವುದು ಆತಂಕಕಾರಿ ಮತ್ತು ಅಪಾಯಕಾರಿ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣ್ಯವನ್ನು ಕುರಿತು ಸತ್ಯವನ್ನು ಮಾತನಾಡುವುದು, ಬರೆಯುವುದು ಮಹಾ ಅಪರಾಧವಾಗಿ ಬಿಂಬಿತವಾಗುತ್ತಿದೆ. ಹಂಸಲೇಖರವರು ಅಸ್ಪಶ್ಯತೆಯ ನಿರ್ಮೂಲನೆಗೆ ಸಂಬಂಧಿಸಿದಂತೆ ದಲಿತರು ಮತ್ತು ಶೂದ್ರ ಸಮುದಾಯದ ಆಹಾರ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡಿರುವುದು ಸಾ೦ದರ್ಭಿಕವಾದರೂ ಸಾರ್ವಕಾಲಿಕ ಮತ್ತು ಸಂವಿಧಾನಾತ್ಮಕವಾಗಿದೆ” ಎಂದು ಒಕ್ಕೂಟ ಹೇಳಿದೆ.

“ಈ ದೇಶದ ಮನುವಾದಿಗಳಿಗೆ ಅಪರೂಪಕ್ಕಾದರು ಸತ್ಯವನ್ನು ಸಹಿಸಿಕೊಳ್ಳುವ, ಸತ್ಯವನ್ನು ಒಪ್ಪಿಕೊಳ್ಳುವ, ತಾವು ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ, ತಪ್ಪುಗಳನ್ನು ತಿದ್ದಿದವರಿಗೆ ಕೃತಜ್ಞತೆ ಸಲ್ಲಿಸುವ ದೊಡ್ಡ ಗುಣ ಇಲ್ಲಿಯವರೆವಿಗೂ ಬಾರದೆ ಇರುವುದು ದುರದೃಷ್ಟಕರ” ಎಂದು ಒಕ್ಕೂಟವು ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನಾ ರ್‍ಯಾಲಿಯಲ್ಲಿ ವಿದ್ಯಾರ್ಥಿ ಮುಖಂಡರಾದ ವೆಂಕಟೇಶ್‌ ವಿ.ಎಸ್., ಗೋಪಾಲ್ ಜಿ., ಲೋಕೇಶ್‌ ಎನ್‌.ಆರ್‌., ಸತೀಶ್‌‌ ಜಿ.ಕೆ., ಲೋಕೇಶ್‌ ಎನ್., ಚಂದ್ರು ಪೆರಿಯಾರ್‌, ಯಲ್ಲಪ್ಪ ಕೆ.ಜಿ., ಈಶ್ವರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಮೈಸೂರಿನಲ್ಲೂ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ಅವರ ಮೇಲಿನ ದಾಳಿಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯು ಪ್ರತಿಭಟನೆ ನಡೆಸಿತು.

“ಹಂಸಲೇಖರವರ ಸಮಾನತೆ ಪರ, ಭ್ರಾತೃತ್ವದ ಪರವಾದ ಮಾತುಗಳು ಬ್ರಾಹ್ಮಣಶಾಹಿ ಮನಸ್ಸುಗಳ ಎದೆಯನ್ನು ಇರಿದಂತಿದೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಕ್ಷಮೆಯಾಚಿಸುವಂತೆ ಒತ್ತಡ ಹೇರಿ, ಭಯದ ವಾತಾವರಣವನ್ನು ನಿರ್ಮಿಸಲಾಗಿದೆ” ಎಂದು ಸಂಘರ್ಷ ಸಮಿತಿಯು ಹೇಳಿದೆ.

ಇಷ್ಟೇ ಅಲ್ಲದೆ, ಇತ್ತೀಚೆಗೆ ರಾಜಕೀಯ ಚರ್ಚಾ ವಿಷಯ ಆಗಿರುವ ಬಿಟ್‌ ಕಾಯಿನ್‌ ವಿಚಾರದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿ, ಕೋಮು ದ್ವೇಷವನ್ನು ಕಾರಿದ್ದರು. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ವಿರೋಧಿಸಿಯು ಬೆಂಗಳೂರು ಮತ್ತು ಮೈಸೂರಿನ ಪ್ರತಿಭಟನೆಗಳಲ್ಲಿ ಆಕ್ರೋಶದ ಧ್ವನಿ ವ್ಯಕ್ತವಾಗಿತ್ತು.

“ಹಗರಣದ ಕುರಿತಂತೆ ಪ್ರಿಯಾಂಕ್‌ ಖರ್ಗೆಯವರು ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರಕ್ಕೆ ಉತ್ತರಿಸಲಾಗುತ್ತಿಲ್ಲ. ಹೀಗಾಗಿ ಸರ್ಕಾರ ವ್ಯರ್ಥವಾಗಿ ತಮ್ಮ ಅಂಧಾಭಿಮಾನಿಗಳ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ತಂತ್ರ ಹೂಡುತ್ತಿದೆ. ಹಾಗಾಗಿಯೆ ಹಂಸಲೇಖ ಅವರ ನ್ಯಾಯಯುತವಾದ ಹೇಳಿಕೆಯನ್ನು ನೆಪವಾಗಿಟ್ಟುಕೊಂಡು ಹಿಂದುಳಿದ ಶೋಷಿತ ಸಮುದಾಯಗಳ ಭಾವನೆಗಳ ವಿರುದ್ಧವಾಗಿ ಹೇಳಿಕೆಯನ್ನು ನೀಡುವುದು, ದೂರು ದಾಖಲಿಸುವುದು, ಹಲ್ಲೆ ನಡೆಸುವುದು, ಭಯ ಹುಟ್ಟಿಸುವುದು ಸೇರಿದಂತೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ನಡೆಯನ್ನು ಅನುಸರಿಸುತ್ತಿದೆ” ಎಂದು ದಲಿತ ಸಂಘರ್ಷ ಸಮಿತಿಯು ಕಿಡಿಕಾರಿದೆ.

ಇದನ್ನೂ ಓದಿ: ‘ಬಾಡು ಸಪ್ತಾಹ’: ಸಾಮಾಜಿಕ ಜಾಲತಾಣದಲ್ಲಿ #ಬಾಡೇ_ನಮ್_ಗಾಡು ಅಭಿಯಾನ!

ಜೊತೆಗೆ ಪ್ರಚೋದನಕಾರಿ, ಸಂವಿಧಾನ ವಿರೋಧಿ ಕಾನೂನುಬಾಹಿರ ಹೇಳಿಕೆಗಳನ್ನು ನೀಡುತ್ತಾ ಕೋಮುದ್ವೇಷ ಹರಡುವ ಮತ್ತು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಇಂತಹ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಸಂಸ ಸರ್ಕಾರಕ್ಕೆ ಒತ್ತಾಯಿಸಿದೆ.

ಹಂಸಲೇಖ ಅವರು ಇತ್ತೀಚೆಗೆ ಮೈಸೂರಿನಲ್ಲಿ ದಲಿತರ ಮನೆಗೆ ಬಲಿತವರು ಹೋಗುವುದು ಬೂಟಾಟಿಕೆ ಎಂಬರ್ಥದಲ್ಲಿ ಮಾತನಾಡುತ್ತಾ, ಪೇಜಾವರ ಸ್ವಾಮಿಯ ಉದಾಹರಣೆಯನ್ನು ನೀಡಿದ್ದರು. ಈ ವೇಳೆ ಅವರು, “ಪೇಜಾವರ ಸ್ವಾಮಿ ದಲಿತರ ಮನೆಗೆ ಹೋಗಲು ಮಾತ್ರ ಆಗುವುದು. ಅವರು ಕೋಳಿ ಕೊಟ್ಟರೆ ತಿನ್ನಕ್ಕಾಗುತ್ತಾ? ಕುರಿಯ ರಕ್ತದ ಫ್ರೈ ಮಾಡಿ ಕೊಟ್ಟರೆ ಅವರು ತಿನ್ನುತ್ತಾರೆಯೆ? ಲಿವರ್‌ ಕೊಟ್ಟರೆ ತಿನ್ನುತ್ತಾರಾ? ದಲಿತರ ಮನೆಗೆ ಬಲಿತವರು ಹೋಗುವುದು ಏನು ದೊಡ್ಡ ವಿಷಯ?” ಎಂದು ಪ್ರಶ್ನಿಸಿದ್ದರು.

ಈ ಹೇಳಿಕೆ ವೈರಲ್‌ ಆಗುತ್ತಿದ್ದಂತೆ ಹಂಸಲೇಖ ಅವರ ತೇಜೋವಧೆ ಮಾಡಲಾಗಿತ್ತು. ಅವರ ಫೋನ್‌ ನಂಬರ್‌ಗಳನ್ನು ವಾಟ್ಸಪ್‌ ಗ್ರೂಪ್‌ಗಳಲ್ಲಿ ಹರಿಯ ಬಿಟ್ಟು ಅವರಿಗೆ ನಿರಂತರ ಕಿರುಕುಳ ಕೂಡಾ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರ ನಂತರ ಹಂಸಲೇಖ ಅವರು, ತಾನು ಅಂತಹ ವೇದಿಕೆಗಳಲ್ಲಿ ಈ ಮಾತುಗಳನ್ನು ಹೇಳಬಾರದಿತ್ತು ಎಂದು ಹೇಳಿ ಕ್ಷಮೆ ಕೇಳಿದ್ದರು. ಕ್ಷಮೆ ಕೇಳಿದ ನಂತರವು ಅವರ ತೇಜೋವಧೆ ಮುಂದುವರೆದಿದ್ದು, ಅವರ ಮಾತಿನ ತಾತ್ಪರ್ಯವನ್ನು ಬದಲಾಯಿಸಿ ಬಲಪಂಥೀಯರು ಅವರನ್ನು ಅವಹೇಳನ ಮಾಡುತ್ತಿದೆ.

ಇದನ್ನೂ ಓದಿ: ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...