Homeಅಂತರಾಷ್ಟ್ರೀಯಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು - ಕೋಟ್ಯಂತರ ಡಾಲರ್ ನಷ್ಟ!

ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

- Advertisement -
- Advertisement -

ಈಜಿಪ್ಟ್‌ನ ಅತಿದೊಡ್ಡ ಸುಯೆಜ್ ಕಾಲುವೆಯ ಮಧ್ಯೆ 400 ಮೀಟರ್ ಉದ್ದದ ಬೃಹತ್ ಸರಕು ಹಡಗು ‘ಎವರ್‌ಗಿವೆನ್’ ಕಳೆದ ಮೂರು ದಿನಗಳಿಂದ ಸಿಲುಕಿಕೊಂಡಿದ್ದು, ಜಾಗತಿಕ ಹಡಗು ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಉಂಟುಮಾಡಿದೆ.

ರೆಡ್ ಸೀ ಮುಖಾಂತರ ಕಡಿದಾದ ಕಾಲುವೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಜಪಾನ್ ದೇಶದ ಈ ದೈತ್ಯ ಹಡಗಿನಿಂದಾಗಿ ಜಾಗತಿಕ ಜಲಮಾರ್ಗ ವ್ಯಾಪಾರ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಿದ್ದು, ಬಿಲಿಯನ್‌ಗಟ್ಟಲೆ ಡಾಲರ್ ನಷ್ಟ ಉಂಟಾಗುತ್ತಿದೆ. ಈ ಹಡಗನ್ನು ಆ ಸ್ಥಳದಿಂದ ಬಂದರಿಗೆ ಸಾಗಿಸುವುದು ಹರಸಾಹಸದ ಕೆಲಸ ಎಂದು ಹೇಳಲಾಗುತ್ತಿದೆ.

ಈ ಕೆಲಸ ಪೂರ್ಣಗೊಳಿಸಲು ಕೆಲವು ವಾರಗಳೇ ಬೇಕಾಗಬಹುದು ಎಂದು ಎವರ್ ಗಿವನ್ ಹಡಗನ್ನು ಅಲ್ಲಿಂದ ಸಾಗಿಸಲು ಜವಾಬ್ದಾರಿ ನೀಡಲಾಗಿರುವ ಎರಡು ಸಂಸ್ಥೆಗಳ ಪೈಕಿ ಒಂದಾಗಿರುವ ಡೆನ್ಮಾರ್ಕ್‍ನ ಬೊಸ್ಲಾಲಿಸ್ ಸಂಸ್ಥೆಯ ಸಿಒಇಒ ಪೀಟರ್ ಬೆರ್ಡೊವೊಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದ ಸ್ವಾತಂತ್ರ್ಯಕ್ಕಾಗಿ ನಾನೂ ಹೋರಾಡಿದ್ದೆ: ಪ್ರಧಾನಿ ಮೋದಿ ಹೇಳಿಕೆ

ನಂತರ ಸುಯೆಜ್ ಕಾಲುವೆ ಪ್ರಾಧಿಕಾರ ಈ ಅತ್ಯಂತ ಮಹತ್ವದ ಕಾಲುವೆ ಮುಖಾಂತರ ಎಲ್ಲಾ ಸಂಚಾರ ನಿಲ್ಲಿಸಿದೆ. ಪ್ರತಿ ದಿನ ಈ ಕಾಲುವೆ ಮೂಲಕ ಸುಮಾರು 50 ಸರಕು ಹಡಗುಗಳು ಹಾದು ಹೋಗುತ್ತವೆ ಹಾಗೂ ಸರಾಸರಿ ಜಾಗತಿಕ ಹಡಗು ಸಂಚಾರದ ಶೇ 30ರಷ್ಟು ಹಡಗುಗಳು ವಾರ್ಷಿಕವಾಗಿ ಈ ಕಾಲುವೆ ಮೂಲಕ ಸಾಗುತ್ತವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ದೈತ್ಯ ಹಡಗು ಕಾಲುವೆಯಲ್ಲಿ ಸಿಲುಕಿಗೊಂಡಿರುವುದರಿಂದ ಈಗಾಗಲೇ ಕೋವಿಡ್ ಸಾಂಕ್ರಾಮಿಕದಿಂದ ಕಂಗೆಟ್ಟಿರುವ ದೇಶಗಳು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆಯಿದ್ದು, ಸದ್ಯ ಹಡಗುಗಳು ಸುತ್ತಿ ಬಳಸಿ ಸಾಗಬೇಕಾಗಿರುವುದಿಂದ ಕಚ್ಛಾ ತೈಲ ಹಾಗೂ ಆಹಾರಧಾನ್ಯಗಳ ಬೆಲೆಗಳಲ್ಲೂ ಏರಿಕೆಯಾಗುವ ಸಾಧ್ಯತೆಯದೆ.

ಈಗಾಗಲೇ ಸುಯೆಜ್ ಕಾಲುವೆ ಬಂದ್ ಆಗಿರುವುದರಿಂದ ಗಂಟೆಗೆ ಸುಮಾರು 400 ಮಿಲಿಯನ್ ಡಾಲರ್ ನಷ್ಟ ಉಂಟಾಗುತ್ತಿದೆ. ಈ ದೈತ್ಯ ಹಡಗು 2.20 ಲಕ್ಷ ಟನ್ ಭಾರವಿದ್ದು, 193.3 ಕಿಮೀ ಉದ್ದವಿರುವ ಕಿರಿದಾದ ಸುಯೆಜ್ ಕಾಲುವೆಯನ್ನು ವಸ್ತುಶಃ ಬ್ಲಾಕ್ ಮಾಡಿದೆ. ಈ ಹಾದಿಯಲ್ಲಿ ಸಾಮಾನ್ಯವಾಗಿ ಸಾಗುವ ಸರಕು ನೌಕೆಗಳು ಹೆಚ್ಚಾಗಿ ತೈಲ, ಸಂಸ್ಕರಿತ ತೈಲ, ಆಹಾರ ಧಾನ್ಯ ಸಾಗಿಸುತ್ತವೆಯಲ್ಲದೆ ಪೂರ್ವ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಮಹತ್ವದ ಕೊಂಡಿಯಾಗಿದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...