Homeಚಳವಳಿಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ರೈತರನ್ನು ಕೂಲಿ ಕೆಲಸಕಾರರನ್ನಾಗಿ  ಮಾಡುವ ಹುನ್ನಾರ ಕಾನೂನುಗಳ ಹಿಂದಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು, ವಿರೋಧ ಪಕ್ಷಗಳು ಸದನ ಬಹಿಷ್ಕಾರ ಮಾಡಬೇಕು.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕರೆ ನೀಡಿದ್ದ ಭಾರತ್ ಬಂದ್‌ಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ರೈತ ಸಂಘಗಳು, ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಯಾವುದೇ ಭೇದವಿಲ್ಲದೇ ರೈತರಿಗಾಗಿ ಬೀದಿಗಿಳಿದು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕರಾಳ ಕಾನೂನುಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ದೌರ್ಜನ್ಯ ವಿರೋಧಿಸಿ ’ಐಕ್ಯ ಹೋರಾಟ’ ವೇದಿಕೆಯ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ನಿನ್ನೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದೆ. ಇಂದು ಕೂಡ ನೂರಾರು ಮಂದಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಇತ್ತ ಮೌರ್ಯ ಸರ್ಕಲ್ ಬಳಿಯೇ ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು, ಮತ್ತೊಂದೆಡೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯೆ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರ ಸರ್ಕಾರದ ವಿರುದ್ಧ ಮತ್ತು ನರೇಂದ್ರ ಮೋದಿ‌ ತೊಲಗಲಿ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ರೈತರು ಕರೆಕೊಟ್ಟ ಭಾರತ್ ಬಂದ್‌ಗೆ ಆಮ್ ಆದ್ಮಿ ಪಕ್ಷ ಕೂಡ ಬೆಂಬಲ ವ್ಯಕ್ತಪಡಿಸಿ, ಮೋಹನ್ ದಾಸರಿ, ವಿಜಯ್ ಶರ್ಮಾ ಮುಂತಾದ ರಾಜ್ಯ ಆಪ್ ನಾಯಕರು ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಇನ್ನೂ ಟೌನ್ ಹಾಲ್ ಸರ್ಕಲ್‌ನಲ್ಲಿ ಹಲವಾರು ಸಂಘ ಸಂಸ್ಥೆಗಳು ಭಾರಿ ಪ್ರತಿಭಟನೆ ನಡೆಸಿದವು. ಸಿಐಟಿಯು, ಕಾಂಗ್ರೆಸ್, ರೈತ ಸಂಘಟನೆಗಳು, ಡಿಎಸ್‌ಪಿ, ಯೂತ್ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ಕವಿಸೇ, ದಲಿತ್ ಟೈಗರ್ಸ್ ಸಮಿತಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದವು.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ರೈತರು ಸರ್ಕಾರ ನೀಡಿದ ಆಹಾರವನ್ನು ತೆಗೆದುಕೊಳ್ಳಲಿಲ್ಲ ಇಂತಹ ಸಂದರ್ಭದಲ್ಲಿ ರೈತರ ಸ್ವಾಭಿಮಾನ ಎಷ್ಟು ಎಂದು ಯೋಚಿಸಿ, ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಿ, ಅದರ ಸಾಧಕ ಬಾಧಕಗಳ ಕುರಿತು ಚರ್ಚೆಯಾಗಲಿ. ದೇಶದಲ್ಲಿ ರೈತರು, ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರನ್ನು ಕೂಲಿ ಕೆಲಸಕಾರರನ್ನಾಗಿ  ಮಾಡುವ ಹುನ್ನಾರ ಕಾನೂನುಗಳ ಹಿಂದಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ವಾಪಸ್ ತೆಗೆದುಕೊಳ್ಳಬೇಕು, ವಿರೋಧ ಪಕ್ಷಗಳು ಸದನ ಬಹಿಷ್ಕಾರ ಮಾಡಬೇಕು “ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷಿ ಮಾತನಾಡಿ, ’ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಅಪಾಯಕಾರಿ.   ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ನಾವು ಹಿಂಸಾ ಮಾರ್ಗವನ್ನು ತುಳಿದರೆ ಬಂದ್ ಮಾಡುವುದು ಕಷ್ಟವಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಐಕ್ಯ ಹೋರಾಟ ಸಮಿತಿಯ ಕುರುಬೂರು ಶಾಂತಕುಮಾರ್ ಹಾಗೂ ಬಡಗಲಪುರ ನಾಗೇಂದ್ರ ಮತ್ತು ಬೆಂಬಲಿಗರು ಟೌನ್ ಹಾಲ್‌ ಕಡೆ ಮೆರವಣಿಗೆ ಹೊರಟಿದ್ದರು. ಅಲ್ಲಿಗೆ ಹೋಗದಂತೆ ಪೊಲೀಸರು ತಡೆಹಿಡಿದ ನಂತರ ಮೈಸೂರು ಬ್ಯಾಂಕ್ ಸರ್ಕಲ್‌ ಕಡೆಗೆ ಮೆರವಣಿಗೆ ಹೊರಟಿತು.

ಬ್ಯಾರಿಕೇಡ್ ಹಾರಿ ಟೌನ್ ಹಾಲ್ ಕಡೆಗೆ ಹೋಗಲು ಪ್ರಯತ್ನಿಸಿದ ರೈತರನ್ನು ತಡೆದ ಪೊಲೀಸರು. ಪೊಲೀಸರು ಹಾಗೂ ರೈತರ ನಟುವೆ ಮಾತಿನ ಜಟಾಪಟಿ ನಡೆದು, ರಸ್ತೆ ಮೇಲೆ ಉರುಳಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು. ಪ್ರತಿಭಟನಾಕಾರರನ್ನು ನಿಯಂತ್ರಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು,ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಡಾ. ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Image

ಕೈಗೆ ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.


ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...