Homeಕರ್ನಾಟಕಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

ಮಾಧುಸ್ವಾಮಿ ಹೇಳಿಕೆ ವಿರೋಧಿಸಿ ಕುರುಬ ಸಮುದಾಯ ಕರೆಕೊಟ್ಟ ಹುಳಿಯಾರ್‌ ಬಂ‌ದ್‌ಗೆ ವ್ಯಾಪಕ ಬೆಂಬಲ.. ವಿಡಿಯೋ ನೋಡಿ

- Advertisement -
- Advertisement -

ಈಶ್ವರಾನಂದಪುರಿ ಸ್ವಾಮಿಗಳ ಬಗ್ಗೆ ತುಚ್ಚವಾಗಿ ಮಾತನಾಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸಂಪುಟದಿಂದ ವಜಾಮಾಡುವಂತೆ ಒತ್ತಾಯಿಸಿ ಕುರುಬ ಸಮುದಾಯದ ಸಂಘಟನೆಗಳು ಕರೆನೀಡಿರುವ ಚಿಕ್ಕನಾಯನಹಳ್ಳಿಯ ಹುಳಿಯಾರ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.

ಹುಳಿಯಾರಿನ ಹೊಸದುರ್ಗರಸ್ತೆಯಲ್ಲಿರುವ ವೃತ್ತಕ್ಕೆ ಕನಕದಾಸರ ಹೆಸರನ್ನು ಇಡುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದರು. ಕನಕ ವೃತ್ತವೆಂದು ನಾಮಕರಣ ಮಾಡಲು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಮುದಾಯದ ಸಂಘಟನೆಗಳು ಹಾಲುಮತ ಮಹಾಸಭಾ ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡಸಲಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸ್, ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಹುಳಿಯಾರಿನ ರಸ್ತೆಗಳು ಜನರ ಓಡಾಟವಿಲ್ಲದೆ ಖಾಲಿ ರಸ್ತೆಗಳು ಕಂಡುಬಂದವು. ಹುಳಿಯಾರು ಹೋಬಳಿ ಕೇಂದ್ರದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಹೋರಾಟವನ್ನು ಮುಂದುವರೆಸುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಮತ್ತು ಕುರುಬ ಸಮುದಾಯದ ಮುಖಂಡ ಸುರೇಶ್ ಬಾಬು ಮಾತನಾಡಿ, ಸಚಿವರು ಶಾಂತಿಸಭೆ ಕರೆದು ಅಶಾಂತಿ ಸೃಷ್ಟಿಸಿದ್ದಾರೆ. ಕಾನೂನು ಪಾಲಿಸಬೇಕಾದ ಕಾನೂನು ಸಚಿವರೇ ಜನರನ್ನು ಪ್ರಚೋದನೆಗೆ ಒಳಪಡಿಸಿದ್ದಾರೆ. ಸಚಿವರ ಉದ್ದಟತನದ ನಡವಳಿಕೆಯಿಂದ ಇಷ್ಟೆಲ್ಲ ಅನಾಹುತ ನಡೆಯಲು ಕಾರಣ. ಶಾಂತಿಸಭೆಯಲ್ಲಿ ಎಲ್ಲರನ್ನೂ ಸಮಾಧಾನ ಮಾಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಗುರುಗಳು ಮತ್ತು ಜನಪ್ರತಿನಿಧಿಗಳನ್ನು ಕೇವಲವಾಗಿ ಕಂಡ ಕಾರಣ ಬೇಸರ ವ್ಯಕ್ತವಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಧಟತನದಿಂದ ಮುಖ್ಯಮಂತ್ರಿಗಳು ಕ್ಷಮೆ ಕೋರುವಂತಾಯಿತು. ನಮಗೆ ಮುಖ್ಯಮಂತ್ರಿಗಳು ಕ್ಷಮೆ ಕೋರುವ ಅವಶ್ಯಕತೆ ಇಲ್ಲ. ಸಚಿವರೇ ಕ್ಷಮೆ ಕೇಳಬೇಕು. ಇಂಥವರು ಸಂಪುಟದಲ್ಲಿದ್ದರೆ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಹೀಗಾಗಿ ಸಂಪುಟದಿಂದ ತೆಗೆದುಹಾಕಿ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರು ಮಾತನಾಡಿ ಹಿಂದಿನಿಂದಲೂ ಹಿಂದುಳಿದ ವರ್ಗದ ಜನರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಅದೇ ಉದ್ಧಟ ತನದಿಂದ ನಮ್ಮ ಸಮುದಾಯದ ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕಾನೂನು ಗೌರವಿಸಬೇಕಾದ ಸಚಿವರೇ ಹೀಗೆ ನಡೆದುಕೊಂಡರೆ ಸಾಮಾನ್ಯರ ಪಾಡೇನು? ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಈಗ ಒಂದು ಸಮುದಾಯದ ಸಚಿವರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಮ್ಮ ಸಮುದಾಯದ ಸ್ವಾಮೀಜಿಗೆ ಅವಮಾನ ಮಾಡಿದ್ದು ಕೂಡಲೇ ಅವರನ್ನು ವಜಾ ಮಾಢಬೇಕು. ಮಾಧುಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಸವಣ್ಣ ಮತ್ತು ಕನಕದಾಸರು ಅನಿಷ್ಠ ಜಾತಿಪದ್ದತಿಯನ್ನು ಕಿತ್ತೊಗೆಯಬೇಕು. ಅದರಿಂದ ಹೊರಬರಬೇಕು ಎಂದು ಹೇಳಿದ್ದಾರೆ. ಆದರೆ ಸಚಿವರು ಜಾತಿಗೆ ಅಂಟಿಕೊಂಡು ಕುಳಿತಿದ್ದಾರೆ. ಸಚಿವರ ಬದಲಿಗೆ ಮುಖ್ಯಮಂತ್ರಿಗಳು ಕ್ಷಮೆ ಕೋರಿರುವುದು ಶ್ಲಾಘನೀಯ. 2010ರಲ್ಲೇ ಕನಕ ವೃತ್ತ ಎಂದು ಗ್ರಾಮ ಪಂಚಾಯಿತಿ ಸಭೆಯಲ್ಲೇ ತೀರ್ಮಾನ ಮಾಡಲಾಗಿದೆ. ಆದರೆ ಹೀಗೆ ಸಚಿವರು ಅದನ್ನು ಉಲ್ಲಂಘಿಸಲು ಹೊರಟಿರುವು ಕಿಡಿಗೇಡಿತನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಗೆ 18ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಪ್ರತಿಭಟನೆಯಲ್ಲಿ ಕುರುಬರ ಮುಖಂಡರಾದ ಶಿವಮೂರ್ತಿ, ಮಹಾಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...