Homeಕರ್ನಾಟಕಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ರಾಜ್ಯದ ಬಹುತೇಕ ಜನರ ಜೀವನವನ್ನು ಅಧೋಗತಿಗೆ ನೂಕಿದೆ. ಸಾವಿರಾರು ಕಲಾವಿದರ ಬದುಕು ಅತಂತ್ರವಾಗಿದೆ. ಇಂತಹದ್ದೇ ಸ್ಥಿತಿಯಲ್ಲಿ ಕರ್ನಾಟಕದ ಮಾನವ ಕಂಪ್ಯೂಟರ್ ಎಂದೇ ಪ್ರಸಿದ್ದರಾಗಿರುವ ವಿಶೇಷ ಚೇತನ ಸಿದ್ದು ಎಸ್‌.ಲೌಟೆ ಅವರು ಕೊರೊನಾ ಬಂದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಿದ್ದು ಎಸ್‌.ಲೌಟೆಯವರನ್ನು ನಡೆದಾಡುವ ಜ್ಞಾನ ಭಂಡಾರ, ಕರ್ನಾಟಕದ ಮಾನವ ಕಂಪ್ಯೂಟರ್ ಎಂದು ಕರೆಯಲಾಗುತ್ತದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಿದ್ಧು ಕ್ವೀಜ್‌ ಎಂಬ ಕಾರ‍್ಯಕ್ರಮ ನಿರೂಪಣೆ ಮುಖಾಂತರ ಕರ್ನಾಟಕದಲ್ಲಿ ಮನೆ ಮಾತಾಗಿದ್ದರು. ಈ ಮೂಲಕ ನೇರ ಪ್ರಸಾರದ ಟಿವಿ ಕಾರ‍್ಯಕ್ರಮ ನಡೆಸಿಕೊಟ್ಟ ವಿಶ್ವದ ಮೊದಲ ದೃಷ್ಟಿ ವಿಶೇಷ ಚೇತನ ಎಂಬ ಕೀರ್ತಿಯನ್ನೂ ಸಹ ಗಳಿಸಿದ್ದಾರೆ.

ದೃಷ್ಟಿಗಿಂತ ದೃಷ್ಟಿಕೋನ ಮುಖ್ಯ ಎಂಬುದು ಸಿದ್ದು ಅವರದ್ದೇ ಮಾತುಗಳು. ಆದರೆ, ಕೊರೊನಾ ಈಗ ಅವರನ್ನು ಸಂಕಷ್ಟಕ್ಕೆ ನೂಕಿದ್ದು, ಅದರ ವಿರುದ್ಧ ಹೋರಾಡಲು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

’ಅನಿರೀಕ್ಷಿತವಾಗಿ ನಾನು ಕೊರೊನಾಗೆ ತುತ್ತಾಗಿದ್ದು, ಕಳೆದೊಂದು ವಾರದಿಂದ ಖಾಸಗಿ ಪಿಜಿ ಸೌಕರ್ಯವೊಂದರಲ್ಲಿ ಕ್ವಾರಂಟೈನ್ ಆಗಿದ್ದೇನೆ. ಆದರೆ, ಚಿಕಿತ್ಸೆ, ಆಹಾರ ಮತ್ತು ಕೊಠಡಿ ಬಾಡಿಗೆ ಎಲ್ಲವನ್ನೂ ನಾನೇ ನಿರ್ವಹಿಸಬೇಕಾಗಿದ್ದು, ನನ್ನ ಆರ್ಥಿಕ ಸ್ಥಿತಿ ಬಹಳ ಕೆಟ್ಟದಾಗಿದೆ. ಆದ್ದರಿಂದ ನಿಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಿ. ಇದರಿಂದ ನಾನು ಸುರಕ್ಷಿತವಾಗಿ ಕೊರೊನಾ ಗೆದ್ದು ಬರಲು ಸಹಕಾರಿಯಾಗುತ್ತದೆ’ ಎಂದು ಮನವಿ ಮಾಡಿದ್ದಾರೆ.

ನೆರವು ನೀಡಲು ಬಯಸುವವರು ಕೆಳಗಿನ ಅವರ ಅಕೌಂಟ್ ಖಾತೆಯನ್ನು ಗಮನಿಸಿ.

Siddu S Loute,  ಖಾತೆ ಸಂಖ್ಯೆ: 0411101068874 , IFSC ಕೋಡ್: CNRB 0000411 ಕೆನರಾ ಬ್ಯಾಂಕ್, ರಾಜಾಜಿ ನಗರ ಶಾಖೆ, ರಾಜಾಜಿ ನಗರ, ಬೆಂಗಳೂರು 560010


ಇದನ್ನೂ ಓದಿ: ಒಲಂಪಿಕ್ ಅಂಗಳಕ್ಕೆ ಟಿಕೆಟ್‌ ಕಲೆಕ್ಟರ್‌ : ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...