Homeಚಳವಳಿಮಾನವಹಕ್ಕುಗಳ ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

ಮಾನವಹಕ್ಕುಗಳ ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

- Advertisement -
- Advertisement -

ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ, ಮಾನವಹಕ್ಕುಗಳ ಹೋರಾಟಗಾರ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರು ಹೈದರಾಬಾದ್‌ನ ನಿಜಾಮ್‌ ವೈದ್ಯಕೀಯ ವಿಜ್ಞಾನ ಆಸ್ಪತ್ರೆ(ನಿಮ್ಸ್‌)ಯಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹೃದಯ ಸ್ತಂಭನಕ್ಕೆ ಒಳಗಾಗಿದ್ದ ಅವರು ರಾತ್ರಿ 8.30 ಕ್ಕೆ ನಿಧನರಾದರು ಎಂದು ಆಪ್ತರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

57 ವರ್ಷದ ಸಾಯಿಬಾಬಾ ಅವರು ಅನಾರೋಗ್ಯದ ಕಾರಣ 10 ದಿನಗಳ ಹಿಂದೆ ನಿಮ್ಸ್‌ಗೆ ದಾಖಲಾಗಿದ್ದರು. ಪಿತ್ತಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಭೀಮಾ ಕೊರೆಗಾವ್ ಪ್ರಕರಣದಲ್ಲಿ ಮಾವೋವಾದಿಗಳೊಂದಿಗೆ ನಂಟಿದೆ ಎಂದು ಆರೋಪಿಸಿ ಬಂಧನಕ್ಕೆ ಒಳಗಾಗಿದ್ದ ಅವರನ್ನು ಏಳು ತಿಂಗಳ ಹಿಂದೆ ಪ್ರಕರಣದಿಂದ ಖುಲಾಸೆ ಮಾಡಲಾಗಿತ್ತು.

ವಿಕಲಚೇತನರಾಗಿದ್ದ ಮತ್ತು ಗಾಲಿಕುರ್ಚಿಯನ್ನು ಬಳಸುತ್ತಿದ್ದ ಸಾಯಿಬಾಬಾ ಅವರನ್ನು 2014ರ ಮೇ ತಿಂಗಳಲ್ಲಿ ಮೊದಲ ಬಾರಿಗೆ ಬಂಧಿಸಲಾಗಿತ್ತು. ಈ ಪ್ರಕಣದಲ್ಲಿ ಅವರ ಮೇಲೆ ಮಾವೋವಾದಿ ಸಂಪರ್ಕದ ಆರೋಪ ಹೊರಿಸಲಾಗಿತ್ತು. ಪ್ರಕರಣದಲ್ಲಿ ಅವರು ಏಳು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ಜೈಲಿನಲ್ಲಿ ಅವರಿಗೆ ವೈದ್ಯಕೀಯ ಸೇವೆಯನ್ನು ನಿರಾಕರಿಸಲಾಗಿತ್ತು.

ಇದನ್ನೂಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, ತನ್ನನ್ನು ಮೊದಲಿಗೆ ಅಪಹರಿಸಲಾಯಿತು ನಂತರ ಬಂಧಿಸಲಾಗಿತ್ತು ಎಂದು ಹೇಳಿದ್ದಾರೆ. ಈ ವೇಳೆ ಪೊಲೀಸರು ತನ್ನನ್ನು ತಪ್ಪಾಗಿ ನಿರ್ವಹಿಸಿದ್ದರಿಂದ ನರಮಂಡಲಕ್ಕೆ ಹಾನಿಯಾಗಿತ್ತು ಮತ್ತು ಜೈಲಿನಲ್ಲಿದ್ದ ವೇಳೆ ಹೃದಯದ ಸಮಸ್ಯೆ ಪ್ರಾರಂಭವಾಗಿತ್ತು ಎಂದು ಹೇಳಿದ್ದಾರೆ. ಜೈಲಿನಲ್ಲಿ ದೀರ್ಘಕಾಲದವರೆಗೆ ಆಹಾರ ಸೇವಿಸದ ಕಾರಣ ಪಿತ್ತಕೋಶದಲ್ಲಿ ಕಲ್ಲುಗಳು ಕಾಣಿಸಿಕೊಂಡಿತ್ತು ಎಂದು ಅವರು ಹೇಳಿದ್ದರು.

ಸಾಯಿಬಾಬಾ ಅವರನ್ನು ಮಾರ್ಚ್ 7, 2017 ರಂದು ಸೆಷನ್ಸ್ ನ್ಯಾಯಾಲಯವು ತಪ್ಪಿತಸ್ಥ ಎಂದು ಘೋಷಿಸಿದಾಗಿನಿಂದ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಈ ವರ್ಷದ ಮಾರ್ಚ್‌ನಲ್ಲಿ ಬಾಂಬೆ ಹೈಕೋರ್ಟ್ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿತು. ನಂತರ ಅವರನ್ನು ಮಾರ್ಚ್ 7 ರಂದು ನಾಗ್ಪುರ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಮಾನವಹಕ್ಕುಗಳ ಹೋರಾಟಗಾರ ಆಗಿದ್ದ ಸಾಯಿಬಾಬಾ ಅವರು ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಶಂಕಿತ ಮಾವೋವಾದಿ ಸಂಪರ್ಕಕ್ಕಾಗಿ ಮಹಾರಾಷ್ಟ್ರ ಪೊಲೀಸರು ಅವರನ್ನು ಬಂಧಿಸಿದ ನಂತರ 2014 ರಲ್ಲಿ ಅಮಾನತುಗೊಳಿಸಲಾಗಿತ್ತು.

ವಿಡಿಯೊ ನೋಡಿ: ‘ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಇರುವುದರಿಂದ ಯಾವುದೇ ಉಪಯೋಗವಿಲ್ಲ’ : ವೀರಸಂಗಯ್ಯ, ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...