Homeಅಂತರಾಷ್ಟ್ರೀಯಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು - ಅಮೆರಿಕದಲ್ಲಿ ಮೋದಿ ಹೇಳಿಕೆ

ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು – ಅಮೆರಿಕದಲ್ಲಿ ಮೋದಿ ಹೇಳಿಕೆ

- Advertisement -
- Advertisement -

ಸಾಮಾನ್ಯ ಕುಟುಂಬಗಳ ಜನರನ್ನು ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಅಕ್ರಮ ವಲಸಿಗರನ್ನಾಗಿ ಮಾಡಿ ಇತರ ದೇಶಗಳಿಗೆ ಕರೆತರುವ ಮಾನವ ಕಳ್ಳಸಾಗಣೆ ಎಂಬ “ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇದು ಕೇವಲ ಭಾರತದ ಸಮಸ್ಯೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದು ಗುರುವಾರ ಮೋದಿ ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಯಾರಾದರೂ ಅಕ್ರಮವಾಗಿ ಬೇರೆ ದೇಶಕ್ಕೆ ಪ್ರವೇಶಿಸಿ ವಾಸಿಸುತ್ತಿದ್ದರೆ, ಅವರಿಗೆ ಆ ದೇಶದಲ್ಲಿ ವಾಸಿಸಲು ಯಾವುದೇ ಕಾನೂನುಬದ್ಧ ಹಕ್ಕು ಅಥವಾ ಅಧಿಕಾರವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ಅಮೆರಿಕಕ್ಕೆ ಸಂಬಂಧಿಸಿದಂತೆ ಪರಿಶೀಲಿಸಲಾದ ಭಾರತೀಯ ನಾಗರಿಕರು ಮತ್ತು ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವವರನ್ನು ಭಾರತವು ಮರಳಿ ಸ್ವೀಕರಿಸಲು ಸಿದ್ಧವಾಗಿದೆ ಎಂದು ನಾವು ಯಾವಾಗಲೂ ಹೇಳಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆದಾಗ್ಯೂ, ಈ ವಿಚಾರ ಅಲ್ಲಿಗೆ ಕೊನೆಯಗುವುದಿಲ್ಲ. ಈ ಅಕ್ರಮ ವಲಸೆಗಾರರು ತುಂಬಾ ಸಾಮಾನ್ಯ ಕುಟುಂಬಗಳ ಮಕ್ಕಳು. ಅವರಿಗೆ ದೊಡ್ಡ ಕನಸುಗಳು ಮತ್ತು ಭರವಸೆಗಳನ್ನು ನೀಡಿ ಆಕರ್ಷಿಸಲಾಗುತ್ತದೆ. ಅವರಲ್ಲಿ ಅನೇಕರನ್ನು ಮಾನವ ಕಳ್ಳಸಾಗಣೆದಾರರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ಮಾನವ ಕಳ್ಳಸಾಗಣೆ ವ್ಯವಸ್ಥೆಯ

“ಅದಕ್ಕಾಗಿಯೇ ನಾವು ಇಡೀ ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡಬೇಕು. ಅಮೆರಿಕ ಮತ್ತು ಭಾರತ ಎರಡೂ ದೇಶಗಳು ಒಟ್ಟಾಗಿ ಈ ಇಡೀ ವ್ಯವಸ್ಥೆಯನ್ನು ಬೇರುಸಹಿತ ಕಿತ್ತು ನಾಶಪಡಿಸಬೇಕು. ಹಲವು ಕನಸುಗಳನ್ನು ಕಟ್ಟಿ ಅಕ್ರಮ ವಲಸೆ ಹೋಗುವ ಬಡ ಜನರು ಎಲ್ಲವನ್ನೂ ಮಾರಾಟ ಮಾಡುತ್ತಾರೆ. ಅವರಿಗೆ ಅನ್ಯಾಯವಾಗುತ್ತಿದೆ” ಎಂದು ಮೋದಿ ಹೇಳಿದ್ದಾರೆ.

“ನಾವು ಮಾಡುತ್ತಿರುವ ಈ ಬೃಹತ್ ಹೋರಾಟ ಈ ವ್ಯವಸ್ಥೆಯ ವಿರುದ್ಧವಾಗಿದೆ. ಅಧ್ಯಕ್ಷ ಟ್ರಂಪ್ ಕೂಡ ಈ ವ್ಯವಸ್ಥೆಯನ್ನು ಕೊನೆಗೊಳಿಸುವಲ್ಲಿ ಭಾರತವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಮೋದಿ ಹೇಳಿದ್ದಾರೆ.

ಅಮೆರಿಕದಿಂದ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ಬಗ್ಗೆ ಮತ್ತು ಅವರನ್ನು ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ಮರಳಿ ಕರೆತರುವಾಗ ಸಂಕೋಲೆ ಹಾಕಿದ ಬಗ್ಗೆ ಮೋದಿ ಟ್ರಂಪ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “ಹೌದು, ಅದು (ಅಕ್ರಮ ವಲಸೆಯ ವಿಷಯ) ಇಂದಿನ ಚರ್ಚೆಯ ಸಮಯದಲ್ಲಿ ಪ್ರಸ್ತಾಪವಾಯಿತು” ಎಂದು ಹೇಳಿದ್ದಾರೆ.

ಇದನ್ನೂಓದಿ:  ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...