Homeಕರ್ನಾಟಕಹುಣಸೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ನಡುವೆ ಬಿಗ್ ಫೈಟ್: ಇವರಿಬ್ಬರಲ್ಲಿ ಜೆಡಿಎಸ್ ಯಾರನ್ನು ಗೆಲ್ಲಿಸಲಿದೆ?

ಹುಣಸೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಬಿಗ್ ಫೈಟ್: ಇವರಿಬ್ಬರಲ್ಲಿ ಜೆಡಿಎಸ್ ಯಾರನ್ನು ಗೆಲ್ಲಿಸಲಿದೆ?

- Advertisement -
- Advertisement -

ಹುಣಸೂರಿನಲ್ಲಿ ಅನರ್ಹ ಶಾಸಕ ಎಚ್.ವಿಶ್ವನಾಥ್ ಇಲ್ಲ ಇಲ್ಲ ಎನ್ನುತ್ತಲೇ ಬಿಜೆಪಿಗೆ ಹಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್ ಸಹ ಬಲಿಷ್ಠ ಅಭ್ಯರ್ಥಿ ಮಂಜುನಾಥ್‌ರನ್ನು ಕಣಕ್ಕಿಳಿಸಿದೆ. ಜೆಡಿಎಸ್ ಸೋಮಶೇಖರ್‌ರವರಿಗೆ ಟಿಕೆಟ್ ನೀಡಿದೆ.

ಎಚ್.ವಿಶ್ವನಾಥ್ ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿರುವುದರಿಂದ ತಾನೂ ಗೆದ್ದರೆ ಸಚಿವ ಸ್ಥಾನದ ಜೊತೆಗೆ ಕ್ಷೇತ್ರದ ಅಭಿವೃದ್ದಿ ಸಾಧ್ಯ ಎಂದು ಘೋಷಿಸಿದ್ದಾರೆ. ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ.ಯೋಗೀಶ್ವರ್ ಸಹ ಸದ್ಯಕ್ಕೆ ತಣ್ಣಗಾಗಿದ್ದು ವಿಶ್ವನಾಥ್ ಪರ ಮತ ಯಾಚಿಸುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕೂಡ ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ರವರ ಋಣದ ಕಾರಣಕ್ಕಾಗಿ ವಿಶ್ವನಾಥ್ ಬೆಂಬಲಿಸಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಯಲ್ಲಾಪುರ ಉಪಸಮರದಲ್ಲಿ ದೇಶಪಾಂಡೆ ಹಠಕ್ಕೆ ಹೆದರಿದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್!

ಕಾಂಗ್ರೆಸ್‌ನ ಮಂಜುನಾಥ್ ಕಳೆದ 6 ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಹತ್ತಿರ ಬಂದು ಮುಗ್ಗರಿಸಿದ್ದ ಇವರು ಈ ಬಾರಿ ಶತಾಯಗತಾಯ ಗೆಲ್ಲಲು ಪಣತೊಟ್ಟಿದ್ದಾರೆ.

ಇನ್ನು ಈ ಕ್ಷೇತ್ರದಲ್ಲಿ ಕುರುಬ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಹಜವಾಗಿಯೇ ಅವು ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಹಂಚಿಕೆಯಾಗಲಿವೆ. ಹಾಗಾಗಿಯೇ ಕುರುಬ ಮತಗಳು ತಮ್ಮಿಂದ ಕೈ ತಪ್ಪಿಹೋಗಬಾರದು ಎಂದು ಎಚ್.ವಿಶ್ವನಾಥ್‌ರವರು ಸಿದ್ದರಾಮಯ್ಯನವರನ್ನು ಟೀಕಿಸುವ ಬದಲು ಎರಡೆರಡು ಬಾರಿ ಹೊಗಳಿದ್ದಾರೆ.

ಇನ್ನು ಜೆಡಿಎಸ್‌ನ ಸೋಮಶೇಖರ್‌ರವರು ನೆಪಮಾತ್ರಕ್ಕೆ ಚುನಾವಣೆಗೆ ನಿಂತಿದ್ದು ಜೆಡಿಎಸ್ ಕೊನೆ ಕ್ಷಣದಲ್ಲಿ ಮೇಲಿನ ಇಬ್ಬರು ಅಭ್ಯರ್ಥಿಗಳಲ್ಲಿ ಒಬ್ಬರನ್ನು ಬೆಂಬಲಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಜೆಡಿಎಸ್ ಯಾರಿಗೆ ಬೆಂಬಲಿಸುತ್ತದೆಯೋ ಅವರ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...