Homeಮುಖಪುಟಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಒಂದು ವೆಂಟಿಲೇಟರ್‌ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಪಿಎಂ ಕೇರ್ಸ್‌ ಲೆಕ್ಕ ಕೇಳುವವರಿಗೆ ಉತ್ತರ ಇಲ್ಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸಂಖ್ಯೆಯ ವೆಂಟಿಲೇಟರ್ ಗಳು ಹೆಚ್ಚಾಗಿರಲಿಲ್ಲ. ನಾವೆಲ್ಲ ಕಷ್ಟಪಟ್ಟು ಸಂಪಾದಿಸಿ ಪಿಎಂ ಕೇರ್ಸ್‌ಗೆ ನೀಡಿದ ಒಂದೊಂದು ರೂಪಾಯಿಯೂ ಜನರ ಸೇವೆಗೆ ಅರ್ಪಿತವಾಗುತ್ತಿದೆ” ಎಂದು ಬರೆಯಲಾಗಿತ್ತು.

ಅದೇ ಇಂಗ್ಲಿಷ್‌ನಲ್ಲಿಯೂ ಸಹ ಅದೇ ಅರ್ಥಬರುವ ವಾಕ್ಯವೊಂದನ್ನು ಬರೆದು ಅದೇ ವೆಂಟಿಲೇಟರ್‌ ಚಿತ್ರವನ್ನು ಪೋಸ್ಟ್‌ ಮಾಡಲಾಗಿತ್ತು. ಕರ್ನಾಟಕದ ಬಿ.ಶ್ರೀರಾಮುಲು, ಸಿ.ಟಿ ರವಿ ಮತ್ತು ಬಿ.ಎಲ್‌ ಸಂತೋಷ್‌ರವರು ಟ್ವೀಟ್‌ ಮಾಡಿದ್ದು, ಒಂದೇ ವೆಂಟಿಲೇಟರ್‌ ಚಿತ್ರವನ್ನು ಬಳಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ, ಆರ್‌ಟಿಐ ಅಡಿಯಲ್ಲಿಯೂ ಇದು ಬರುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಇಂಡಿಯಾ ಸ್ಪೆಂಡ್‌ನ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಇದುವರೆಗೆ ಪಿಎಂ ಕೇರ್ಸ್ ನಿಧಿಯಲ್ಲಿ ಕನಿಷ್ಠ 9,677.90 ಕೋಟಿ ರೂ ಇದೆ. ಈ ಪೈಕಿ 4,308 ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸಿಬ್ಬಂದಿ ದೇಣಿಗೆ ನೀಡಿದ್ದಾರೆ. ಇನ್ನೂ, ನಿಧಿಯ ಬಳಕೆಯ ಬಗ್ಗೆ ಇಲ್ಲಿಯವರೆಗೆ ಮಾಡಿದ ಏಕೈಕ ಪ್ರಕಟಣೆ ಮೇ 13 ರಂದು ಮಾಡಲಾಗಿದೆ. ಅದರಲ್ಲಿ 2,000 ಕೋಟಿ ರೂ ವೆಚ್ಚದಲ್ಲಿ ಅಹ್ಮದಾಬಾದ್‌ನ ಅತಿದೊಡ್ಡ COVID-19 ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿದ ರಾಜ್‌ಕೋಟ್ ಮೂಲದ ಸಂಸ್ಥೆಯಿಂದ ಕೇಂದ್ರ ಸರ್ಕಾರವು 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈ ಯಂತ್ರಗಳು ಅಸಮರ್ಪಕವೆಂದು ಈಗಾಗಲೇ ಸಾಬೀತಾಗಿದೆ.


ಇದನ್ನೂ ಓದಿ: ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..


ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಒಂದೇ ವೆಂಟಿಲೇಟರ್‌ ಫೋಟೊ ಹಾಕಿ ಪಿಎಂ ಕೇರ್ಸ್‌ ಹಣ ಪ್ರಾಮಾಣಿಕವಾಗಿ ಬಳಸಿದ್ದೇವೆ ಎಂಬ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೆದ್ದಿದೆ.

ಪ್ರಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಈ ಬಗ್ಗೆ ಪ್ರಶ್ನೆ ಮಾಡಿದ್ದು, ಒಂದು ವೆಂಟಿಲೇಟರ್‌, ನೂರಾರು ಪ್ರಚಾರ ಎಂದು ಟೀಕಿಸಿದ್ದಾರೆ. ಅದರಲ್ಲಿ ಒಂದೇ ವೆಂಟಿಲೇಟರ್ ಅನ್ನು ನೂರಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ.

1 Ventilator 100 Publicity

Posted by Dhruv Rathee on Monday, June 15, 2020

ಇನ್ನು ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಐಟಿ ಸೆಲ್‌ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲವರು ವಿವರಣೆ ನೀಡಿದ್ದು, ಬಿಜೆಪಿ ಸರ್ಕಾರ ಕೆಲಸ ಮಾಡದಿದ್ದರೂ ಸರಿಯೇ ಸಾಮಾಜಿಕ ಮತ್ತು ಮುಖ್ಯವಾಹಿನಿ ಮಾಧ್ಯಮಗಳನ್ನು ಬಳಸಿ ಹೇಗೆ ಪ್ರಚಾರ ಪಡೆಯುತ್ತಿದೆ ನೋಡಿ ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...