Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

- Advertisement -
- Advertisement -

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಂಗೇರಿ ಅಧ್ಯಕ್ಷೆ ಕಟಲಿನ್ ನೊವಾಕ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ಕಟಲಿನ್ ನೊವಾಕ್ ಅವರು ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತರು ಕೂಡ ಆಗಿದ್ದಾರೆ. ಹಂಗೇರಿ ಅಧ್ಯಕ್ಷರ ರಾಜೀನಾಮೆ ಭಾರತದಲ್ಲಿ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಕ್ಷಮಾಧಾನ ನೀಡಿದ್ದಕ್ಕೆ ಭಾರತದಲ್ಲಿ ಜವಾಬ್ಧಾರಿಯುತ ಸ್ಥಾನದಲ್ಲಿರುವವರು ತಲೆಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಕಟಲಿನ್ ನೊವಾಕ್ ಅಲ್ಲದೆ ಮಾಜಿ ಸಚಿವೆ ಜುಡಿಟ್ ವರ್ಗಾ ಅವರು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷೀಯ ಭವನದ ಹೊರಗೆ ವಿರೋಧ ಪಕ್ಷದ ನಾಯಕರ ಪ್ರತಿಭಟನೆಗಳು ಹೆಚ್ಚುತ್ತಿರುವ ಮಧ್ಯೆ ಈ ಬೆಳವಣಿಗೆಗಳು ನಡೆದಿದೆ.

ನಾನು ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು 46ರ ಹರೆಯದ ನೊವಾಕ್ ಅವರು ಘೋಷಿಸಿದ್ದು, ಕ್ಷಮಾಧಾನ ವಿಚಾರದಲ್ಲಿ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ನಾನು ನೋಯಿಸಿದವರಿಗೆ ಮತ್ತು ನಾನು ಅವರನ್ನು ಬೆಂಬಲಿಸಲಿಲ್ಲ ಎಂಬ ಅನಿಸಿಕೆ ಹೊಂದಿರುವ ಎಲ್ಲಾ ಸಂತ್ರಸ್ತರಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ನೊವಾಕ್ ಅವರು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ್ದರು. ಅವರು ಹಂಗೇರಿಯ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಮೊದಲ ಮಹಿಳೆಯಾಗಿದ್ದರು.

ಮಕ್ಕಳ ಗೃಹವೊಂದರ ಮಾಜಿ ಉಪನಿರ್ದೇಶಕರಿಗೆ ಕ್ಷಮಾದಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು.  ಕಳೆದ ಏಪ್ರಿಲ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಬುಡಾಪೆಸ್ಟ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸ್ವತಂತ್ರ ಸುದ್ದಿ ತಾಣ 444 ಕಳೆದ ವಾರ ಈ ಬಗ್ಗೆ ವರದಿ ಮಾಡಿದ ನಂತರ ಪ್ರತಿಪಕ್ಷಗಳು ನೋವಾಕ್ ಅವರ ರಾಜೀನಾಮೆಗೆ ಕರೆ ನೀಡಿದ್ದವು. ಶುಕ್ರವಾರ ಸಂಜೆ ಪ್ರತಿಭಟನಾಕಾರರು ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದರು.

ಶುಕ್ರವಾರ ನಡೆದ ವಿಶ್ವ ವಾಟರ್ ಪೋಲೊ ಚಾಂಪಿಯನ್‌ಶಿಪ್‌ನಲ್ಲಿ ಕಜಕಿಸ್ತಾನ್ ವಿರುದ್ಧದ ಹಂಗೇರಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ಕತಾರ್‌ಗೆ ಬಂದಿದ್ದ ನೊವಾಕ್ ಬುಡಾಪೆಸ್ಟ್‌ಗೆ ಮರಳಿ ತನ್ನ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಕಟಲಿನ್ ನೊವಾಕ್ ಅವರ ರಾಜೀನಾಮೆ ಘೋಷಣೆಯ ಕೆಲವೇ ನಿಮಿಷಗಳಲ್ಲಿ ಆರ್ಬನ್‌ನ ಮತ್ತೊಬ್ಬ ಮಿತ್ರ ಜುಡಿಟ್ ವರ್ಗಾ ಕೂಡ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ನಾನು ಸಂಸದರಾಗಿ ಮತ್ತು ಯುರೋಪಿಯನ್ ಪಾರ್ಲಿಮೆಂಟ್‌ ಪಟ್ಟಿಯ ಮುಖ್ಯಸ್ಥಳಾಗಿ ನನ್ನ ಸ್ಥಾನವನ್ನು ತ್ಯಜಿಸುತ್ತೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಹೇಳಿದ್ದಾರೆ.

ವಿಕ್ಟರ್ ಓರ್ಬನ್ ಅವರ ಅನುಮೋದನೆಯಿಲ್ಲದೆ ಹಂಗೇರಿಯಲ್ಲಿ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ನಮಗೆ ತಿಳಿದಿದೆ ಎಂದು ಲಿಬರಲ್ ಮೊಮೆಂಟಮ್ ಪಕ್ಷದ ಸದಸ್ಯ ಡೊನಾತ್ ಫೇಸ್‌ಬುಕ್‌ನಲ್ಲಿ ಹೇಳಿದ್ದು, ಈ ಕ್ಷಮಾಧಾನಕ್ಕೆ ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಏನಾಯಿತು ಎಂದು ವಿವರಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆ ಬೆನ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಕೀಸ್‌ ಬಾನು ಪ್ರಕರಣ ಸದ್ದು ಮಾಡಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹಂಗೇರಿಯನ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ. ಆದರೆ ಭಾರತದಲ್ಲಿ 2002ರ ಗುಜರಾತ್‌ ಗಲಭೆಯ ವೇಳೆ ಬಲ್ಕೀಸ್‌ ಬಾನು ಸಾಮೂಹಿಕ ಅತ್ಯಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಲಾಗಿತ್ತು. ಆದರೆ ಈ ಬಗ್ಗೆ ಭಾರತದಲ್ಲಿ ಸರಕಾರದ ಭಾಗವಾಗಿರುವ ಯಾರೂ ಕೂಡ ತಲೆ ಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ ಬಿಲ್ಕೀಸ್‌ ಬಾನು ಪ್ರಕರಣದಲ್ಲಿ ಆರೋಪಿಗಳಿಗೆ ಕ್ಷಮಾಧಾನ ನೀಡಿ ಅವಧಿ ಪೂರ್ವವಾಗಿ ಬಿಡುಗಡೆ ಮಾಡಿರುವುದನ್ನು ರದ್ದುಗೊಳಿಸಿತ್ತು.ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

 

ಕ್ಲಿಪಟ್ನ ಡಿ ರೊಝಾರಿಯೋ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಹಂಗೇರಿಯನ್ ಅಧ್ಯಕ್ಷೆ, ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತ ಮಿತ್ರ ಕಟಲಿನ್ ನೊವಾಕ್ ಶನಿವಾರ ರಾಜೀನಾಮೆ ಘೋಷಿಸಿದ್ದಾರೆ.
ಆದರೆ ಭಾರತದಲ್ಲಿ ಬಿಲ್ಕಿಸ್ ಪ್ರಕರಣದಲ್ಲಿ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...