Homeಮುಖಪುಟಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: BRS ನಾಯಕಿಗೆ ಸೀತಾರಾಮ್ ಯೆಚೂರಿ ಬೆಂಬಲ

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: BRS ನಾಯಕಿಗೆ ಸೀತಾರಾಮ್ ಯೆಚೂರಿ ಬೆಂಬಲ

- Advertisement -
- Advertisement -

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ಕೋರಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ. ಕವಿತಾ ನೇತೃತ್ವದಲ್ಲಿ ಮಾರ್ಚ್ 10, 2023ರಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಭಾಗಿಯಾಗಿದ್ದರು.

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರು, ಅಬಕಾರಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುವ ಒಂದು ದಿನ ಮುಂಚಿತವಾಗಿ ಮಾರ್ಚ್ 10ರಂದು ಉಪಹಾಸ ಸತ್ಯಾಗ್ರಹ ನಡೆಸಿದರು. ಮಾರ್ಚ್ 13ರಿಂದ ಪ್ರಾರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವಂತೆ ಆಗ್ರಹಿಸಿದರು.

ನವದೆಹಲಿಯ ಜಂತರ್ ಮಂತರ್‌ನಲ್ಲಿ ಆರು ಗಂಟೆಗಳ ಧರಣಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ, ಈ ಸಂಸತ್ತಿನ ಅಧಿವೇಶನದಲ್ಲಿ ಮೋದಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಮುಷ್ಕರದಲ್ಲಿ ಶ್ಯಾಮ್ ರಜಾಕ್ (ಆರ್‌ಜೆಡಿ), ಸೀಮಾ ಶುಕ್ಲಾ (ಎಸ್‌ಪಿ), ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಮತ್ತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಮತ್ತು ಆಂಧ್ರಪ್ರದೇಶದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಹೇಶ್ ಜೋಶಿ ಸರ್ವಾಧಿಕಾರ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ

ಸಂಜಯ್ ಸಿಂಗ್ ಮತ್ತು ಚಿತ್ರ ಸರ್ವರಾ (ಎಎಪಿ), ನರೇಶ್ ಗುಜ್ರಾಲ್ (ಅಕಾಲಿದಳ), ಅಂಜುಮ್ ಜಾವೇದ್ ಮಿರ್ಜಾ (ಪಿಡಿಪಿ), ಶಮಿ ಫಿರ್ದೌಸ್ (ಎನ್‌ಸಿ), ಸುಶ್ಮಿತಾ ದೇವ್ (ಟಿಎಂಸಿ), ಕೆಸಿ ತ್ಯಾಗಿ (ಜೆಡಿಯು), ಸೀಮಾ ಮಲಿಕ್ (ಎನ್‌ಸಿಪಿ), ನಾರಾಯಣ ಕೆ ( ಸಿಪಿಐ, ಶ್ಯಾಮ್ ರಜಾಕ್ (ಆರ್‌ಎಲ್‌ಡಿ), ಪ್ರಿಯಾಂಕಾ ಚತುರ್ವೇದಿ (ಶಿವಸೇನೆ) ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಮುಷ್ಕರದ ಕೊನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

”ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲು ಈ ಮಸೂದೆಯನ್ನು ಜಾರಿಗೆ ತರುವುದು ಮುಖ್ಯವಾಗಿದೆ. ಸಂಸತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗುವವರೆಗೆ ನಮ್ಮ ಪಕ್ಷವು ಈ ಪ್ರತಿಭಟನೆಯಲ್ಲಿ ಕವಿತಾ ಅವರಿಗೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ಉದ್ಘಾಟನಾ ಭಾಷಣದಲ್ಲಿ ಯೆಚೂರಿ ಹೇಳಿದರು.

”2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಿದಾಗ ಮಹಿಳಾ ಮೀಸಲಾತಿ ಮಸೂದೆ ತಮ್ಮ ಸರ್ಕಾರದ ಆದ್ಯತೆ ಎಂದು ಹೇಳಿದ್ದರು. ಈಗ ಅವರು ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳು ಕಳೆದಿವೆ, ಆದರೂ ಈ ಮಸೂದೆಯನ್ನು ಸಂಸತ್ತಿನಲ್ಲಿ ಮತ್ತೆ ಮಂಡಿಸಲಾಗಿಲ್ಲ” ಎಂದು ಅವರು ಹೇಳಿದರು.

ಸಾಕಷ್ಟು ಹೋರಾಟಗಳು ನಡೆದ ಬಳಿಕ ಸರ್ಕಾರವು ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿತು. ”ನೀವು ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬಹುದಾದರೆ, ಸಂಸತ್ತಿನಲ್ಲಿ ಏಕೆ ನೀಡಬಾರದು?” ಎಂದು ಯೆಚೂರಿ ಪ್ರಶ್ನಿಸಿದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ನೀಡದ ಹೊರತು ದೇಶವು ಪ್ರಗತಿಯಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.

ಪ್ರಸ್ತುತ ಸಂಸತ್ತಿನ ಅಧಿವೇಶನದಲ್ಲಿ ಈ ಮಸೂದೆಯನ್ನು ತರುವುದು ಮುಖ್ಯವಾಗಿದೆ ಮತ್ತು ಈ ಪ್ರತಿಭಟನೆಯಲ್ಲಿ ಸಿಪಿಐ-ಎಂ ಬಿಆರ್‌ಎಸ್ ಪಕ್ಷದ ಜೊತೆಗೆ ನಿಲ್ಲುತ್ತದೆ ಎಂದು ಯಚೂರಿ ಅವರು ಹೇಳಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 13ರಂದು ಪ್ರಾರಂಭವಾಗಿ ಏಪ್ರಿಲ್ 6ರಂದು ಕೊನೆಗೊಳ್ಳಲಿದೆ.

”ಭಾರತ ಅಭಿವೃದ್ಧಿ ಹೊಂದಬೇಕಾದರೆ ರಾಜಕೀಯದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಬೇಕು, ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು. ಹಾಗಾಗಿ 27 ವರ್ಷಗಳಿಂದ ಬಾಕಿ ಇರುವ ಈ ಮಸೂದೆಯನ್ನು ಜಾರಿಗೆ ತರುವುದು ಮುಖ್ಯವಾಗಿದೆ” ಎಂದು ಕವಿತಾ ಹೇಳಿದರು.

“ಸುಸ್ಮಾ ಸ್ವರಾಜ್, ಸೋನಿಯಾ ಗಾಂಧಿ ಮತ್ತು ಬೃಂದಾ ಕಾರಟ್ ಅವರಂತಹ ನಾಯಕರು ಮಸೂದೆ ಜಾರಿಗಾಗಿ ಹೋರಾಟಗಳನ್ನು ನಡೆಸಿದರು. 1996ರಿಂದ ಅನೇಕ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ತರಲು ಪ್ರಯತ್ನಿಸಿದವು, ಆದರೆ ಅದನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಲಿಲ್ಲ” ಎಂದು ಅವರು ಹೇಳಿದರು.

“ಈ ಆಂದೋಲನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವೆನಿಸುತ್ತದೆ. ಮಸೂದೆಯನ್ನು ಮಂಡಿಸಿ ಅಂಗೀಕರಿಸುವವರೆಗೆ ನಾವು ಈ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ನಾನು ಭಾರತದ ಮಹಿಳೆಯರಿಗೆ ಭರವಸೆ ನೀಡುತ್ತೇನೆ” ಎಂದರು.

”ಇಂದು ಇಲ್ಲಿ ಕೇವಲ ಉಪವಾಸ ಸತ್ಯಾಗ್ರಹ ಕೇವಲ ಪ್ರಾರಂಭವಾಗಿದೆ, ಇದು ದೇಶಾದ್ಯಂತ ಈ ವಿಚಾರವಾಗಿ ಪ್ರತಿಭಟನೆಗಳು ಮುಂದುವರಿಯುತ್ತದೆ. ಕೇಂದ್ರದಲ್ಲಿ ಪೂರ್ಣ ಬಹುಮತದ ಸರ್ಕಾರವಿರುವುದರಿಂದ ಮಸೂದೆ ಅಂಗಿಕಾರಕ್ಕೆ ಸುಲಭವಾಗಲಿದೆ. ಬಿಜೆಪಿ ಸರ್ಕಾರವು ಈ ಮಸೂದೆಯನ್ನು ಅಂಗೀಕರಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಾವು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟಿಗೆ ಸೇರಿಸುತ್ತೇವೆ ಮತ್ತು ಸಂಸತ್ತಿನಲ್ಲಿ ನಿಮ್ಮನ್ನು ಬೆಂಬಲಿಸಲು ಪ್ರಯತ್ನಿಸುತ್ತೇವೆ” ಎಂದು ಕವಿತಾ ಹೇಳಿದರು.

ಆರ್‌ಜೆಡಿ ನಾಯಕ ಶ್ಯಾಮ್ ರಜಾಕ್ ಮಾತನಾಡಿ, ”ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯವಿಲ್ಲದೆ ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯವಿಲ್ಲ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇ.33ಕ್ಕಿಂತ ಹೆಚ್ಚಿರಬೇಕು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...