ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಖಾನೌರಿ ಗಡಿ ಪ್ರದೇಶದಿಂದ ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಂಗಳವಾರ ಆರೋಪಿಸಿದ್ದಾರೆ. ಉಪವಾಸ ಸತ್ಯಾಗ್ರಹಕ್ಕೆ
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ನೀಡುವ ಕಾನೂನು ಖಾತರಿಗೆ ಒತ್ತಾಯಿಸಿ ಮಂಗಳವಾರದಿಂದ ಆಮರಣಾಂತ ಉಪವಾಸ ಆರಂಭಿಸುವುದಾಗಿ ದಲ್ಲೆವಾಲ್ ಸೋಮವಾರ ಘೋಷಿಸಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅವರು ಪ್ರತಿಪಾದಿಸಿದ್ದರು. ಉಪವಾಸ ಸತ್ಯಾಗ್ರಹಕ್ಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಂಗಳವಾರ ಮುಂಜಾನೆ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುವ ಮೊದಲು ಪೊಲೀಸರು ಬಲವಂತವಾಗಿ ಅವರನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತಿಪಾದಿಸಿದ ಪಂಧೇರ್ ಅವರು ಈ ಕೃತ್ಯವನ್ನು ಬಲವಾಗಿ ಖಂಡಿಸುವುದಾಗಿ ಹೇಳಿದ್ದಾರೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಾವರು ಒತ್ತಾಯಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಆಮರಣಾಂತ ಉಪವಾಸ ಆರಂಭಿಸುವ ಮೂಲಕ ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಬೆಂಬಲಿಸಿ ತಮ್ಮ ಆಂದೋಲನವನ್ನು ತೀವ್ರಗೊಳಿಸುವ ಯೋಜನೆಯನ್ನು ಈ ಹಿಂದೆ ಘೋಷಿಸಿದ್ದವು.
ಫೆಬ್ರವರಿ 13 ರಿಂದ ದೆಹಲಿಗೆ ಮೆರವಣಿಗೆ ಮಾಡುವ ರೈತರನ್ನು ಭದ್ರತಾ ಪಡೆಗಳು ತಡೆದ ನಂತರ, ಅವರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಫೆಬ್ರವರಿ 18 ರಿಂದ ತಮ್ಮ ಸಮಸ್ಯೆಗಳ ಬಗ್ಗೆ ಕೇಂದ್ರವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಪ್ರತಿಭಟನಾನಿರತ ರೈತರು ತಮ್ಮ ಬೇಡಿಕೆಗಳನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಎಂಎಸ್‌ಪಿಗೆ ಕಾನೂನು ಖಾತರಿಯ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ಭೂಸ್ವಾಧೀನ ಕಾಯ್ದೆ 2013 ರ ಮರುಸ್ಥಾಪನೆ ಮತ್ತು 2020-21ರಲ್ಲಿ ಆಂದೋಲನದ ಅವಧಿಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ


