Homeಚಳವಳಿಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತ ಮುಖಂಡನನ್ನು ಬಲವಂತವಾಗಿ ಕರೆದೊಯ್ದ ಪೊಲೀಸರು: ರೈತ ಸಂಘ ಆರೋಪ

ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತ ಮುಖಂಡನನ್ನು ಬಲವಂತವಾಗಿ ಕರೆದೊಯ್ದ ಪೊಲೀಸರು: ರೈತ ಸಂಘ ಆರೋಪ

- Advertisement -
- Advertisement -

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಖಾನೌರಿ ಗಡಿ ಪ್ರದೇಶದಿಂದ ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಂಗಳವಾರ ಆರೋಪಿಸಿದ್ದಾರೆ. ಉಪವಾಸ ಸತ್ಯಾಗ್ರಹಕ್ಕೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ನೀಡುವ ಕಾನೂನು ಖಾತರಿಗೆ ಒತ್ತಾಯಿಸಿ ಮಂಗಳವಾರದಿಂದ ಆಮರಣಾಂತ ಉಪವಾಸ ಆರಂಭಿಸುವುದಾಗಿ ದಲ್ಲೆವಾಲ್ ಸೋಮವಾರ ಘೋಷಿಸಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅವರು ಪ್ರತಿಪಾದಿಸಿದ್ದರು. ಉಪವಾಸ ಸತ್ಯಾಗ್ರಹಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ಮುಂಜಾನೆ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುವ ಮೊದಲು ಪೊಲೀಸರು ಬಲವಂತವಾಗಿ ಅವರನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತಿಪಾದಿಸಿದ ಪಂಧೇರ್ ಅವರು ಈ ಕೃತ್ಯವನ್ನು ಬಲವಾಗಿ ಖಂಡಿಸುವುದಾಗಿ ಹೇಳಿದ್ದಾರೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಾವರು ಒತ್ತಾಯಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಆಮರಣಾಂತ ಉಪವಾಸ ಆರಂಭಿಸುವ ಮೂಲಕ ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಬೆಂಬಲಿಸಿ ತಮ್ಮ ಆಂದೋಲನವನ್ನು ತೀವ್ರಗೊಳಿಸುವ ಯೋಜನೆಯನ್ನು ಈ ಹಿಂದೆ ಘೋಷಿಸಿದ್ದವು.

ಫೆಬ್ರವರಿ 13 ರಿಂದ ದೆಹಲಿಗೆ ಮೆರವಣಿಗೆ ಮಾಡುವ ರೈತರನ್ನು ಭದ್ರತಾ ಪಡೆಗಳು ತಡೆದ ನಂತರ, ಅವರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಫೆಬ್ರವರಿ 18 ರಿಂದ ತಮ್ಮ ಸಮಸ್ಯೆಗಳ ಬಗ್ಗೆ ಕೇಂದ್ರವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಪ್ರತಿಭಟನಾನಿರತ ರೈತರು ತಮ್ಮ ಬೇಡಿಕೆಗಳನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಎಂಎಸ್‌ಪಿಗೆ ಕಾನೂನು ಖಾತರಿಯ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ಭೂಸ್ವಾಧೀನ ಕಾಯ್ದೆ 2013 ರ ಮರುಸ್ಥಾಪನೆ ಮತ್ತು 2020-21ರಲ್ಲಿ ಆಂದೋಲನದ ಅವಧಿಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...